Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸಂವಿಧಾನ ದಿನಾಚರಣೆಯ ಅಂಗವಾಗಿ ನ.26 ಮತ್ತು 27ರಂದು ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜನೆ; ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ


ಮೈಸೂರು: ಸಂವಿಧಾನ ದಿನಾಚರಣೆಯ ಅಂಗವಾಗಿ ನ.26 ಮತ್ತು 27ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನನಲ್ಲಿ ಎರಡು ದಿನಗಳ ರಾಷ್ಟಿçÃಯ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ಮಾಜಿ ಸಚಿವ , ಶಾಸಕ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.
ಸೋಮವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ವಿಭಾಗದ ಐದಾರು ಜಿಲ್ಲೆಗಳ ಪ್ರಗತಿಪರ ಚಿಂತಕರು, ಸ್ನೇಹಿತರು, ಹೋರಾಟಗಾರರು, ಬುದ್ಧಿಜೀವಿಗಳೊಂದಿಗೆ ಸಮಾಲೋಚನೆ ನಡೆಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದೇಶದಲ್ಲಿ ಆಗುತ್ತಿರುವ ಆಡಳಿತಾತ್ಮಕ ದೋಷಗಳು, ಪ್ರಜಾಸತ್ತಾತ್ಮಕ ನಿಲುವುಗಳು, ಸಂವಿಧಾನದ ಆಶಯಗಳು ಹಾಗೂ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಲು ದಲಿತ ಸಂಘಟನೆಗಳ ಐಕ್ಯತಾ ಸಮಿತಿ, ಸಂವಿಧಾನ ಸಂರಕ್ಷಣಾ ಸಮಿತಿ, ಸಂವಿಧಾನ ಜನಾಂದೋಲನ ಸಮಿತಿ ವತಿಯಿಂದ ಈ ಸಮ್ಮೇಳನ ಆಯೋಜಿಸಲಾಗಿದೆ ಎಂದರು.
ಸAವಿಧಾನ ಜಾರಿಗೆ ಬರುವ ಮುನ್ನವೇ, ಸ್ವಾತಂತ್ರ÷್ಯ ಪೂರ್ವದಲ್ಲೇ ಸಾಮಾಜಿಕ ನ್ಯಾಯ, ಪ್ರಜಾಪ್ರತಿನಿಧಿ ಕಾಯ್ದೆ ಹಾಗೂ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡುವ ಮೂಲಕ ಮಹಾತ್ಮ ಗಾಂಧೀಜಿಯವರಿAದ ರಾಜರ್ಷಿ ಎಂದು ಕರೆಸಿಕೊಂಡ ನಾಲ್ವಡಿ ಕೃಷ್ಣರಾಜ ಒಡೆಯರ್ ಇಡೀ ದೇಶಕ್ಕೆ ಮಾದರಿಯಾದ ಆಡಳಿತ ನೀಡಿದ್ದರು. ಅವರ ಹೆಜ್ಜೆ ಗುರುತುಗಳನ್ನು ಸ್ಮರಿಸುತ್ತಾ ಮೈಸೂರಿನಲ್ಲಿಯೇ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿಶ್ರಾಂತ ಮುಖ್ಯ ಚುನಾವಣಾ ಆಯುಕ್ತ ಡಾ.ಶಹಬುದ್ದೀನ್ ಖುರೇಷಿ ಸಮ್ಮೇಳನ ಉದ್ಘಾಟಿಸಲಿದ್ದು, ಮಾಜಿ ಸಭಾಪತಿ ಕೆ.ಆರ್.ರಮೇಶ್‌ಕುಮಾರ್ ಸಮಾರೋಪ ಭಾಷಣ ಮಾಡುವರು ಎಂದರು.
ವರ್ಷವಿಡೀ ಕಾರ್ಯಕ್ರಮ: 3 ಪ್ರಮುಖ ಪೂಣಾಧಿವೇಶ, 6 ಸಮಾನಾಂತರ ಗೋಷ್ಠಿಗಳು ಇರಲಿವೆ. ಸಂವಿಧಾನದ ಆಶಯಗಳು, ಪ್ರಜಾಸತ್ತಾತ್ಮಕ ನಿಲುವುಗಳು, ಸ್ವಾಯತ್ತ ಸಂಸ್ಥೆಗಳ ಕಾರ್ಯವೈಖರಿ, ಮಹಿಳೆಯರು, ಅಲ್ಪಸಂಖ್ಯಾತರು, ಕಾರ್ಮಿಕ ಹಾಗೂ ಕೃಷಿ ಸಮಸ್ಯೆಗಳು, ಸಾಮಾಜಿಕ ನ್ಯಾಯ ಮತ್ತು ಮೀಸಲಾತಿ ಕುರಿತು ಎರಡು ದಿನಗಳ ಕಾಲ ಸಮಗ್ರ ಚರ್ಚೆ ನಡೆಯಲಿದೆ. ಎಸ್‌ಐಆರ್ ಪ್ರಜಾಪ್ರಭುತ್ವ ಬೇರನ್ನೇ ಅಲುಗಾಡಿಸುತ್ತಿದ್ದು, ಇದರ ಕುರಿತೂ ಚರ್ಚಿಸಲಾಗುವುದು ಸಂಜೆ ಸಾಂಸ್ಕöÈತಿಕ ಕಾರ್ಯಕ್ರಮಗಳು ಇರಲಿದ್ದು, 27ರಿಂದ ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಸಂವಿಧಾನದ ಪ್ರಚಾರಯಾನ ನಡೆಯಲಿದೆ. ನ.25ರಂದು ಬೆಂಗಳೂರಿನಿAದ ಮೈಸೂರಿಗೆ ಸಂವಿಧಾನದ ಸ್ತಬ್ಧಚಿತ್ರ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಅಲ್ಲದೆ ಈ ಕಾರ್ಯಕ್ರಮವನ್ನು ವರ್ಷವಿಡೀ ಆಚರಿಸಲು ತೀರ್ಮಾನಿಸಿದ್ದು, 31 ಜಿಲ್ಲೆಗಳಲ್ಲೂ ಆಯೋಜಿಸಲಾಗುತ್ತಿದೆ. 2027ರಲ್ಲಿ ಬೆಂಗಳೂರಿನ ಸ್ವಾತಂತ್ರ÷್ಯ ಉದ್ಯಾನವನದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಹರಿಹರ ಆನಂದಸ್ವಾಮಿ, ಕೊಸಕೋಟೆ ಬಸವರಾಜು, ಎನ್.ಭಾಸ್ಕರ್, ವಡ್ಡಗೆರೆ ಚಿನ್ನಸ್ವಾಮಿ ಇದ್ದರು.

————ಕೋಟ್—-
ದೇಶಕ್ಕೆ ಸ್ವಾತಂತ್ರ÷್ಯ ಬಂದು 80 ವರ್ಷಗಳಾದರೂ ಸಂವಿಧಾನ ಪರಿಪೂರ್ಣವಾಗಿ ಜಾರಿಯಾಗಿಲ್ಲ. ಯುವಕರ ಭವಿಷ್ಯ, ಪ್ರಜಾಪ್ರಭುತ್ವದ ಬೇರುಗಳನ್ನು ಗಟ್ಟಿಗೊಳಿಸಲು ಪ್ರತಿಯೊಬ್ಬ ಪ್ರಜೆಯೂ ಜಾಗೃತರಾಗಬೇಕು. ಇದಕ್ಕಾಗಿ ಎರಡನೇ ಸ್ವಾತಂತ್ರ÷್ಯ ಸಂಗ್ರಾಮದ ಮಾದರಿಯಲ್ಲಿ ಚಳವಳಿಯಾಗಬೇಕು. ಈ ಸಮ್ಮೇಳನದಲ್ಲಿ ಯಾವುದೇ ರಾಜಕೀಯ ಅಜೆಂಡಾ ಇರುವುದಿಲ್ಲ. ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಬೇಕಿದೆ.
-ಡಾ.ಎಚ್.ಸಿ.ಮಹದೇವಪ್ಪ, ಮಾಜಿ ಸಚಿವ

ಬಾಕ್ಸ್

ಯಾವುದೇ ವ್ಯಕ್ತಿಯ ಪ್ರಶ್ನೆ ಬರುವುದಿಲ್ಲ
ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಹಾಗೂ ಸಿದ್ದರಾಮಯ್ಯ ನಡುವಿನ ರಾಜಕೀಯ ಬಿರುಕು ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನ.26 ಮತ್ತು 27ರಂದು ಮೈಸೂರಿನಲ್ಲಿ ಆಯೋಜಿಸಲಾಗಿರುವ ಬೃಹತ್ ರಾಷ್ಟಿçÃಯ ಸಮ್ಮೇಳನಕ್ಕೆ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿಲ್ಲ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹದೇವಪ್ಪ, ಇಲ್ಲಿ ಯಾವುದೇ ವ್ಯಕ್ತಿಯ ಪ್ರಶ್ನೆ ಬರುವುದಿಲ್ಲ, ಸಂವಿಧಾನ ರಕ್ಷಕರೆಲ್ಲರೂ ಭಾಗವಹಿಸುತ್ತಾರೆ ಎಂದ ಅವರು, ಸ್ನೇಹಿತ ಎಂದಿಗೂ ಸ್ನೇಹಿತನೆ. ಇಂದು ನಾನು ಬೇರೆ ಏನನ್ನೂ ಹೇಳುವುದಿಲ್ಲ ಎಂದರು.