
ಮೈಸೂರು : ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಅಧಿಕಾರಿಗಳು ತಪಾಸಣೆಗಳನ್ನು ಚುರುಕುಗೊಳಿಸಬೇಕು ಹಾಗೂ ನಿಯಮ ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಸಂಬAಧಿಸಿದ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು.
ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಕಾರಿ ಹಾಗೂ ಕಾರ್ಯಪಡೆ ಸಮಿತಿಯ ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು,
ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಹಾಗೂ ನಿಯಂತ್ರಣ) ಕಾಯ್ದೆ 1986 ರ ಕಲಂ 16 ಹಾಗೂ 17 ರಡಿಯ ನಿರೀಕ್ಷಕರಾಗಿ ಅಧಿಸೂಚಿಸಲ್ಪಟ್ಟ ಎಲ್ಲಾ ಅಧಿಕಾರಿಗಳು ತಮ್ಮ ಹೋಬಳಿವಾರು ಕನಿಷ್ಠ 15 ತಪಾಸಣೆಗಳನ್ನು ಮಾಸಿಕವಾಗಿ ತಪ್ಪದೇ ಕೈಗೊಳ್ಳಬೇಕು ಎಂದರು.
ಪ್ರತಿ ತಿಂಗಳು ತಾಲೂಕು ಮಟ್ಟದಲ್ಲಿ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಸಭೆಯನ್ನು ಆಯಾ ತಹಶೀಲ್ದಾರ್ಗಳ ಅಧ್ಯಕ್ಷತೆಯಲ್ಲಿ ನಿಯಮಿತವಾಗಿ ನಡೆಸಲು ನಿರ್ದೇಶನ ನೀಡಿದರು.
ತಾಲೂಕು ಆಡಳಿತ, ತಾಲೂಕು ಕಾನೂನು ಸೇವಾ ಪ್ರಾಧಿಕಾರ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಶಾಲೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಬಾಲಕಾರ್ಮಿಕ ಕಾಯ್ದೆ ಕುರಿತು ವ್ಯಾಪಕ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು.
ದಸರಾ ವಸ್ತುಪ್ರದರ್ಶನ ಆವರಣದಲ್ಲಿ, ಮಳಿಗೆಗಳಲ್ಲಿ ಮತ್ತು ಅಂಗಡಿಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಅಲ್ಲದೆ ಮಕ್ಕಳು ಪೆನ್, ಪೆನ್ಸಿಲ್, ಬಲೂನ್ ಹಾಗೂ ಇತರ ವಸ್ತುಗಳನ್ನು ಮಾರಾಟ ಮಾಡದಂತೆ ಸಂಬAಧಪಟ್ಟ ಅಧಿಕಾರಿಗಳು ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ದೀಪಾವಳಿ ಹಬ್ಬದ ಪ್ರಯುಕ್ತ ಮೈಸೂರು ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗುವ ಪಟಾಕಿ ಮಾರಾಟ ಮತ್ತು ತಯಾರಿಕಾ ಮಳಿಗೆಗಳು ಅಪಾಯಕಾರಿ ಉದ್ದಿಮೆಗಳ ವ್ಯಾಪ್ತಿಗೆ ಬರುತ್ತವೆ. ಆದ್ದರಿಂದ ಈ ಮಳಿಗೆಗಳಲ್ಲಿ ಯಾವುದೇ ಕಾರಣಕ್ಕೂ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಮಾಲೀಕರಿಗೆ ಜಾಗೃತಿ ಮೂಡಿಸಬೇಕು ಮತ್ತು ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾವಹಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ 2026-27 ನೇ ಸಾಲಿನ ಜುಲೈ 1 ರಿಂದ ಸೆಪ್ಟೆಂಬರ್ 30 ರವರೆಗೆ ನಡೆದಿರುವ ಬಾಲ, ಕಿಶೋರಾವಸ್ಥೆಯ ಕಾರ್ಮಿಕರ ತಪಾಸಣೆ ವಿವರಗಳು ಮತ್ತು ಹಮ್ಮಿಕೊಳ್ಳಲಾದ ಅರಿವು ಕಾರ್ಯಕ್ರಮಗಳ ಪ್ರಗತಿಯನ್ನು ಪರಿಶೀಲನೆ ಮಾಡಿದರು.
ಸಭೆಯಲ್ಲಿ ಮೈಸೂರು ಉಪವಿಭಾಗದ ಕಾರ್ಮಿಕ ಅಧಿಕಾರಿ ಚೇತನ್ ಕುಮಾರ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರವಿಚಂದ್ರ.ಎA, ಮಕ್ಕಳ ವಿಶೇಷ ಪೊಲೀಸ್ ಘಟಕ ಎಸಿಪಿ ಮಹಮ್ಮದ್ ಷರೀಪ್ ರಾವುತ್ತರ್, ಉಪ ವಿಭಾಗದ ಎಲ್ಲಾ ಹಿರಿಯ ಕಾರ್ಮಿಕ ನಿರೀಕ್ಷಕರು ಮತ್ತು ಕಾರ್ಮಿಕ ನಿರೀಕ್ಷಕರು, ಯೋಜನಾ ನಿರ್ದೇಶಕರು, ಓಉಔ ಸೊಸೈಟಿಗಳು , ಜಿಲ್ಲಾ ಕಾರ್ಮಿಕ ಸೊಸೈಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.