Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ


ಚಾಮರಾಜನಗರ; ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ.
ಬೊಮ್ಮಲಾಪುರ ಗ್ರಾಮದ ರೈತ ಅರ್ಜುನ್ ಎಂಬುವರ ಜಮೀನಿನಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಸುಮಾರು ನಾಲ್ಕರಿಂದ ಐದು ವರ್ಷದ ಹೆಣ್ಣು ಹುಲಿ ಸೆರೆಯಾಗಿದೆ. ಬೋನಿನಲ್ಲಿ ಇರಿಸಿದ್ದ ಕರುವನ್ನು ಹುಲಿ ತಿಂದುಹಾಕಿದೆ.
ಕಳೆದ ಹದಿನೈದು ದಿನಗಳಿಂದ ಈ ಎರಡೂ ಗ್ರಾಮಗಳ ಸುತ್ತಮುತ್ತ ಹುಲಿ ಸಂಚರಿಸುತ್ತಿದ್ದು, ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕುತ್ತಿತ್ತು. ಒಂದು ವಾರದ ಹಿಂದೆ ಅರ್ಜುನ್ ಅವರ ಹಸುವನ್ನೂ ಕೊಂದಿತ್ತು. ಇದರಿಂದ ಆತಂಕಗೊAಡ ಗ್ರಾಮಸ್ಥರು ಹುಲಿಯನ್ನು ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದರು. ಗ್ರಾಮಸ್ಥರ ಆಗ್ರಹದ ಹಿನ್ನೆಲೆಯಲ್ಲಿ ಇಲಾಖೆ ಬೋನು ಇರಿಸಿತ್ತು.
ಸೆರೆಯಾದ ಹುಲಿಯನ್ನು ಮೈಸೂರಿನ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಬೇಕೇ ಅಥವಾ ಬೇರೆಡೆ ಬಿಡಬೇಕೇ ಎಂಬುದರ ಕುರಿತು ಇನ್ನೂ ನಿರ್ಧಾರವಾಗಿಲ್ಲ. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಮಾರ್ಗದರ್ಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಬಫರ್ ವಲಯಾಧಿಕಾರಿ ಶಿವಕುಮಾರ್ ತಿಳಿಸಿದ್ದಾರೆ.