Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಐಟಿ ಬಿಟಿ ಕಂಪನಿಗಳು, ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ನೀಡದೆ ನಿರಾಕರಿಸುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ


ಮೈಸೂರು; ಬೆಂಗಳೂರಿನಲ್ಲಿರುವ ಐಟಿ ಬಿಟಿ ಕಂಪನಿಗಳು, ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ನೀಡದೆ ನಿರಾಕರಿಸುತ್ತಿರುವ ಕ್ರಮವನ್ನು ಖಂಡಿಸಿ ಮಂಗಳವಾರ ಕರ್ನಾಟಕ ಸೇನಾಪಡೆಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಕೆಲಕಾಲ ಧರಣಿ ನಡೆಸಿ, ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರಿನ ಐಟಿ ಕಂಪನಿಗಳು ಹೊರರಾಜ್ಯದವರನ್ನು ಕಡಿಮೆ ವೇತನಕ್ಕೆ ನೇಮಕ ಮಾಡಿಕೊಳ್ಳುತ್ತಿವೆ. ಮತ್ತು ಸ್ಥಳೀಯ ಕನ್ನಡಿಗರನ್ನು ಹಾಗೂ ಮಾತೃಭಾಷೆ ಕನ್ನಡ ಇರುವವರನ್ನು ಕಡೆಗಣಿಸುತ್ತಿವೆ ಎಂದು ಯುವತಿಯೊಬ್ಬರು ವಿಡಿಯೋ ಮೂಲಕ ಅಸಮಾಧಾನ ವ್ಯಕ್ತಪಡಿಸಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ
“ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾಗುತ್ತಿರುವುದು ಗಂಭೀರ ವಿಷಯ ಎಂದು ಸರ್ಕಾರ ಪರಿಗಣಿಸಿದೆ. ಯಾವುದೇ ಖಾಸಗಿ ಸಂಸ್ಥೆ ಉದ್ದೇಶಪೂರ್ವಕವಾಗಿ ಕನ್ನಡಿಗರನ್ನು ಕಡೆಗಣಿಸುವುದು ಕಂಡುಬAದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿರುವುದು ಸ್ವಾಗತಾರ್ಹ ಎಂದು ಪ್ರತಿಭಟನಾಕಾರರು ಹೇಳಿದರು.
ರಾಜ್ಯದ ಐಟಿ-ಬಿಟಿ ಕಂಪನಿಗಳು, ಸರ್ಕಾರದಿಂದ ರಿಯಾಯಿತಿ ದರದಲ್ಲಿ ಭೂಮಿ, ವಿದ್ಯುತ್ ಪಡೆದು , ಜೊತೆಗೆ ನಮ್ಮ ರಾಜ್ಯದ ನೀರನ್ನು ಕುಡಿದು, ಅನ್ನವನ್ನು ತಿಂದು ನಮ್ಮ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ನೀಡದಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ.
ಈ ಕೂಡಲೇ ಐಟಿ-ಬಿಟಿ ಕಂಪನಿಗಳಲ್ಲಿ ಹಾಗೂ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಶೇಕಡಾ 60 ಉದ್ಯೋಗದಲ್ಲಿ ಮೀಸಲಾತಿ ಕಡ್ಡಾಯಗೊಳಿಸಬೇಕು ಎಂದು ರಾಜ್ಯ ಸರ್ಕಾರ ಶ್ವೇತ ಪತ್ರ ಹೊರಡಿಸಿ, ಸುಗ್ರೀವಾಜ್ಞೆ ಹೊರಡಿಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸೇನಾಪಡೆಯ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ, ಮುಖಂಡರುಗಳಾದ ಪ್ರಭುಶಂಕರ್, ವಿಜಯೇಂದ್ರ, ಸಿಂದುವಳ್ಳಿ ಶಿವಕುಮಾರ್, ಹನುಮಂತಯ್ಯ, ಬೋಗಾದಿ ಸಿದ್ದೇಗೌಡ, ಹೊನ್ನೇಗೌಡ, ಕುಮಾರ್ ಗೌಡ, ಕೃಷ್ಣೇಗೌಡ, ಶಿವರಾಂ, ಕುಮಾರ್ ಗೌಡ, ಗಿರೀಶ್, ಗಣೇಶ್ ಪ್ರಸಾದ್, ದರ್ಶನ್ ಗೌಡ, ರಾಧಾಕೃಷ್ಣ, ಮಧು ಕುಮಾರ್, ಮಣಿ, ಶಿವರಾಜ್ ನಾಗೇಂದ್ರ, ಪ್ರಕಾಶ್, ಪ್ರವೀಣ್ ಬಿ ಎಂ, ಪ್ರಭಾಕರ ಮತ್ತಿತರರು ಭಾಗವಹಿಸಿದ್ದರು.