
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಸಂಭ್ರಮಕ್ಕೆ ಸಾಕ್ಷಿಯಾದ ಅರಮನೆ ಆವರಣದಲ್ಲಿ, ಸಂಭ್ರಮದ ಬಳಿಕ ಸ್ವಚ್ಛತೆಯ ಜವಾಬ್ದಾರಿಯನ್ನು ಯುವಜನರು ಹೊತ್ತುಕೊಂಡರು. ಕಾವೇರಿ ಕಾಲೇಜ್ ಆಫ್ ಎಂಜಿನಿಯರಿAಗ್ನ ೧೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗುರುವಾರ ಅರಮನೆ ಆವರಣದಲ್ಲಿ ಸ್ವಚ್ಛತಾ ಅಭಿಯಾನ ನಡೆಸುವ ಮೂಲಕ ಸಾರ್ವಜನಿಕ ಸ್ಥಳಗಳ ಸಂರಕ್ಷಣೆ ಹಾಗೂ ಪರಿಸರ ಕಾಳಜಿಯ ಸಂದೇಶ ಸಾರಿದರು.
ದಸರಾ ಕಾರ್ಯಕ್ರಮದ ಬಳಿಕ ಅರಮನೆ ಆವರಣದಲ್ಲಿ ಸಂಗ್ರಹವಾಗಿದ್ದ ತ್ಯಾಜ್ಯವನ್ನು ವಿದ್ಯಾರ್ಥಿಗಳು ಸ್ವತಃ ತೆರವುಗೊಳಿಸಿದರು. ಕೈಗವಸು ಧರಿಸಿ, ಕಸದ ಚೀಲಗಳನ್ನು ಹಿಡಿದು ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ ವಿದ್ಯಾರ್ಥಿಗಳು ಪ್ಲಾಸ್ಟಿಕ್ ಸೇರಿದಂತೆ ಅಲ್ಲಲ್ಲಿ ಬಿದ್ದಿದ್ದ ತ್ಯಾಜ್ಯವನ್ನು ಸಂಗ್ರಹಿಸಿದರು. ಇದರೊಂದಿಗೆ ಸ್ವಚ್ಛತೆಯ ಮಹತ್ವ ಸಾರುವ ಫಲಕಗಳನ್ನು ಹಿಡಿದು ಜಾಗೃತಿ ಜಾಥಾ ನಡೆಸಿದರು.ನಮ್ಮ ಅರಮನೆ, ನಮ್ಮ ಹೆಮ್ಮೆ' ಹಾಗೂ ಸ್ವಚ್ಛ ಪರಿಸರ, ಸುಂದರ ಪರಂಪರೆ’ ಎಂಬ ಸಂದೇಶಗಳೊAದಿಗೆ ನಡೆದ ಅಭಿಯಾನವು ನಗರದ ಐತಿಹಾಸಿಕ ಸ್ಮಾರಕಗಳು ಮತ್ತು ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಎಂಬುದನ್ನು ನೆನಪಿಸಿತು.
ಸ್ವಚ್ಛತೆ ಕೇವಲ ಪೌರಕಾರ್ಮಿಕರ ಜವಾಬ್ದಾರಿಯಲ್ಲ;
ಪ್ರತಿವರ್ಷ ದಸರಾ ಸಂದರ್ಭದಲ್ಲಿ ಮೈಸೂರಿಗೆ ಲಕ್ಷಾಂತರ ಪ್ರವಾಸಿಗರು ಭೇಟಿ ನೀಡುತ್ತಾರೆ. ಇಂತಹ ದೊಡ್ಡ ಕಾರ್ಯಕ್ರಮಗಳ ಬಳಿಕ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ನಿರ್ವಹಣೆ ಮಹತ್ವದ ಸವಾಲಾಗುತ್ತದೆ. ನಗರವನ್ನು ಸ್ವಚ್ಛವಾಗಿಡುವಲ್ಲಿ ಪೌರಕಾರ್ಮಿಕರು ಹಾಗೂ ಸ್ಥಳೀಯ ಆಡಳಿತದ ಶ್ರಮದ ಜೊತೆಗೆ ಸಾರ್ವಜನಿಕರ ಸಹಕಾರವೂ ಅಷ್ಟೇ ಅಗತ್ಯವಾಗಿದೆ.
ಈ ಹಿನ್ನೆಲೆಯಲ್ಲಿ ಕಾವೇರಿ ಎಂಜಿನಿಯರಿAಗ್ ಕಾಲೇಜಿನ ವಿದ್ಯಾರ್ಥಿಗಳು ಕೇವಲ ಸ್ವಚ್ಛತೆಯ ಬಗ್ಗೆ ಮಾತನಾಡದೆ, ಸ್ವತಃ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿರುವುದು ಗಮನಾರ್ಹವಾಗಿದೆ.