
ಮೈಸೂರು; ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಮೈಸೂರು ದಸರಾ ಮಹೋತ್ಸವ ಸಮಿತಿ 2026 ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳದ ರಾಷ್ಟçಕವಿ ಡಾ. ಜಿ ಎಸ್. ಶಿವರುದ್ರಪ್ಪ ಸಾಂಸ್ಕöÈತಿಕ ವೇದಿಕೆಯಲ್ಲಿ ವಿವಿಧ ಲೇಖಕರ ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಯಿತು.
ನಗರದ ಸ್ಕೌಟ್ ಮತ್ತು ಗೈಡ್ ಮೈದಾನದಲ್ಲಿ ನಡೆಯುತ್ತಿರುವ ದಸರಾ ಪುಸ್ತಕ ಮೇಳದಲ್ಲಿ ನಡೆದ ಕಾರ್ಯಕ್ರಮದಲ್ಲಿ
ಹಿರಿಯ ಪತ್ರಕರ್ತ ಅಂಶಿ ಪ್ರಸನ್ನ ಕುಮಾರ್ ಪುಸ್ತಕ ಬಿಡುಗಡೆ ಮಾಡಿದರು. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಡಾ. ಬಿ ಸಿ ಕುಶಾಲ ಸದಸ್ಯರು ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಕೃತಿಗಳ ಲೇಖಕರಾದ ಡಾ.ಪ್ರಸಾದಸ್ವಾಮಿ ಎಸ್. , ಡಾ. ಪಳನಿಸ್ವಾಮಿ ಮೂಡುಗೂರು, ಶ್ರೀ ಬಾಲಮುರಳೀಧರ್ ವಿ. ಉಪಸ್ಥಿತರಿದ್ದರು.