Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ದಸರಾ ಮಹಿಳಾ ಸಬಲೀಕರಣದ ಪ್ರತೀಕ: ಪುಷ್ಪ ಅಮರನಾಥ್


ಮೈಸೂರು: ಈ ದೇಶದ ಶಕ್ತಿ ಎಂದರೆ ಅದು ಮಹಿಳಾ ಶಕ್ತಿ. ಮಹಿಳೆಯರಿಲ್ಲದ ಮನೆ, ರಾಜ್ಯ ಅಥವಾ ದೇಶವನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ ಎಂದು ಗ್ಯಾರೆಂಟಿ ಯೋಜನೆಗಳ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷೆ ಪುಷ್ಪ ಅಮರನಾಥ್ ಹೇಳಿದರು.
ಶುಕ್ರವಾರ ನಗರದ ಜೆ.ಕೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಿಳಾ ಮತ್ತು ಮಕ್ಕಳ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರೆಂಟಿ ಯೋಜನೆಗಳು ಮಹಿಳಾ ಸಬಲೀಕರಣಕ್ಕೆ ಹೊಸ ದಿಕ್ಕು ತೋರಿಸಿವೆ ಎಂದು ಬಣ್ಣಿಸಿದರು.
ಅನ್ನಭಾಗ್ಯ, ಗೃಹಜ್ಯೋತಿ ಯೋಜನೆಗಳ ಜತೆಗೆ, ಹೆಣ್ಣುಮಕ್ಕಳು ಯಾರ ಮುಂದೆಯೂ ಕೈಚಾಚಬಾರದು ಎಂಬ ಮಹದುದ್ದೇಶದಿಂದ ಜಾರಿಗೆ ತಂದಿರುವ ಗೃಹಲಕ್ಷಿ÷್ಮ ಯೋಜನೆಯು ಮಹಿಳೆಯರ ಆರ್ಥಿಕ ಭದ್ರತೆಗೆ ಬುನಾದಿಯಾಗಿದೆ. ತಿಂಗಳಿಗೆ ನೇರವಾಗಿ 2,000 ರೂಪಾಯಿಗಳನ್ನು ಖಾತೆಗೆ ಜಮೆ ಮಾಡುವ ಇಂತಹ ವಿಶಿಷ್ಟ ಯೋಜನೆಯನ್ನು ದೇಶದ ಇತಿಹಾಸದಲ್ಲೇ ಯಾವ ಸರ್ಕಾರವೂ ಜಾರಿಗೆ ತಂದಿಲ್ಲ. ಇದು ಕೇವಲ ಕರ್ನಾಟಕದಲ್ಲಿ ಮಾತ್ರ ಸಾಧ್ಯವಾಗಿದೆ ಎಂದು ಹೆಮ್ಮ ವ್ಯಕ್ತಪಡಿಸಿದರು.
ಮೈಸೂರು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರಾದ ಅರುಣ್ ಕುಮಾರ್ ಮಾತನಾಡಿ, ಸರ್ಕಾರದ ವಿವಿಧ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಪ್ರದೇಶದ ಮಹಿಳೆಯರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಲು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಹೇಳಿದರು.
ನೇರ ನಗದು ವರ್ಗಾವಣೆ ಮೂಲಕ ಮಹಿಳೆಯರು ತಮ್ಮ ದಿನನಿತ್ಯದ ಮತ್ತು ಕುಟುಂಬದ ನಿರ್ವಹಣೆಗೆ ಆರ್ಥಿಕ ಬೆಂಬಲ ಪಡೆಯುತ್ತಿದ್ದು, ಸ್ವಾವಲಂಬಿಗಳಾಗುತ್ತಿದ್ದಾರೆ. ಸರ್ಕಾರದ ಕಾರ್ಯಕ್ರಮಗಳಲ್ಲಿ ಗ್ರಾಮೀಣ ಮಹಿಳೆಯರು ಪ್ರತ್ಯಕ್ಷವಾಗಿ ಭಾಗವಹಿಸುವುದು, ಯೋಜನೆಗಳ ಜಾಗೃತಿ ಮತ್ತು ಅವುಗಳ ಸೌಲಭ್ಯ ಪ್ರತಿಯೊಬ್ಬರಿಗೂ ತಲುಪುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಶಿವಕುಮಾರ್, ಪುಷ್ಪವಲ್ಲಿ, ಹುಣಸೂರು ಬಸವರಾಜು, ಶಾಮ ಯೋಗೇಶ್, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪಂಚ ಗ್ಯಾರಂಟಿಗಳ ಕುರಿತು ನಾಟಕ, ಮಹಿಳೆಯರ ರಾಂಪ್ ವಾಕ್ ಹಾಗೂ ಕೊಡವ ವೋಲ್ಗಾ ನೃತ್ಯವು ಜನರನ್ನು ರಂಜಿಸಿದವು.