
ಮೈಸೂರು; ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಬುಧವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿ, ಅಲ್ಲಿರುವ ದೇವಸ್ಥಾನದಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ತಮ್ಮ ಸಚಿವ ಸಂಪುಟದ ಸಹದ್ಯೋಗಿಗಳೊಂದಿಗೆ ಸುತ್ತೂರು ಮಠಕ್ಕೆ ಆಗಮಿಸಿದ ಸಿಎಂ ಡಿ.ಕೆ.ಶಿವಕುಮಾರ್, ವ್ಮಠದ ಪೀಠಾಧಿಪತಿಗಳಾದ ಶ್ರೀಶಿವರಾತ್ರಿದೇಶಿಕೇಂದ್ರ ಸ್ವಾಮೀಜಿಯವರನ್ನು ಭೇಟಿಯಾದರು. ಅವರೊಂದಿಗೆ ಮಠದ ಆವರಣದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಠದಲ್ಲಿ ನಡೆದ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿ, ಪೂರ್ಣಾಹುತಿ ನೆರವೇರಿಸಿದರು. ಬಳಿಕ ಶ್ರೀಗಳು ಡಿ.ಕೆ.ಶಿವಕುಮಾರ್ ಅವರಿಗೆ ತಾಯಿ ಚಾಮುಂಡೇಶ್ವರಿಯ ಬೆಳ್ಳಿ ವಿಗ್ರಹವನ್ನು ನೀಡಿ, ಆಶೀರ್ವಾದ ಮಾಡಿದರು. ನಂತರ ಸಿಎಂ ಉಪಹಾರ ಸೇವಿಸಿದರು. ಅವರಿಗೆ ಸಚಿವರುಗಳಾದ ಕೆ.ಜೆ.ಜಾರ್ಜ್, ಡಾ.ಯತೀಂದ್ರ ಸಿದ್ದರಾಮಯ್ಯ, ಶಾಸಕರುಗಳಾದ ಹೆಚ್.ಸಿ.ಮಹದೇವಪ್ಪ, ಎ.ಆರ್.ಕೃಷ್ಣಮೂರ್ತಿ, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಜೆಎಸ್‌ಎಸ್ ಸಂಸ್ಥೆಯ ಕಾರ್ಯದರ್ಶಿ ಎಸ್.ಪಿ.ಮಂಜುನಾಥ್ ಮತ್ತಿತರರು ಸಾಥ್ ನೀಡಿದರು.