Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ರಾಜ್ಯದಲ್ಲಿ ಜನಪ್ರತಿನಿಧಿಗಳನ್ನೂ ಭಯಪಡಿಸುವ ಕೆಲಸಗಳು ನಡೆಯುತ್ತಿವೆ; ಸಚಿವ ಸಿ.ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಜನಪ್ರತಿನಿಧಿಗಳನ್ನೂ ಭಯಪಡಿಸುವ ಕೆಲಸಗಳು ನಡೆಯುತ್ತಿವೆ ಎಂದು ಸಚಿವ ಸಿ.ಪುಟ್ಟರಂಗಶೆಟ್ಟಿ ಅಸಮಾಧಾನ ವ್ಯಕ್ತಪಡಿಸಿದರು.ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬAಧಿಸಿದAತೆ ಮಂಗಳವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,“ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು ನನಗೆ ಗೊತ್ತಿಲ್ಲ. ಈ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನೇ ಕೇಳಬೇಕು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ್ಯಾಯಾಲಯದಿಂದ ತಡೆಯಾಜ್ಞೆ ಕೋರುತ್ತಿರುವ ವಿಚಾರ ಬೇರೆ” ಎಂದು ಹೇಳಿದರು.ತಮ್ಮ ವಿರುದ್ಧವೂ ಈ ಹಿಂದೆ ಆರೋಪಗಳು ಬಂದಿದ್ದವು, ದೂರು ನೀಡಿ ಆರೋಪಿಗಳ ಬಂಧನ ಮಾಡಿಸಿದ್ದಾಗಿ ತಿಳಿಸಿದರು.ರಾಜ್ಯದಲ್ಲಿ ಯಾವ ರೀತಿಯ…

Read More

17.65 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಶಾಸಕ ಅನಿಲ್ ಚಿಕ್ಕಮಾದು ಗುದ್ದಲಿ ಪೂಜೆ

ಎಚ್ .ಡಿ.ಕೋಟೆ: ಲೂಕಿನ ಅಣ್ಣೂರು, ಪಡುಕೋಟೆ, ಪಂಚಾಯತ್ ವ್ಯಾಪ್ತಿಯ ಸುಮಾರು 8 ಹಳ್ಳಿಗಳಳ್ಳಿ  ಸುಮಾರು 17. 65 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅನಿಲ್ ಚಿಕ್ಕಮಾದು ಗುದ್ದಲಿಪೂಜೆ ನೆರವೇರಿಸಿದರು.  ವಿಶ್ವಕರ್ಮ ಕಾಲೋನಿ ಚಿಕ್ಕಪಡುಕೋಟೆ, ಭಾರತೀಪುರ, ಪಡುಕೋಟೆ, ಎಲೆಹುಂಡಿ, ಗಾಂಧಿನಗರ, ಇಂದಿರಾ ನಗರ, ಪಡುಕೋಟೆ, ಕೆ ಎಡತೊರೆ, ಕೈಲಾಸಪುರ, ಹಾಗೂ ಸುತ್ತಮುತ್ತಲಿನ ಅನೇಕ ಗ್ರಾಮಗಳಿಗೆ ವಿದ್ಯುತ್/ ವೋಲ್ಟೇಜ್  ಸ್ಥಿತಿಯನ್ನು ಸುಧಾರಿಸುವುದು ಮತ್ತು ಅಡಚಣೆ ರಹಿತ ವಿದ್ಯುತ್ ಪೂರೈಕೆ ಮಾಡುವುದು ಮತ್ತು ಈ ಭಾಗದ ರೈತರಿಗೆ ಮತ್ತು…

Read More

ಸಿದ್ದರಾಮಯ್ಯನವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ, ಅಪಪ್ರಚಾರ ನೋಡಿಕೊಂಡು ಸುಮ್ಮನಿರಲು ಆಗಲ್ಲ; ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ನಮ್ಮ ತಂದೆಯವರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ. ಅಪಪ್ರಚಾರ ನೋಡಿಕೊಂಡು ಸುಮ್ಮನಿರಲು ಆಗಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವಿರುದ್ಧದ ಅವಹೇಳನಕಾರಿ ವಿಡಿಯೋ ಪ್ರಸಾರಕ್ಕೆ ತಡೆ ಕೋರಿ ನ್ಯಾಯಾಲಯದ ಮೊರೆ ಹೋಗಿರುವ ವಿಚಾರಕ್ಕೆ ಸಂಬAಧಿಸಿದAತೆ, ಮಂಗಳವಾರ ಮೈಸೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು,ಇನ್‌ಸ್ಟಾಗ್ರಾಂನಲ್ಲಿ ಹರಿದಾಡುತ್ತಿರುವ ವಿಡಿಯೋ ಸುಳ್ಳಾಗಿದ್ದು, ನಮ್ಮ ತಂದೆಯವರ ವಿರುದ್ಧ ಅಪಪ್ರಚಾರ ಮತ್ತು ತೇಜೋವಧೆ ಮಾಡುವ ಷಡ್ಯಂತ್ರ ನಡೆಯುತ್ತಿದೆ ಎಂದು ಕಿಡಿಕಾರಿದರು.ಸುಳ್ಳು…

Read More

ದಸರಾ ಪುಸ್ತಕ ಮೇಳದಲ್ಲಿ ವಿವಿಧ ಲೇಖಕರ ಕೃತಿಗಳ ಲೋಕಾರ್ಪಣೆ

ಮೈಸೂರು; ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಮೈಸೂರು ದಸರಾ ಮಹೋತ್ಸವ ಸಮಿತಿ 2026 ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳದ ರಾಷ್ಟçಕವಿ ಡಾ. ಜಿ ಎಸ್. ಶಿವರುದ್ರಪ್ಪ ಸಾಂಸ್ಕöÈತಿಕ ವೇದಿಕೆಯಲ್ಲಿ ವಿವಿಧ ಲೇಖಕರ ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಯಿತು.ನಗರದ ಸ್ಕೌಟ್ ಮತ್ತು ಗೈಡ್ ಮೈದಾನದಲ್ಲಿ ನಡೆಯುತ್ತಿರುವ ದಸರಾ ಪುಸ್ತಕ ಮೇಳದಲ್ಲಿ ನಡೆದ ಕಾರ್ಯಕ್ರಮದಲ್ಲಿಹಿರಿಯ ಪತ್ರಕರ್ತ ಅಂಶಿ ಪ್ರಸನ್ನ ಕುಮಾರ್ ಪುಸ್ತಕ ಬಿಡುಗಡೆ ಮಾಡಿದರು. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಡಾ. ಬಿ ಸಿ…

Read More

ನಾಡ ಹಬ್ಬ ಮೈಸೂರು ದಸರಾದಲ್ಲಿ ಮಹಿಳೆಯರ ಕಲರವ

ಮೈಸೂರು: ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮೂರನೇ ದಿನವಾದ ಮಂಗಳವಾರ ಕಳೆಗಟ್ಟಿದ್ದು, ಇಂದು ಮಹಿಳಾ ದಸರಾಗೆ ಚಾಲನೆ ನೀಡಲಾಯಿತು. ನಗರದ ಜೆ.ಕೆ.ಮೈದಾನದಲ್ಲಿ ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಮಹಿಳಾ ದಸರಾಗೆ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮಹಿಳೆಯರೇ ಈ ಸಮಾಜದ ಶಕ್ತಿ ಹಾಗೂ ಕುಟುಂಬದ ಆಧಾರ ಸ್ತಂಭ ಹಾಗಾಗಿ ಮಹಿಳೆಯರಿಗೆ ಎಲ್ಲಾ ಕ್ಷೇತ್ರಗಳಲ್ಲಿ ಹೆಚ್ಚಿನ ಅವಕಾಶ ಸಿಗಬೇಕು ಎಂದು ಹೇಳಿದರು.ಮಹಿಳೆಯರಿಗೆ…

Read More

ದಸರಾ ಕ್ರೀಡಾಕೂಟ ನಾಡಿನ ಹೆಮ್ಮೆ: ಅಭಿನವ ಶ್ರೀ ಗವಿಸಿದ್ದೇಶ್ವರ ಶ್ರೀ ಸ್ವಾಮಿ

ಮೈಸೂರು: ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ರಾಜ್ಯದ 4500 ಕ್ಕಿಂತ ಹೆಚ್ಚು ಕ್ರೀಡಾಪಟುಗಳು ಸಿ.ಎಂ. ಕಪ್ ಮೈಸೂರು ದಸರಾ ಕ್ರೀಡಾಕೂಟದಲ್ಲಿ ಪಾಲ್ಗೊಂಡು ನಾಡಿನ ಕೀರ್ತಿಯನ್ನು ದೇಶದಾದ್ಯಂತ ಪಸರಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಈ ವರ್ಷದ ಮೈಸೂರು ದಸರಾ ಉದ್ಘಾಟಕರಾದ ಕೊಪ್ಪಳ ಗವಿಮಠ ಸಂಸ್ಥಾನದ ಅಭಿನವಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿ ಹೇಳಿದರು.ಮಂಗಳವಾರ ನಗರದ ಚಾಮುಂಡಿ ವಿಹಾರ ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಅವರು, ಮೊದಲಿಗೆ ಒಳಾಂಗಣ ಕ್ರೀಡಾಂಗಣದಲ್ಲಿ ಬೆಂಗಳೂರು ಗ್ರಾಮಾಂತರ ಮತ್ತು…

Read More

ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿ

ನಂಜನಗೂಡು: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ದಾರುಣ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಹಂಚಿಪುರ ಗ್ರಾಮದಲ್ಲಿ ನಡೆದಿದೆ.ಗ್ರಾಮದ ನಿವಾಸಿಯಾದ ಶಿವಕುಮಾರ್ (60) ಸಾವಿಗೀಡಾದವರು. ಇವರು ತಮ್ಮ ಜಮೀನಿನ ಕಾವಲು ಕಾಯಲು ತೆರಳಿದ್ದು, ಮುಂಜಾನೆ ಜಮೀನಿನಿಂದ ಮನೆಗೆ ವಾಪಸ್ ಬರುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ್ದು, ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಗ್ರಾಮಸ್ಥರು ಜಮಾಯಿಸಿದ್ದು, ಗ್ರಾಮದಲ್ಲಿ ಆ*ತಂಕದ ವಾತಾವರಣ ನಿರ್ಮಾಣವಾಗಿದೆ.ಕಾಡಾನೆಗಳ ಹಾವಳಿಯಿಂದಾಗಿ ಗ್ರಾಮೀಣ ಪ್ರದೇಶಗಳಲ್ಲಿ ಜನರ ಜೀವಕ್ಕೆ ಅಪಾಯ ಎದುರಾಗುತ್ತಿದ್ದು, ಅರಣ್ಯ ಇಲಾಖೆ ಸೂಕ್ತ ಮುನ್ನೆಚ್ಚರಿಕೆ…

Read More

ಕಾಂಗ್ರೆಸ್ ಕೂಟದ ಪ್ರತಿಭಟನೆಯಲ್ಲಿ ನಮ್ಮ ರಾಜ್ಯದ ಮುಖ್ಯಮಂತ್ರಿಗೆ ಅವಮಾನ ಮಾಡಿರುವುದು ಖಂಡನೀಯ; ತೋಟದಪ್ಪ ಬಸವರಾಜು

ಮೈಸೂರು; ಎಸ್‌ಐಆರ್ ವಿರುದ್ಧ ದೆಹಲಿಯಲ್ಲಿ ನಡೆಸುತ್ತಿರುವ ಕಾಂಗ್ರೆಸ್ ಕೂಟದ ಪ್ರತಿಭಟನೆ ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ಮಾಡುತ್ತಿರುವ ಅಪಮಾನವಾಗಿದೆ ಎಂದು ವರುಣ ಕ್ಷೇತ್ರದ ಬಿಜೆಪಿ ಮುಖಂಡ ತೋಟದಪ್ಪ ಬಸವರಾಜು ಕಿಡಿಕಾರಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್ ಕೂಟದ ಈ ಹೋರಾಟ ಖಂಡನೀಯ. ಇದು ದೇಶದ್ರೋಹದ ಪ್ರತಿಭಟನೆಯಾಗಿದೆ ಎಂದು ಹೇಳಿದ್ದಾರೆ.ದೆಹಲಿಯ ಪ್ರತಿಭಟನಾ ಮೆರವಣಿಗೆ ಸಂದರ್ಭದಲ್ಲಿ ರಾಹುಲ್ ಗಾಂಧಿ ನಮ್ಮ ರಾಜ್ಯದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಎಳೆದು ಹಿಂದಕ್ಕೆ ತಳ್ಳಿ, ಕೇವಲ ಮಾಧ್ಯಮಕ್ಕೆ ಪೋಸ್ ನೀಡುವ ಪ್ರಚಾರದ…

Read More

ದಸರಾ ಕ್ರೀಡಾಕೂಟ ಸಿ.ಎಂ ಕಪ್ ಸ್ಪರ್ಧೆಯಲ್ಲಿ ನೂತನ ದಾಖಲೆ

ಮೈಸೂರು: ನಾಡ ಹಬ್ಬ ದಸರಾ ನಿಮಿತ್ಯವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಥ್ಲೇಟಿಕ್ಸ್ ಕ್ರೀಡಾಕೂಟದಲ್ಲಿ ರಾಜ್ಯದ 5 ವಿಭಾಗಗಳ ಕ್ರೀಡಾ ಪಟುಗಳು ಕಳೆದ ವರ್ಷದ ದಾಖಲೆಯನ್ನು ಮುರಿದು ಹೊಸ ದಾಖಲೆ ನಿರ್ಮಿಸಿದ್ದಾರೆ.ಬೆಂಗಳೂರು ನಗರ ವಿಭಾಗದ ಪ್ರಸನ್ನಕುಮಾರ ವಿ.ಎಮ್ 200 ಮೀ ಓಟ ಸ್ಪರ್ಧೆ ಪುರುಷರ ವಿಭಾಗದಲ್ಲಿ 2024 ರಲ್ಲಿ ಬೆಂಗಳೂರು ನಗರ ವಿಭಾಗದ ಪ್ರಸನ್ನಕುರಮಾರ 21.56 ಸೆಕೆಂಡನಲ್ಲಿ ಓಡಿದ ದಾಖಲೆಯನ್ನು 21.35 ಸೆಕೆಂಡನಲ್ಲಿ ಕ್ರಮೀಸಿ ಹೊಸದಾಖಲೆ ನಿರ್ಮಿಸಿದ್ದಾರೆ.ಬೆಂಗಳೂರು…

Read More

ಶುದ್ಧ ಕುಡಿಯುವ ನೀರು ಪೂರೈಕೆ ಹಾಗೂ ನಗರ ಪ್ರದೇಶಗಳ ಸ್ವಚ್ಛತೆ ಆದ್ಯತೆ; ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು; ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳು, ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿನ ಪೂರೈಕೆ ಹಾಗೂ ನಗರಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯೆತೆ ನೀಡುವ ಮೂಲಕ, ನಗರಗಳ ಸರ್ವಾಂಗೀಣ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.ಮಂಗಳವಾರ ನಗರದ ಜಿಲ್ಲಾ ಪಂಚಾಯತ್‌ನ ಮಿನಿ ಸಭಾಂಗಣದಲ್ಲಿ ನಡೆದ ಕುಡಿಯುವ ನೀರು ಮತ್ತು ಘನ ತ್ಯಾಜ್ಯ ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಘನ ತಾಜ್ಯ…

Read More