ಸುತ್ತೂರು ಶ್ರೀ ಮಠದಲ್ಲಿ ವಿಜಯ ದಶಮಿ ವಿಶೇಷ ಪೂಜೆ
ಮೈಸೂರು; ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶ್ರೀ ಮಠದಲ್ಲಿ ನವರಾತ್ರಿ ಪ್ರಯುಕ್ತ ಅಕ್ಟೋಬರ್ 21 ಬುಧವಾರ ವಿಜಯ ದಶಮಿಯಂದು ಶ್ರೀಚಾಮುಂಡಿ ಪಾದದ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಬನ್ನಿಪೂಜೆಯನ್ನುಶ್ರೀಶಿವರಾತ್ರಿದೇಶಿಕೇಂದ್ರಮಹಾಸ್ವಾಮಿಯವರ ದಿವ್ಯ ಸಾನಿಧ್ಯದಲ್ಲಿ ಏರ್ಪಡಿಸಲಾಗಿದೆ. ಬೆಳಗ್ಗೆ ಮುಖ್ಯಮಂತ್ರಿಗಳು ಹಾಗು ಉಪಮುಖ್ಯಮಂತ್ರಿಗಳು, ಸಂಜೆ 5 ಕ್ಕೆ ರಾಜ್ಯಪಾಲರು ಆಗಮಿಸುತ್ತಾರೆ. ಸಚಿವರುಗಳು, ಜನಪ್ರತಿನಿಧಿಗಳು, ಸಾಹಿತಿಗಳು, ಕಲಾವಿದರು, ಅಧಿಕಾರಿಗಳು ಹಾಗೂ ಗಣ್ಯರು ಪಾಲ್ಗೊಳ್ಳಿಲಿದ್ದಾರೆ.ಭಕ್ತಾಧಿಗಳು ಹಾಗೂ ಸಾರ್ವಜನಿಕರು ಆಗಮಿಸಿ ಪೂಜಾಕೈಂಕರ್ಯಗಳಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿ, ಪೂಜ್ಯರಿಂದ ಬನ್ನಿಆಶೀರ್ವಾದ ಪಡೆಯಲು ಕೋರಿದೆ.