Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮಹರ್ಷಿ ವಾಲ್ಮೀಕಿ ವಿಶ್ವಮಾನ್ಯ ದಾರ್ಶನಿಕರಾಗಿದ್ದಾರೆ : ಚಲುವರಾಯ 

ಪಿರಿಯಾಪಟ್ಟಣ: ಭಾರತದ ಭವ್ಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ರಾಮಾಯಣದಂತಹ ಮೇರುಕೃತಿಯನ್ನು ರಚಿಸಿದ ಮಹರ್ಷಿ ವಾಲ್ಮೀಕಿ ವಿಶ್ವಮಾನ್ಯ ದಾರ್ಶನಿಕರಾಗಿದ್ದಾರೆ ಎಂದು ಎಪಿಎಂಸಿ ಸಹಾಯಕ ಕಾರ್ಯದರ್ಶಿ ಚಲುವರಾಯ ತಿಳಿಸಿದರು.

ಪಟ್ಟಣದ ಅರಸು ಭವನದಲ್ಲಿ ತಾಲ್ಲೂಕು ಆಡಳಿತ, ಪರಿಶಿಷ್ಟ ಪಂಗಡ ಇಲಾಖೆ ವತಿಯಿಂದ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿ ಮಾತನಾಡಿದ ಅವರು ರಾಮಾಯಣದ ಮೂಲಕ ರಾಜಧರ್ಮ, ನೀತಿಶಾಸ್ತ್ರವನ್ನು ಜಗತ್ತಿಗೆ ಬೋಧಿಸಿದ ವಾಲ್ಮೀಕಿ ಮಹರ್ಷಿಯು ಪ್ರಾತಃ ಸ್ಮರಣೀಯರಾಗಿದ್ದಾರೆ. ಸ್ತ್ರೀ -ಪುರುಷ ಸರಿಸಮಾನತೆ ಯೊಂದಿಗೆ ಕಲ್ಯಾಣ ರಾಜ್ಯದ ಆಶಯ ಹೊಂದಿದ್ದ ವಾಲ್ಮೀಕಿಯು ರಾಮಾಯಣದಲ್ಲಿ ವಿವಿಧ ಪಾತ್ರಗಳ ಮೂಲಕ ಬದುಕಿನ ಪ್ರತಿ ಹಂತದಲ್ಲೂ ಅನುಸರಿಸಬೇಕಾದ ನೀತಿಯನ್ನು ಬೋಧಿಸಿದ್ದಾರೆ.

ರಾಮಾಯಣ ರಚಿಸುವ ಮೂಲಕ ಭಾರತೀಯ ಸಂಸ್ಕೃತಿಯ ಶಕ್ತಿ ಯಾಗಿ ರೂಪುಗೊಂಡಿದ್ದಾರೆ. ವಾಲ್ಮೀಕಿ ಯಂತಹ ದಾರ್ಶನಿಕರು, ಏಕಲವ್ಯ, ಮದಕರಿ ನಾಯಕ ರಂತಹ ವೀರಾಧಿವೀರರ ಪರಂಪರೆ ಹೊಂದಿರುವ ವಾಲ್ಮೀಕಿ ಸಮಾಜವು ಮಹಾ ಪುರುಷರ ಹಾದಿಯಲ್ಲಿ ನಡೆಯಬೇಕು ಎಂದು ತಿಳಿಸಿದರು.

 ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ಮಾತನಾಡಿ ರಾಮಾಯಣವು ಸತ್ಯ ಧರ್ಮ, ಮಾನವೀಯತೆಯನ್ನು ಕಲಿಸುತ್ತದೆ ವಾಲ್ಮೀಕಿಯು ಅಂದು ಕಂಡಿದ್ದ ಕಲ್ಯಾಣ ರಾಜ್ಯದ ಕಲ್ಪನೆ ಈಗಲೂ ಪ್ರಸ್ತುತ ವಾಗಿದ್ದು,

ಪಿರಿಯಾಪಟ್ಟಣದ ನಗರದಲ್ಲಿ ವಾಲ್ಮೀಕಿ ಭವನ ಸೇರಿದಂತೆ, ತಾಲೂಕಿನ ವಿವಿಧ ಗ್ರಾಮಗಳ ವಾಲ್ಮೀಕಿ ಸಮುದಾಯ ಭವನಗಳಿಗೆ ಅನುದಾನ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಪಟ್ಟಣದ ವಾಲ್ಮೀಕಿ ಭವನದಲ್ಲಿಯೇ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಗುವುದು ಎಂದರು.

ಮೈಲಾಕ್ ಅಧ್ಯಕ್ಷ ಹೆಚ್ ಡಿ ಗಣೇಶ್ ಮಾತನಾಡಿ ದಾರ್ಶನಿಕ ಮಹಾಶಯರ ಜಯಂತಿಗಳ ಆಚರಣೆಯನ್ನು ಮಾಡುವುದರ ಮೂಲಕ ಅವರ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಶ್ರೀ ಮಹರ್ಷಿ ವಾಲ್ಮೀಕಿ ರಚಿಸಿರುವಂತಹ ರಾಮಾಯಣ ದಂತಹ ಉತ್ತಮ ಕೊಡುಗೆಗಳನ್ನು ಅನುಸರಿಸಿದ್ದೇ ಆದಲ್ಲಿ ಎಲ್ಲಾ ಸಮುದಾಯದವರು ಮುಂದೆ ಬರಲು ಅನುಕೂಲವಾಗಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರೇಡ್ 2 ತಹಶೀಲ್ದಾರ್ ಶ್ರೀನಿವಾಸ್ ಮೂರ್ತಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕೃಷ್ಣೆಗೌಡ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಚಂದ್ರಶೇಖರ್, ಬಿಇಒ ರವಿ ಪ್ರಸನ್ನ, ವಾಲ್ಮೀಕಿ ಸಮಾಜದ ಅಧ್ಯಕ್ಷ ಪುಟ್ಟಣ್ಣ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ರಾಜಣ್ಣ, ಐಚನಹಳ್ಳಿ ನೀಲನಾಯಕ ಸೇರಿದಂತೆ ಇತರರು ಇದ್ದರು