Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕಳೆದ ದಸರಾ ವೇಳೆ ಬಾಲಕಿಯನ್ನು ಎತ್ತಿಕೊಂಡು ಹೋಗಿ ಅತ್ಯಾಚಾರ ನಡೆಸಿ, ಕೊಲೆ ಮಾಡಿದ್ದ ಅಪರಾಧಿಗೆ ಗಲ್ಲು ಶಿಕ್ಷೆ


ಮೈಸೂರು: ಕಳೆದ ಬಾರಿ ನಡೆದ ನಾಡ ಹಬ್ಬ ಮೈಸೂರು ದಸರಾ ವೇಳೆ ನಗರದ ಇಟ್ಟಿಗೆಗೂಡಿನ ಬಳಿ ತಮ್ಮ ಪೋಷಕರೊಂದಿಗೆ ಮಲಗಿದ್ದ 9 ವರ್ಷದ ಬಾಲಕಿಯನ್ನು ಎತ್ತಿಕೊಂಡು ಹೋಗಿ ಆಕೆಯ ಮೇಲೆ ಅಮಾನುಷವಾಗಿ ಅತ್ಯಾಚಾರ ಮಾಡಿ, ಬಳಿಕ ಕೊಲೆ ಮಾಡಿದ ಅಪರಾಧಿ ಕಾರ್ತಿಕ್‌ಗೆ ಮೈಸೂರಿನ ಪೋಕ್ಸೋ ನ್ಯಾಯಾಲಯ ಮರಣದಂಡನೆ ವಿಧಿಸಿ ಶನಿವಾರ ತೀರ್ಪು ನೀಡಿದೆ.
ಮೈಸೂರು ಹೊರವಲಯದ ಸಿದ್ದಲಿಂಗಪುರದ ನಿವಾಸಿ ಕಾರ್ತಿಕ್ ಶಿಕ್ಷೆಗೊಳಗಾದ ಅಪರಾಧಿ.
ಪ್ರಕರಣದ ವಿಚಾರಣೆ ನಡೆಸಿದ ಮೈಸೂರಿನ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ಆನಂದ್ ಪಿ. ಉಗಾಡೆ ಅವರು, ಸಾಕ್ಷಾ÷್ಯಧಾರಗಳು ಸಾಬೀತಾದ ಹಿನ್ನೆಲೆಯಲ್ಲಿ ಕಾರ್ತಿಕ್‌ನನ್ನು ದೋಷಿ ಎಂದು ಗುರುವಾರ ಘೋಷಿಸಿ ಶಿಕ್ಷೆ ಪ್ರಮಾಣವನ್ನು ಕಾಯ್ದಿರಿಸಿದ್ದರು.
ಇಂದು ಅಪರಾಧಿಗೆ ಮರಣ ದಂಡನೆ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕಿ ಕೆ.ಬಿ. ಜಯಂತಿ ವಾದ ಮಂಡಿಸಿದ್ದಾರೆ.
ಪ್ರಕರಣದ ಹಿನ್ನಲೆ;
ಕಳೆದ ವರ್ಷ ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ಬಲೂನ್ ಮಾರಾಟಕ್ಕೆ ಕಲಬುರಗಿಯಿಂದ ಕುಟುಂಬದ ಜೊತೆ ಹತ್ಯೆಗೀಡಾದ ಬಾಲಕಿ ಮೈಸೂರಿಗೆ ಬಂದಿದ್ದಳು. ಇವರು ಇಟ್ಟಿಗೆ ಗೂಡಿನ ಬಳಿ ಇರುವ ವಸ್ತು ಪ್ರದರ್ಶನದ ಆವರಣದ ಮುಂಭಾಗದ ಮೈದಾನದಲ್ಲಿ ವಾಸ್ತವ್ಯ ಹೂಡಿದ್ದರು.
2025ರ ಅಕ್ಟೋಬರ್ 08 ರಾತ್ರಿ ಒಂದು ಕುಟುಂಬದ 8 ಜನ ಶೆಡ್‌ನಲ್ಲಿ ಮಲಗಿದ್ದರು. ಈ ಸಂದರ್ಭದಲ್ಲಿ ಅವರ ಜೊತೆಗಿದ್ದ 9 ವರ್ಷದ ಬಾಲಕಿ ನಾಪತ್ತೆಯಾಗಿದ್ದು, ಬೆಳಗಿನ ಜಾವ ಶೆಡ್ ಪಕ್ಕದಲ್ಲೇ ಆಕೆಯ ಶವ ಪತ್ತೆಯಾಗಿತ್ತು. ಯಾರೋ ರಾತ್ರಿ ತಮ್ಮ ಪುತ್ರಿಯನ್ನು ಕಿಡ್ನಾಪ್ ಮಾಡಿ, ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ. ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.
ಈ ಬಗ್ಗೆ ಪೋಕ್ಸೋ ಕಾಯ್ದೆಯಡಿ ನಜರ್‌ಬಾದ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಸಿಸಿಟಿವಿ ದೃಶ್ಯಾವಳಿ ಹಾಗೂ ತಾಂತ್ರಿಕ ಸಾಕ್ಷ÷್ಯಗಳನ್ನು ಆಧರಿಸಿ ಕೊಳ್ಳೇಗಾಲದಲ್ಲಿ ಕಾರ್ತಿಕ್‌ನನ್ನು 24 ಗಂಟೆಗಳಲ್ಲಿ ಬಂಧಿಸಿದ್ದರು. ಆರೋಪಿಯು ಆಟೋ ಡ್ರೆöÊವರ್ ಬಳಿ ಘಟನೆ ಕುರಿತು ಹೇಳಿದ್ದ. ಆಟೋ ಡ್ರೆöÊವರ್ ಸಾಕ್ಷಿ ಕೂಡ ನಮಗೆ ಸಿಕ್ಕಿತ್ತು. ಪೊಲೀಸರು ಕೂಡ 24 ಗಂಟೆ ಒಳಗಾಗಿ ಆರೋಪಿಯನ್ನು ಬಂಧನ ಮಾಡಿದ್ದರು. ವಿಚಾರಣೆ ವೇಳೆ ನಾನು ತಪುö್ಪ ಮಾಡಿಲ್ಲ ಅಂತ ಹೇಳುತ್ತಿದ್ದ. ಯಾವುದೇ ಆರೋಪಿಗಳು ತಪ್ಪನ್ನು ಒಪ್ಪಿಕೊಳ್ಳಲ್ಲ. ಕೃತ್ಯಕ್ಕೆ ಬಳಸಿದ್ದ ಚಾಕು ಕೂಡ ಆತನ ಬಳಿಯೇ ಇತ್ತು. ಇದೆಲ್ಲವನ್ನೂ ಪೊಲೀಸರು ವಶಕ್ಕೆ ಪಡೆದು ದೋಷರೋಪ ಪಟ್ಟಿ ಸಲ್ಲಿಸಿದ್ದರು.
ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಮೈಸೂರು ಜಿಲ್ಲಾ ಪೋಕ್ಸೋ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕಿ ಕೆ.ಬಿ.ಜಯಂತಿ, ಕಳೆದ ಮೈಸೂರು ದಸರಾದಲ್ಲಿ ಬಲೂನ್ ಮಾರಲು ಬಂದಿದ್ದ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಮೈಸೂರು ಪೋಕ್ಸೋ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ. ಒಂದು ವರ್ಷದಿಂದ ವಿಚಾರಣೆ ನಡೆದಿದ್ದು, ಇಂದು ಆರೋಪಿಗೆ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. ಈ ಘಟನೆ ಮಾಸುವ ಮುನ್ನವೇ ಆತನಿಗೆ ಶಿಕ್ಷೆ ಕೊಡಿಸಬೇಕು ಅಂದುಕೊAಡಿದ್ದೆವು. ಅತ್ಯಾಚಾರ, ಕೊಲೆ ಹಾಗೂ ಸಾಕ್ಷ÷್ಯನಾಶ ಆಧಾರದ ಮೇಲೆ ಶಿಕ್ಷೆ ವಿಧಿಸಲಾಗಿದೆ. ಈ ಪ್ರಕರಣದಲ್ಲಿ ಡಿಜಿಟಲ್ ಸಾಕ್ಷಿಗಳು ಪ್ರಮುಖ ಪಾತ್ರ ವಹಿಸಿವೆ. ಇದರ ಜೊತೆಗೆ ಮೆಡಿಕಲ್ ಎವಿಡೆನ್ಸ್ ಸೇರಿ ಅನೇಕ ಸಾಕ್ಷಿಗಳು ಸಿಕ್ಕಿದ್ದವು ಎಂದು ತಿಳಿಸಿದರು.
ಈ ಹಿಂದೆಯೂ ಕಾರ್ತಿಕ್ ಮೇಲೆ ಸೆಕ್ಷನ್ 307 ಅಡಿ ಕೇಸ್ ಇತ್ತು. ಮೃತ ಬಾಲಕಿ ಕುಟುಂಬಕ್ಕೂ ಪರಿಹಾರ ಕೊಡಲು ನ್ಯಾಯಾಲಯ ತಿಳಿಸಿದೆ. ಪುಟ್ಟ ಕಂದಮ್ಮನ ಸಾವಿಗೆ ನ್ಯಾಯ ಕೊಡಿಸಿದ್ದೇವೆ. ನ್ಯಾಯ ಕೊಡಿಸಿರುವ ಆತ್ಮತೃಪ್ತಿ ನನಗಿದೆ. ಮಗುವನ್ನು ವಾಪಸ್ ತರಲು ಸಾಧ್ಯವಿಲ್ಲ. ಆದರೆ ಆ ಕುಟುಂಬಕ್ಕೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದೇವೆ. ಈ ತೀರ್ಪು ತಪುö್ಪ ಮಾಡುವವರಿಗೆ ಎಚ್ಚರಿಕೆಯ ಸಂದೇಶವಾಗಿದೆ ಎಂದು ಹೇಳಿದರು.