
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ “ದಸರಾ ಕ್ರೀಡಾಕೂಟ ಸಿಎಂ ಕಪ್-2026″ರ ವಿಜೇತರಿಗೆ ಬುಧವಾರ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು.
ವಿಜೇತ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಿ ಶಾಸಕ ತನ್ವೀರ್ ಸೇಠ್ ಮಾತನಾಡಿ, ಈಗಿನ ಶೈಕ್ಷಣಿಕ ವ್ಯವಸ್ಥೆಯಲ್ಲಿ ಪೋಷಕರು ತಮ್ಮ ಮಕ್ಕಳು ಕ್ರೀಡೆಯಲ್ಲಿ ಭಾಗವಹಿಸಿ ಎಂದು ಪ್ರೇರೆಪಿಸುತ್ತಿಲ್ಲ. ಅತೀ ಹೆಚ್ಚು ಅಂಕ ಪಡೆಯಬೇಕು ಎಂದು ನೀರಿಕ್ಷಿಸುತ್ತಿದ್ದಾರೆ. ಎಲ್ಲರೂ ವೈದ್ಯರು, ಎಂಜಿನಿಯರ್ ಆಗಬೇಕು ಎಂದು ಬಯಸುತ್ತಾರೆ ಎಂದು ಹೇಳಿದರು.
ಈ ನಾಡನ್ನು ಕಟ್ಟಲು ಎಲ್ಲಾ ಕ್ಷೇತ್ರದವರು ಬೇಕು. ಗೆಲವು, ಸೋಲು ಎರಡನ್ನು ಸಮವಾಗಿ ಸ್ವೀಕರಿಸುವ ಮನಸ್ಥಿತಿಯನ್ನು ಕ್ರೀಡೆ ಕಲಿಸುತ್ತದೆ. ಹೀಗಾಗಿ ಸ್ಥಳೀಯ ಸಂಸ್ಥೆಗಳಿಗೆ ಕ್ರೀಡಾ ಜವಾಬ್ದಾರಿ ನೀಡಬೇಕು. ನಗರ ಸಭೆ, ಜಿಲ್ಲಾ ಪಂಚಾಯತ್ ಕ್ಷೇತ್ರ ಹಾಗೂ ವಿಧಾನ ಸಭಾ ಕ್ಷೇತ್ರವಾರು ಕ್ರೀಡಾಪಟುಗಳನ್ನು ಗುರುತಿಸಲು ಸರ್ಕಾರ ಹೆಚ್ಚಿನ ಆದ್ಯತೆ ನೀಡಲಿದೆ ಎಂದು ತಿಳಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಎಂ.ಎನ್.ಅನುಚೇತ್ ಮಾತನಾಡಿ,
ಸರ್ಕಾರದಿಂದ ಕ್ರೀಡಾಪಟುಗಳಿಗೆ ಸಲ್ಲಬೇಕಾದ ಎಲ್ಲಾ ಸೌಲಭ್ಯ ಹಾಗೂ ಗೌರವವನ್ನು ಇಲಾಖೆ ಒದಗಿಸಿಕೊಡುತ್ತಿದೆ. ಅದರಂತೆ ಕ್ರೀಡಾಪಟುಗಳು ನಮ್ಮ ದೇಶಕ್ಕೆ ಅಂತಾರಾಷ್ಟಿçÃಯ ಮಟ್ಟದಲ್ಲಿ ಕೀರ್ತಿ ಮತ್ತು ಯಶಸ್ಸನ್ನು ತರಬೇಕು ಎಂದು ಆಶಿಸಿದರು.
ಇದೇ ಸಂದರ್ಭದಲ್ಲಿ ಕಬ್ಬಡ್ಡಿ ರಾಷ್ಟಿçÃಯ ತರಬೇತುದಾರ ಬಿ.ಸಿ.ರಮೇಶ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಎಂ.ಸಿ.ರಮೇಶ್, ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್ , ದಸರಾ ಉಪಸಮಿತಿಯ ಅಧ್ಯಕ್ಷ ವಿಜಯ್, ಉಪಾಧ್ಯಕ್ಷರಾದ ಸಂದೇಶ್, ಜಾಕೀರ್ ಪಾಷಾ, ಪ್ರಮೋದ್ ಜಯರಾಮ್, ವಿನಯ್ ಕುಮಾರ್, ಟಿ.ರಘು, ಪರಶಿವಮೂರ್ತಿ ಸೇರಿದಂತೆ ಸದಸ್ಯರು ಉಪಸ್ಥಿತರಿದ್ದರು.