Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ದಸರಾ ಕ್ರೀಡಾಕೂಟ ವಿಜೇತರಿಗೆ ನಗದ ಬಹುಮಾನ ಹೆಚ್ಚಳ: ಡಿಸಿಎಂ ಡಾ.ಜಿ.ಪರಮೇಶ್ವರ


ದಸರಾ ಕ್ರೀಡಾಕೂಟ ಸಿಎಂ ಕಪ್-2026ಗೆ ಚಾಲನೆ
ಮೈಸೂರು :
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಗರದ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ “ದಸರಾ ಕ್ರೀಡಾಕೂಟ ಸಿಎಂ ಕಪ್ ಗೆ ಕಂದಾಯ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಭಾನುವಾರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ನೂರಾರು ವರ್ಷಗಳ ಇತಿಹಾಸ ಹೊಂದಿರುವ ದಸರಾ ಉತ್ಸವದಲ್ಲಿ ಕ್ರೀಡೆಗೆ ಅಂದಿನ ವಿಜಯನಗರದ ಅರಸರೂ ಸೇರಿದಂತೆ ಮೈಸೂರಿನ ಅರಸರು ಪ್ರೋತ್ಸಾಹ ನೀಡುತ್ತಾ ಬಂದಿದ್ದರು. ಅದರಂತೆ ದಸರಾ ಕ್ರೀಡಾಕೂಟದ ವಿಜೇತ ಕ್ರೀಡಾಪಟುಗಳು ನಗದು ಬಹುಮಾನ ಹೆಚ್ಚಿಸಲಾಗುವುದು ಎಂದು ತಿಳಿಸಿದರು.
ನಮ್ಮ ಸರ್ಕಾರವು ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ಹಾಗೂ ಬೆಂಬಲ ನೀಡುತ್ತಿದೆ. ಅಂತಾರಾಷ್ಟಿçÃಯ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಚಿನ್ನದ ಪದಕ ವಿಜೇತರಿಗೆ 1 ಕೋಟಿ, ಬೆಳ್ಳಿ ಪದಕಕ್ಕೆ 75 ಲಕ್ಷ, ಕಂಚಿನ ಪದಕಕ್ಕೆ 50 ಲಕ್ಷ ರೂ. ಘೋಷಿಸಿದೆ. ಮುಂದಿನ ಎಲ್ಲಾ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ. 2 ರಷ್ಟು ಮೀಸಲಾತಿಯಲ್ಲಿ ಉದ್ಯೋಗ ಕಲ್ಪಿಸಲಾಗುವುದು ಎಂದು ಹೇಳಿದರು.
ಕ್ರೀಡಾಪಟು ತನ್ನ ಭವಿಷ್ಯವನ್ನು ತ್ಯಾಗಮಾಡಿ ಪದಕ ಗೆಲ್ಲಬೇಕು, ದೇಶಕ್ಕೆ ಗೌರವ ತರಬೇಕು ಎಂದು ಶ್ರಮ ಪಡುತ್ತಾರೆ. ನಾವು ನೀಡುವ ಪ್ರೋತ್ಸಾಹ ಹಣ ಅದಕ್ಕೆ ಬೆಲೆ ಕಟ್ಟಲಾಗದು. ಕ್ರೀಡೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಮೂಲಸೌಕರ್ಯ ಒದಗಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.
ಶಾಸಕ ತನ್ವೀರ್ ಸೇಠ್ ಮಾತನಾಡಿ, ರಾಷ್ಟಿçÃಯ ಮತ್ತು ಅಂತಾರಾಷ್ಟಿçÃಯ ಕ್ರೀಡೆಗೆ ಭಾಗವಹಿಸಲು ತರಬೇತಿ ಪಡೆಯುವ ಕ್ರೀಡಾಪಟುಗಳಿಗೆ ಜಿಲ್ಲಾ ಹಂತದಲ್ಲೇ ಉತ್ತಮ ಸೌಕರ್ಯ ಒದಗಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಪ್ರೇರಿಪಿಸಬೇಕು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಡಾ.ಕೆ.ಗೋವಿಂದರಾಜ್ ಮಾತನಾಡಿ, ಸರ್ಕಾರವು ಏಷ್ಯನ್ ಗೇಮ್ಸ್ನಲ್ಲಿ ವಿಜೇತರಿಗೆ ಗೌರವಧನ ಹೆಚ್ಚಿಸಿದ್ದು, ಉದ್ಯೋಗದಲ್ಲಿ ಶೇ.2 ರಷ್ಟು ಮೀಸಲಾತಿ ನೀಡುವ ಮೂಲಕ ಕ್ರೀಡಾಪಟುಗಳಮ್ನು ಪ್ರೋತ್ಸಾಹಿಸುತ್ತಿದೆ. ಈ ಕ್ರಮದಿಂದ ರಾಷ್ಟಿçÃಯ ಮತ್ತು ಅಂತಾರಾಷ್ಟಿçÃಯ ಕ್ರೀಡಾಪಟುಗಳು ಉದ್ಯೋಗ ಅರಸಿಕೊಂಡು ವಲಸೆ ಹೋಗುವುದು ತಪ್ಪಲಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ದಸರಾ ಕ್ರೀಡಾಕೂಟದ ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಗಾಲ್ಫ್ ಕ್ರೀಡಾಪಟು ಪ್ರಣವಿ ಎಸ್. ಅರಸ್ ಹಾಗೂ ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತೆ ಪ್ಯಾರಾ ಅಥ್ಲೆಟಿಕ್ಸ್ ಕ್ರೀಡಾಪಟು ಶಿಲ್ಪಾ ಕೆ.ಎಸ್ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಪಶುಸಂಗೋಪನಾ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರು, ಶಾಸಕರಾದ ಡಿ.ರವಿಶಂಕರ್, ಅನಿಲ್ ಚಿಕ್ಕಮಾದು, ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಮಾಚಯ್ಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ , ಆಯುಕ್ತ ಎಂ.ಎನ್.ಅನುಚೇತ್, ಜಿಲ್ಲಾಧಿಕಾರಿ ಜಿ.ಲಕ್ಷಿ÷್ಮÃಕಾಂತ ರೆಡ್ಡಿ , ಜಂಟಿ ನಿರ್ದೇಶಕ ಜಿತೇಂದ್ರ ಶೆಟ್ಟಿ , ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು