Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ದಸರಾ ಪುಸ್ತಕ ಮೇಳದಲ್ಲಿ ವಿವಿಧ ಲೇಖಕರ ಕೃತಿಗಳ ಲೋಕಾರ್ಪಣೆ


ಮೈಸೂರು; ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಮೈಸೂರು ದಸರಾ ಮಹೋತ್ಸವ- 2026ರ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳದ ರಾಷ್ಟçಕವಿ ಡಾ. ಜಿ.ಎಸ್. ಶಿವರುದ್ರಪ್ಪ ಸಾಂಸ್ಕöÈತಿಕ ವೇದಿಕೆಯಲ್ಲಿ ವಿವಿಧ ಲೇಖಕರ ಕೃತಿಗಳ ಬಿಡುಗಡೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ನಗರದ ಸ್ಕೌಟ್ ಅಂಡ್ ಗೈಡ್ ಮೈದಾನದಲ್ಲಿ ಆಯೋಜಿಸಲಾಗಿರುವ ಐದನೇ ದಿನದ ಪುಸ್ತಕ ಮೇಳದಲ್ಲಿ ನಡೆದ ಕಾರ್ಯಕ್ರಮವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅವರು ಉದ್ಘಾಟಿಸಿ ಕೃತಿ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದರು. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಅಧ್ಯಕ್ಷತೆ ವಹಿಸಿದರು. ಕೃತಿಗಳ ಲೇಖಕರುಗಳಾದ ಸುಧಾ ಚಿದಾನಂದಗೌಡ, ರತ್ನಾಗಿ ಬಿದಿ, ಸಂತೋಷ್ ಬಿ.ಟಿ. ಉಪಸ್ಥಿತರಿದ್ದರು.