Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಜೆಡಿಎಸ್ ನಿಂದ ಮೈಮುಲ್ ಮಾಜಿ ಅಧ್ಯಕ್ಷ ಪಿ.ಎಂ ಪ್ರಸನ್ನ ಉಚ್ಚಾಟನೆ 

ಪಿರಿಯಾಪಟ್ಟಣ : ಪಕ್ಷದ ನಿಯಮಗಳನ್ನು ಉಲ್ಲಂಘಿಸಿರುವುದು ಹಾಗೂ ಪಕ್ಷದ ಹಿರಿಯ ನಾಯಕರ ಸೂಚನೆಗಳನ್ನು ನಿರ್ಲಕ್ಷಿಸಿರುವುದರಿಂದ ಮೈಮುಲ್ ಮಾಜಿ ಅಧ್ಯಕ್ಷ ಪಿ ಎಂ ಪ್ರಸನ್ನ ರವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ತಾಲ್ಲೂಕು ಜೆಡಿಎಸ್ ಶಿಸ್ತುಪಾಲನ ಸಮಿತಿ ಅಧ್ಯಕ್ಷ ಜೆ ಎಸ್ ನಾಗರಾಜು ತಿಳಿಸಿದರು.

ಪಟ್ಟಣದ ತಾಲ್ಲೂಕು ಪತ್ರಕರ್ತರ ಸಂಘದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 

ಪಿ.ಎಂ ಪ್ರಸನ್ನ ರವರಿಗೆ ಈ ಹಿಂದೆ ಜಾರಿಗೊಳಿಸಲಾದ ಕಾರಣ ಕೇಳುವ ನೋಟಿಸ್‌ನಲ್ಲಿ ಹಾಗೂ ಪಕ್ಷದ ಪೂರ್ವಾನುಮತಿ ಪಡೆಯದೆ ಪಾದಯಾತ್ರೆ ಆಯೋಜಿಸಿರುವುದಕ್ಕೆ ಸಂಬಂಧಿಸಿದಂತೆ ಲಿಖಿತ ವಿವರಣೆಯನ್ನು ನಿಗದಿತ ಅವಧಿಯೊಳಗೆ ಸಲ್ಲಿಸುವಂತೆ ಸೂಚಿಸಲಾಗಿತ್ತು. ಆದರೆ ನಿಗದಿಪಡಿಸಿದ ಅವಧಿ ಮುಕ್ತಾಯಗೊಂಡಿದ್ದರೂ, ಇದುವರೆಗೆ ಅವರಿಂದ ಯಾವುದೇ ಲಿಖಿತ ಉತ್ತರ ಅಥವಾ ಸಮರ್ಪಕ ವಿವರಣೆ ಸ್ವೀಕೃತವಾಗಿರುವುದಿಲ್ಲ. ಪಕ್ಷದ ಶಿಸ್ತು ಮತ್ತು ಸಂಘಟನಾ ನಿಯಮಗಳನ್ನು ನಿರಂತರವಾಗಿ ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸುವ ಕುರಿತು ಶಿಸ್ತು ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. 

ಮಾಜಿ ಶಾಸಕ ಕೆ. ಮಹದೇವ್ ಮಾತನಾಡಿ ಪಿ. ಎಂ ಪ್ರಸನ್ನರವರು ರಾಜ್ಯ ನಾಯಕರ ಸೂಚನೆಗಳ ಉಲ್ಲಂಘನೆ, ಜಿಲ್ಲಾ ಮಟ್ಟದ ಮುಖಂಡರು ಹಾಗೂ ತಾಲೂಕು ಅಧ್ಯಕ್ಷರು ಹೇಳಿದರು ಪಾದಯಾತ್ರೆ ಮಾಡಿದ್ದರು ಆ ಘಟನೆಗೆ ಸಂಬಂಧಿಸಿದಂತೆ ವಿವರಣೆ ಕೇಳಿದ್ದು ಅದಕ್ಕೆ ಸಮರ್ಪಕ ಉತ್ತರ ನೀಡದ ಕಾರಣ ವರಿಷ್ಟರು ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ್ದಾರೆ ಪ್ರಸನ್ನ ಹಾಗೂ ನನ್ನ ನಡುವೆ ಅಪ್ಪ ಮಗನ ಸಂಬಂಧವಿರುತ್ತದೆಯೋ ಹೊರತು ಪಕ್ಷದಲ್ಲಿ ಇನ್ನೂ  ಯಾವುದೇ ಸಂಬಂಧವಿರುವುದಿಲ್ಲ ಎಂದು ಹೇಳಿದರು.

ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ ಮಾತನಾಡಿ ರಾಜ್ಯ ಹಾಗೂ ಜಿಲ್ಲಾ ವರಿಷ್ಠರ ಸೂಚನೆಯಂತೆ ಪತ್ರಿಕಾಗೋಷ್ಠಿ ನಡೆಸಿ ಪಕ್ಷದ ಹಿತಾಸಕ್ತಿಗೆ ವಿರುದ್ಧವಾಗಿ ನಡೆಯುತ್ತಿರುವ ಕಾರ್ಯಕ್ರಮವನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಆದೇಶ ಮಾಡಿದ್ದರೂ ಸಹ ಕಾರ್ಯಕ್ರಮವನ್ನು ಮುಂದುವರಿಸಿ ಪಕ್ಷದ ನಿಯಮವನ್ನು ಉಲ್ಲಂಘಿಸಿದ್ದಾರೆ ಹಾಗೂ ಈ ಪ್ರತಿಭಟನೆ ಬಗ್ಗೆ ಸಮರ್ಪಕ ಉತ್ತರ ಕೇಳಿ ಕಾಲಾವಕಾಶ ನೀಡಲಾಗಿತ್ತು ಕಾಲಾವಕಾಶ ಮುಗಿದರು ಉತ್ತರ ನೀಡಿದ ಕಾರಣ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಎಂದು ಪರಿಗಣಿಸಿ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ಸೋಮಶೇಖರ್, ತಿಮ್ಮನಾಯಕ, ಅಶೋಕ್, ನಿರಂಜನ್ ಸೇರಿದಂತೆ ಇತರರು ಇದ್ದರು