Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಜಾಗೃತಿ ಅರಿವು ಸಪ್ತಾಹದ ಅಂಗವಾಗಿ ಮೈಸೂರು ನೈಋತ್ಯ ರೈಲ್ವೆ ವಿಭಾಗದಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆ


ಮೈಸೂರು; ಮೈಸೂರು ನೈಋತ್ಯ ರೈಲ್ವೆ ವಿಭಾಗದಿಂದ ಅಕ್ಟೋಬರ್ 26ರಿಂದ ನವೆಂಬರ್ 1ರವರೆಗೆ ಜಾಗೃತಿ ಅರಿವು ಸಪ್ತಾಹವನ್ನು ಆಚರಿಸಲಾಗುತ್ತಿದೆ. ಇದರ ಅಂಗವಾಗಿ, ಸಾರ್ವಜನಿಕ ಸೇವೆಯಲ್ಲಿ ಪ್ರಾಮಾಣಿಕತೆ, ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಉತ್ತೇಜಿಸುವ ಹಾಗೂ ಭ್ರಷ್ಟಾಚಾರ ತಡೆಗಟ್ಟುವ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಮೈಸೂರು ವಿಭಾಗೀಯ ಕಚೇರಿಯಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಮೈಸೂರು ವಿಭಾಗದ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶಮ್ಮಾಸ್ ಹಮೀದ್ ಅವರು ವಿಭಾಗೀಯ ಕಚೇರಿಯ ತೆರೆದ ಸಭಾಂಗಣದಲ್ಲಿ ನೆರೆದಿದ್ದ ಅಧಿಕಾರಿಗಳು, ರೈಲ್ವೆ ಸಿಬ್ಬಂದಿ, ಸ್ಕೌಟ್ಸ್ ಮತ್ತು ಗೈಡ್ಸ್ ಸದಸ್ಯರು ಹಾಗೂ ಲಲಿತಾ ಶಾಲೆಯ ವಿದ್ಯಾರ್ಥಿಗಳಿಗೆ ಜಾಗೃತಿ ಪ್ರತಿಜ್ಞೆಯನ್ನು ಬೋಧಿಸಿದರು.
ಜಾಗೃತಿ ಕಾರ್ಯಕ್ರಮದ ಅಂಗವಾಗಿ, ಸ್ಕೌಟ್ಸ್ ಮತ್ತು ಗೈಡ್ಸ್ ಸದಸ್ಯರು ಪ್ರಾಮಾಣಿಕತೆ, ನೈತಿಕ ಮೌಲ್ಯಗಳು ಹಾಗೂ ಭ್ರಷ್ಟಾಚಾರ ವಿರೋಧಿ ಸಂದೇಶವನ್ನು ಸಾರುವ ಬೀದಿ ನಾಟಕವನ್ನು ಪ್ರದರ್ಶಿಸಿದರು. ಲಲಿತಾ ಶಾಲೆಯ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆಯನ್ನೂ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ತಮ್ಮ ಕಲಾಕೃತಿಗಳ ಮೂಲಕ ಜಾಗೃತಿ ಮತ್ತು ನೈತಿಕ ಮೌಲ್ಯಗಳ ಮಹತ್ವವನ್ನು ಅಭಿವ್ಯಕ್ತಪಡಿಸಿದರು.
ನಂತರ, ಶಮ್ಮಾಸ್ ಹಮೀದ್ ಅವರು ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿ, ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಭಾಗವಹಿಸಿದ ವಿದ್ಯಾರ್ಥಿಗಳು ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಸದಸ್ಯರನ್ನು ಅಭಿನಂದಿಸಿದರು.