
ನಂಜನಗೂಡು; ತಾಲೂಕಿನ ಸಿಂಧುವಳ್ಳಿಪುರ ಗ್ರಾಮದಲ್ಲಿ ಗ್ರಾಮಸ್ಥರ ಬೇಡಿಕೆಯಂತೆ 10 ಲಕ್ಷ ವೆಚ್ಚದಲ್ಲಿ ಸುಸಜ್ಜಿತವಾಗಿ ಕನಕ ಸಮುದಾಯ ಭವನವನ್ನು ನಿರ್ಮಿಸಲಾಗುವುದು ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.
ಅವರು ಮಂಗಳವಾರ ತಾಲೂಕಿನ ಸಿಂಧುವಳ್ಳಿಪುರ ಗ್ರಾಮದಲ್ಲಿ 10 ಲಕ್ಷ ವೆಚ್ಚದಲ್ಲಿ ಕನಕ ಭವನ ನಿರ್ಮಾಣದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
2023 -24ನೇ ಸಾಲಿನಲ್ಲಿ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯನವರು ಕ್ಷೇತ್ರಕ್ಕೆ ನೀಡಿದ್ದ 25 ಕೋಟಿ ವಿಶೇಷ ಅನುದಾನದಲ್ಲಿ 20 ಕೋಟಿ ಅನುದಾನವನ್ನು ಸಾಮಾನ್ಯ ವರ್ಗದ ಬೀದಿಗಳ ಅಭಿವೃದ್ಧಿಗೆ ಮೀಸಲಾಗಿರಿಸಲಾಗಿತ್ತು, 2.5 ಕೋಟಿ ರೂಗಳನ್ನು ಸಮುದಾಯ ಭವನಗಳ ನಿರ್ಮಾಣಕ್ಕೆ, 2.5 ಕೋಟಿ ಅನುದಾನವನ್ನು ದೇವಾಲಯಗಳ ಅಭಿವೃದ್ಧಿಗೆ ಮೀಸಲಾಗಿರಿಸಲಾಗಿತ್ತು, ಸಮುದಾಯ ಭವನಕ್ಕೆ ನೀಡಿದ್ದ ಅನುದಾನದಲ್ಲಿ ಸಿಂಧುವಳ್ಳಿಪುರದಲ್ಲಿ ಗ್ರಾಮಸ್ಥರ ಬೇಡಿಕೆಯಂತೆ 10 ಲಕ್ಷ ವೆಚ್ಚದಲ್ಲಿ ಕನಕ ಸಮುದಾಯ ಭವನವನ್ನು ಸುಸಜ್ಜಿತವಾಗಿ ನಿರ್ವಿಸಲಾಗುವುದು ಮತ್ತು, ಬಾಕಿ ಉಳಿದಿರುವ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗಳನ್ನು ಬಾಕಿ ಇಲ್ಲದಂತೆ ಪೂರ್ಣವಾಗಿ ನಿರ್ವಹಿಸಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ಬ್ಲಾಕ್ ಅಧ್ಯಕ್ಷರಾದ ಕುರಹಟ್ಟಿ ಮಹೇಶ್ , ಗ್ರಾಪಂ ಮಾಜಿ ಅಧ್ಯಕ್ಷ ಹೊಣಕಾರನಾಯಕ, ಗ್ರಾಪಂ ಮಾಜಿ ಸದಸ್ಯರಾದ ಕೃಷ್ಣಕುಮಾರ್, ಮುಖಂಡರಾದ ಹುಣಸನಾಳುಸಿದ್ದರಾಜು, ಬೀರೇಶ್, ಗೋಪಾಲಕೃಷ್ಣ ವಿಜಯ್ ಕುಮಾರ್, ಅಣ್ಣಯ್ಯ ಸ್ವಾಮಿ, ಯುವ ಕಾಂಗ್ರೆಸ್ ಅಧ್ಯಕ್ಷ ಹೆಗ್ಗಡಹಳ್ಳಿಮಹೇಶ್, ಸೋಮು ರವರು, ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.