Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮಹರ್ಷಿ ವಾಲ್ಮೀಕಿಯವರು ಜ್ಞಾನದ ಸಂಕೇತವಾಗಿದ್ದಾರೆ;ಶಾಸಕ ದರ್ಶನ್ ಧ್ರುವನಾರಾಯಣ

ನಂಜನಗೂಡು;  ಮಹರ್ಷಿ ವಾಲ್ಮೀಕಿಯವರು ಜ್ಞಾನದ ಸಂಕೇತವಾಗಿದ್ದಾರೆ, ಅವರ ರಾಮಾಯಣದ ಸಂದೇಶಗಳು ಮನುಕುಲದ ಜೀವನಕ್ಕೆ ದಾರಿ ದೀಪವಾಗಿವೆ, ಅವುಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಅರ್ಥಪೂರ್ಣ ಬದುಕು ಸಾಗಿಸಲು ಸಾಧ್ಯ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.  ಅವರು ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ ಮಹರ್ಷಿ ವಾಲ್ಮೀಕಿಯವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 

 ಮಹರ್ಷಿ ವಾಲ್ಮೀಕಿಯವರು

  ರಾಮಾಯಣ ಮುಖೇನ ಆದರ್ಶಮಯ ಬದುಕು ಸಾಗಿಸುವಂತಹ ಸಾಮಾಜಿಕ ಸಂದೇಶವನ್ನು ಇಡೀ ವಿಶ್ವಕ್ಕೆ ಸಾರಿದ್ದಾರೆ, ಆದ್ದರಿಂದಲೇ ವಾಲ್ಮೀಕಿ ಅವರ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ, ಮಹರ್ಷಿ ವಾಲ್ಮೀಕಿಯವರು ನೀಡಿರುವ ಕೊಡುಗೆಯನ್ನು ನಮ್ಮ ಮುಂದಿನ ಪೀಳಿಗೆಗೆ ಅರಿವು ಮೂಡಿಸುವ ಕೆಲಸವನ್ನು ಮಾಡಬೇಕಿದೆ, ಈ ನಿಟ್ಟಿನಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ನಡೆಯುವ ಜಯಂತಿ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಮತ್ತು ಚರ್ಚಾ ಸ್ಪರ್ಧೆ ಗಳನ್ನು ಏರ್ಪಡಿಸಿ ಪ್ರೋತ್ಸಾಹ ನೀಡಲಾಗುತ್ತಿದೆ, ಸಮುದಾಯದ ಬಂಧುಗಳು ಕಡ್ಡಾಯವಾಗಿ ನಿಮ್ಮ ಮಕ್ಕಳಿಗೆ ಶಿಕ್ಷಣವನ್ನು ದೊರಕಿಸಿಕೊಡಬೇಕು, ತಾಲೂಕು ನಾಯಕ ಸಂಘದವರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಕೆಲಸವನ್ನು ನಿರ್ವಹಿಸಬೇಕು ಎಂದು ಹೇಳಿದರು.

  ಇನ್ನು ಎಸ್ಸಿ, ಎಸ್ಟಿ, ಮೀಸಲಾತಿ ಏರಿಕೆಯನ್ನು ನ್ಯಾಯಾಲಯ ತಿರಸ್ಕರಿಸಿದ್ದು, ತಾಲೂಕು ನಾಯಕ ಸಂಘದ ಪದಾಧಿಕಾರಿಗಳ ಮನವಿಯಂತೆ ಈ ಬಗ್ಗೆ ಸದನದಲ್ಲಿ ಚರ್ಚಿಸಿ ಮುಖ್ಯಮಂತ್ರಿಗಳ ಗಮನ ಸೆಳೆದು ಕೇಂದ್ರ ಸರ್ಕಾರಕ್ಕೆ ಶಿಪರಸ್ಸು ಮಾಡಲಾಗುವುದು, ಎಂದರಲ್ಲದೆ ಕ್ಷೇತ್ರದಲ್ಲಿ ತಾಲೂಕು ನಾಯಕ ಸಮುದಾಯದ ಅಭಿವೃದ್ಧಿಗಾಗಿ ಟಿಎಸ್ಪಿ ಯೋಜನೆಯಡಿ ಹೆಚ್ಚಿನ ಅನುದಾನದಂದು ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಮತ್ತು ವಾಲ್ಮೀಕಿ ಸಮುದಾಯ ಭವನಗಳನ್ನು ನಿರ್ಮಿಸಲಾಗಿದೆ ಎಂದು ಹೇಳಿದರು.

  ಕಾರ್ಯಕ್ರಮದಲ್ಲಿ ಚರ್ಚಾ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ ಲ್ಯಾಪ್ ಟಾಪ್, ದ್ವಿತೀಯ ಬಹುಮಾನ ಟ್ಯಾಬ್, ತೃತೀಯ ಬಹುಮಾನ ಹತ್ತು ಸಾವಿರ ನಗದು ನೀಡಿ ಪುರಸ್ಕರಿಸಲಾಯಿತು. 

  ಇದಕ್ಕೂ ಮುನ್ನ ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿಯನ್ನು ಬೆಳ್ಳಿರಥದಲ್ಲಿ ವಿವಿಧ ಜಾನಪದ ಕಲಾತಂಡಗಳೊಂದಿಗೆ ಅದ್ದೂರಿಯಾಗಿ ಮೆರವಣಿಗೆ ಮಾಡಲಾಯಿತು, ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಚಾಲನೆ ನೀಡಿದರು.

  ಸಮಾರಂಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಕೆಪಿಸಿಸಿ ಕಾರ್ಯದರ್ಶಿ ಎಸ್‌.ಸಿ.ಬಸವರಾಜು, ಬಿಜೆಪಿ ಜಿಲ್ಲಾಧ್ಯಕ್ಷ ಕುಂಬ್ರಹಳ್ಳಿ ಸುಬ್ಬಣ್ಣ, ಮೃಗಾಲಯ ಪ್ರಾಧಿಕಾರ ಅಧ್ಯಕ್ಷ ಹಾಡ್ಯರಂಗಸ್ವಾಮಿ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಕೆ.ಮಾರುತಿ, ಕಾಂಪೋಸ್ಟ್ ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಎಸ್.ಮಹದೇವಯ್ಯ, ಜಿ.ಪಂ.ಮಾಜಿ ಸದಸ್ಯ ಸಿ.ಚಿಕ್ಕರಂಗನಾಯಕ, ಮುಖಂಡರಾದ ದೊರೆಸ್ವಾಮಿನಾಯಕ, ಸರ್ವೇಶ್, ನಗರ್ಲೆ ಮಹದೇವಸ್ವಾಮಿ, ತಾಲೂಕು ನಾಯಕರ ಸಂಘದ ಅಧ್ಯಕ್ಷ ನಾಗರಾಜು, ಪ್ರಧಾನಕಾರ್ಯದರ್ಶಿ ಶ್ರೀಕಂಠಸ್ವಾಮಿ, ಖಜಾಂಚಿ ಸುಧೀಂದ್ರಕುಮಾರ್, ಹಳ್ಳಿದಿಡ್ಡಿಮಂಜು, ಶಿವನಂಜನಾಯಕ, ಬಿ.ಟಿ.ಸಿದ್ದರಾಜು, ರಾಜಣ್ಣ, ರಮೇಶ್, ಎಚ್. ಎಸ್. ಸಿದ್ದರಾಜು, ಎಸ್.ರವಿಕುಮಾರ್, ಕುಮಾರ, ಕೃಷ್ಣ, ಮಹೇಶ, ಮೂರ್ತಿ, ನಂಜುಂಡನಾಯಕ, ದೇಬೂರುಮಂಜು, ಹನುಮಂತ, ಸೋಮನಾಯಕ ತಹಸಿಲ್ದಾರ್ ಸ್ಮಿತಾರಾಮು, ತಾಪಂ ಇಒ ಜೆರಾಲ್ಡ್ ರಾಜೇಶ್, ನಗರಸಭಾ ಪೌರಾಯುಕ್ತ ಎಂ.ಬಸವರಾಜು, ಸೇರಿದಂತೆ ಹಲವಾರು ಪ್ರಮುಖರು ಉಪಸ್ಥಿತರಿದ್ದರು.