
ಮೈಸೂರು: ನಮ್ಮ ತಂದೆಯವರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ. ಅಪಪ್ರಚಾರ ನೋಡಿಕೊಂಡು ಸುಮ್ಮನಿರಲು ಆಗಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವಿರುದ್ಧದ ಅವಹೇಳನಕಾರಿ ವಿಡಿಯೋ ಪ್ರಸಾರಕ್ಕೆ ತಡೆ ಕೋರಿ ನ್ಯಾಯಾಲಯದ ಮೊರೆ ಹೋಗಿರುವ ವಿಚಾರಕ್ಕೆ ಸಂಬAಧಿಸಿದAತೆ, ಮಂಗಳವಾರ ಮೈಸೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು,
ಇನ್ಸ್ಟಾಗ್ರಾಂನಲ್ಲಿ ಹರಿದಾಡುತ್ತಿರುವ ವಿಡಿಯೋ ಸುಳ್ಳಾಗಿದ್ದು, ನಮ್ಮ ತಂದೆಯವರ ವಿರುದ್ಧ ಅಪಪ್ರಚಾರ ಮತ್ತು ತೇಜೋವಧೆ ಮಾಡುವ ಷಡ್ಯಂತ್ರ ನಡೆಯುತ್ತಿದೆ ಎಂದು ಕಿಡಿಕಾರಿದರು.ಸುಳ್ಳು ವಿಡಿಯೋ ಎಲ್ಲೆಡೆ ಹರಡಿದಾಗ, ಅದನ್ನು ನೋಡುವ ಜನರು ನಿಜವೆಂದು ನಂಬುವ ಸಾಧ್ಯತೆ ಇದೆ. ಹೀಗಾಗಿ ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ. ವಿಡಿಯೋ ಪ್ರಕಟಿಸಿದವರು ಹಾಗೂ ಸುಳ್ಳು ಮಾಹಿತಿ ಹರಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬುದು ತಂದೆಯವರ ನಿಲುವು'' ಎಂದು ಹೇಳಿದರು. ವಿಡಿಯೋ ಗಮನಕ್ಕೆ ಬಂದ ಸಂದರ್ಭದಲ್ಲೇ ಸಿದ್ದರಾಮಯ್ಯ ಅವರು ಕುಟುಂಬದವರೊAದಿಗೆ ಚರ್ಚಿಸಿದ್ದರು. ದೂರು ನೀಡುವುದಾಗಿ ತಿಳಿಸಿದ್ದ ಅವರು, ಕಾನೂನು ಸಲಹೆಗಾರರ ಸಲಹೆ ಪಡೆದು ದೂರು ಸಲ್ಲಿಸಿದ್ದಾರೆ. ಜೊತೆಗೆ ವಿಡಿಯೋ ಪ್ರಸಾರಕ್ಕೆ ತಡೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿಸಿದರು. `ತಡೆಯಾಜ್ಞೆ ಕೋರುವುದಷ್ಟೇ ಅಲ್ಲ, ಸುಳ್ಳು ವಿಡಿಯೋ ಹರಿಬಿಡುತ್ತಿರುವವರ ವಿರುದ್ಧ ಪ್ರಕರಣವನ್ನೂ ದಾಖಲಿಸುತ್ತೇವೆ. ಇಂದಿನ ರಾಜಕೀಯ ಪರಿಸ್ಥಿತಿ ಕೆಳಮಟ್ಟಕ್ಕೆ ಇಳಿದಿದೆ. ಸ್ಟಿಂಗ್ ಆಪರೇಷನ್ ಎಂಬ ಹೆಸರಿನಲ್ಲಿ ಆರೋಪ ಮಾಡಿಸಲಾಗುತ್ತಿದೆ. ಸಿದ್ದರಾಮಯ್ಯ ಅವರಂತಹ ದೊಡ್ಡ ನಾಯಕರೂ ಇಂತಹ ಆರೋಪಗಳನ್ನು ಎದುರಿಸಬೇಕಾಗಿದೆ'' ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ವಿಚಾರದಿಂದ ಕುಟುಂಬಕ್ಕೆ ಬೇಸರವಾಗಿಲ್ಲ, ತಪುö್ಪ ಮಾಡಿದ್ದರೆ ಬೇಸರವಾಗುತ್ತಿತ್ತು. ರಾಜಕೀಯಕ್ಕೆ ಬಂದ ಮೇಲೆ ಇಂತಹ ಸಂದರ್ಭಗಳನ್ನು ಎದುರಿಸಬೇಕಾಗುತ್ತದೆ. ನಾವು ಇದನ್ನು ಎದುರಿಸುತ್ತೇವೆ” ಎಂದರು.
“ನಾನು ಮತ್ತು ತಾಯಿ ಮೈಸೂರಿನಲ್ಲಿರುವುದರಿಂದ ತಂದೆಯವರು ಬಂದಿದ್ದಾರೆ. ದಸರಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆಯೇ ಎಂಬುದು ನನಗೆ ತಿಳಿದಿಲ್ಲ” ಎಂದು ತಿಳಿಸಿದರು.