
ಮೈಸೂರು: ರಾಜ್ಯದಲ್ಲಿ ಜನಪ್ರತಿನಿಧಿಗಳನ್ನೂ ಭಯಪಡಿಸುವ ಕೆಲಸಗಳು ನಡೆಯುತ್ತಿವೆ ಎಂದು ಸಚಿವ ಸಿ.ಪುಟ್ಟರಂಗಶೆಟ್ಟಿ ಅಸಮಾಧಾನ ವ್ಯಕ್ತಪಡಿಸಿದರು.
ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬAಧಿಸಿದAತೆ ಮಂಗಳವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
“ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು ನನಗೆ ಗೊತ್ತಿಲ್ಲ. ಈ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನೇ ಕೇಳಬೇಕು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ್ಯಾಯಾಲಯದಿಂದ ತಡೆಯಾಜ್ಞೆ ಕೋರುತ್ತಿರುವ ವಿಚಾರ ಬೇರೆ” ಎಂದು ಹೇಳಿದರು.
ತಮ್ಮ ವಿರುದ್ಧವೂ ಈ ಹಿಂದೆ ಆರೋಪಗಳು ಬಂದಿದ್ದವು, ದೂರು ನೀಡಿ ಆರೋಪಿಗಳ ಬಂಧನ ಮಾಡಿಸಿದ್ದಾಗಿ ತಿಳಿಸಿದರು.
ರಾಜ್ಯದಲ್ಲಿ ಯಾವ ರೀತಿಯ ಬೆಳವಣಿಗೆಗಳು ನಡೆಯುತ್ತಿವೆ ಎಂಬುದು ಎಲ್ಲರಿಗೂ ಗೊತ್ತಿದೆ. ಇಂತಹ ಬೆಳವಣಿಗೆಗಳು ಸರಿಯಲ್ಲ. ಸಮಾಜಕ್ಕೂ ಒಳ್ಳೆಯದಲ್ಲ ಎಂದರು.