Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸಿದ್ದರಾಮಯ್ಯ ವಿರುದ್ಧ ನಡೆದಿರುವ ಸ್ಟಿಂಗ್ ಆಪರೇಷನ್‌ನ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಾಗಬೇಕು; ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ


ಮೈಸೂರು; ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನಡೆದಿರುವ ಸ್ಟಿಂಗ್ ಆಪರೇಷನ್‌ನ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಾಗಬೇಕು. ಅವರನ್ನು ಕೂಡ ಪೊಲೀಸರು ಬಂಧಿಸಬೇಕು ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ತಂದೆ ಸಿದ್ದರಾಮಯ್ಯನವರ ವಿರುದ್ಧ ನಡೆದಿರುವ ಸ್ಟಿಂಗ್ ಆಪರೇಷನ್‌ನ ವಿಚಾರ ಕುರಿತು ನಾವು ಪೊಲೀಸರಲ್ಲಿ ದೂರು ದಾಖಲಿಸಿದ್ದೇವೆ. ಪೊಲೀಸರು ಪ್ರಾಮಾಣಿಕವಾಗಿ ತನಿಖೆ ನಡೆಸುವಂತೆ ಮನವಿ ಮಾಡಿದ್ದೇವೆ. ತನಿಖೆ ನಡೆಸುವ ಜವಾಬ್ದಾರಿ ಪೊಲೀಸರ ಮೇಲಿದೆ. ಯಾರು ಆರೋಪಿಗಳಿದ್ದಾರೆ ಅವರನ್ನು ಹುಡುಕಿ ಹಿಡಿಯುತ್ತಾರೆಂಬ ವಿಶ್ವಾಸ ಇದೆ. ಸ್ಟಿಂಗ್‌ನಲ್ಲಿರುವ ಇಬ್ಬರನ್ನು ಬಂಧಿಸಿ, ಅವರ ಹಿಂದೆ ಯಾರಿದ್ದಾರೆ ಎಂಬುದನ್ನು ವಿಚಾರಿಸಬೇಕು. ಈ ಉದ್ದೇಶದಿಂದಲೇ ತಂದೆಯವರು ಮೊದಲಿನಿಂದಲೂ ಆಗ್ರಹ ಮಾಡ್ತಿದ್ದಾರೆ. ಆ ಕಾರಣಕ್ಕೆ ದೂರು ನೀಡಿದ್ದಾರೆ ಎಂದರು.