Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಹೋಟೆಲ್‌ಗಳು , ಉಪಾಹಾರ ಗೃಹಗಳ ಶೌಚಾಲಯಗಳನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲು ನಗರಪಾಲಿಕೆಯ ಆಯಕ್ತರ ಸೂಚನೆ


ಮೈಸೂರು; ನಗರದ ಹೋಟೆಲ್‌ಗಳು ಹಾಗೂ ಉಪಾಹಾರ ಗೃಹಗಳ ಶೌಚಾಲಯಗಳನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವಂತೆ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತೆ ಎಂ.ಕೆ.ಸವಿತಾ ಸೂಚಿಸಿದ್ದಾರೆ.
ಸ್ವಚ್ಛತೆ ಹಾಗೂ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿರುವ ಮೈಸೂರು ನಗರದಲ್ಲಿ ಸಾರ್ವಜನಿಕರಿಗೆ ಸುಲಭವಾಗಿ ಶೌಚಾಲಯ ಸೌಲಭ್ಯ ದೊರಕಿಸಿಕೊಡುವ ಉದ್ದೇಶದಿಂದ ನಗರದ ಹೋಟೆಲ್‌ಗಳು ಹಾಗೂ ಉಪಾಹಾರ ಗೃಹಗಳಲ್ಲಿ ಲಭ್ಯವಿರುವ ಶೌಚಾಲಯಗಳನ್ನು ಸಾರ್ವಜನಿಕರ ಬಳಕೆಗೆ ಉಚಿತವಾಗಿ ಮುಕ್ತಗೊಳಿಸುವಂತೆ ಮೈಸೂರು ಮಹಾನಗರ ಪಾಲಿಕೆಯು ಹೋಟೆಲ್ ಮಾಲೀಕರ ಸಂಘಕ್ಕೆ ಮನವಿ ಮಾಡಿದ್ದಾರೆ.
ಮೈಸೂರು ನಗರಕ್ಕೆ ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ಸಾರ್ವಜನಿಕರು, ಮಹಿಳೆಯರು, ಹಿರಿಯ ನಾಗರಿಕರು ಹಾಗೂ ವಿಶೇಷಚೇತನರಿಗೆ ಅಗತ್ಯ ಸಂದರ್ಭಗಳಲ್ಲಿ ಶೌಚಾಲಯ ಸೌಲಭ್ಯ ದೊರೆಯುವುದು ಅತ್ಯಂತ ಅವಶ್ಯಕವಾಗಿದೆ.
ಈ ಹಿನ್ನೆಲೆಯಲ್ಲಿ, ಹೋಟೆಲ್‌ಗಳು ಹಾಗೂ ಉಪಾಹಾರ ಗೃಹಗಳಲ್ಲಿ ಈಗಾಗಲೇ ಲಭ್ಯವಿರುವ ಶೌಚಾಲಯಗಳನ್ನು ಕೇವಲ ಗ್ರಾಹಕರಿಗೆ ಮಾತ್ರ ಸೀಮಿತಗೊಳಿಸದೆ, ಇತರೆ ಸಾರ್ವಜನಿಕರಿಗೂ ಯಾವುದೇ ಶುಲ್ಕ ವಿಧಿಸದೆ ಬಳಸಲು ಅವಕಾಶ ಕಲ್ಪಿಸುವಂತೆಹಾಗೂ ಶೌಚಾಲಯಗಳಲ್ಲಿ ಸ್ವಚ್ಛತೆ, ನೀರು ಹಾಗೂ ಅಗತ್ಯ ನೈರ್ಮಲ್ಯ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸುವುದರೊಂದಿಗೆ, ಶೌಚಾಲಯ ಬಳಸಲು ಆಗಮಿಸುವ ಸಾರ್ವಜನಿಕರಿಗೆ ಹೋಟೆಲ್ ಸಿಬ್ಬಂದಿಯು ಸೂಕ್ತ ಸಹಕಾರ ನೀಡುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ನಗರದಲ್ಲಿ ಬಯಲು ಮೂತ್ರ ವಿಸರ್ಜನೆಯನ್ನು ತಡೆಗಟ್ಟುವುದು, ಸಾರ್ವಜನಿಕ ಆರೋಗ್ಯ ಮತ್ತು ನೈರ್ಮಲ್ಯವನ್ನು ಸುಧಾರಿಸುವುದು ಹಾಗೂ ಪ್ರವಾಸಿಗರಿಗೆ ಅನುಕೂಲಕರ ವಾತಾವರಣ ಕಲ್ಪಿಸುವುದು ಈ ಉಪಕ್ರಮದ ಪ್ರಮುಖ ಉದ್ದೇಶವಾಗಿದೆ.
ಮೈಸೂರನ್ನು ಮತ್ತಷ್ಟು ಸ್ವಚ್ಛ, ಸುಂದರ ಹಾಗೂ ಸಾರ್ವಜನಿಕ ಸ್ನೇಹಿ ನಗರವನ್ನಾಗಿಸುವ ನಿಟ್ಟಿನಲ್ಲಿ ಹೋಟೆಲ್ ಮಾಲೀಕರು ಹಾಗೂ ಉಪಾಹಾರ ಗೃಹಗಳ ಮಾಲೀಕರು ಮಹಾನಗರ ಪಾಲಿಕೆಯ ಈ ಉಪಕ್ರಮಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿ ಸಹಕರಿಸುವಂತೆ ಹೋಟೆಲ್ ಮಾಲೀಕರ ಸಂಘಸAಸ್ಥೆ ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೂ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರು ಮನವಿ ಮಾಡಿದ್ದಾರೆ.