
ಮೈಸೂರು: ಜಿಲ್ಲಾ ಪಂಚಾಯತ್, ಮೈಸೂರು, ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಉತ್ತರ ವಲಯ, ಮೈಸೂರು ಇವರ ಆಶ್ರಯದಲ್ಲಿ ಆಯೋಜಿಸಲಾಗಿದ್ದ 2026-27ನೇ ಸಾಲಿನ ಚಾಮುಂಡಿ ಅಂತರವಲಯ ಮಟ್ಟದ ಕ್ರೀಡಾಕೂಟದಲ್ಲಿ ವಿಜಯನಗರದ ಸದ್ವಿದ್ಯಾ ಪ್ರೌಢಶಾಲೆ ಶಾಖೆಯು ತಾಲೂಕು ಮಟ್ಟದ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ಗಮನಾರ್ಹ ಸಾಧನೆ ಮಾಡಿದೆ.
ಕ್ರೀಡಾಕೂಟದ ವಿವಿಧ ಸ್ಪರ್ಧೆಗಳಲ್ಲಿ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ, ತಮ್ಮ ಕ್ರೀಡಾ ಪ್ರತಿಭೆ, ಶಿಸ್ತು, ಕ್ರೀಡಾಸ್ಫೂರ್ತಿ ಹಾಗೂ ಸಂಘಟಿತ ಪ್ರಯತ್ನದ ಮೂಲಕ ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಸಾಧನೆಯು ಶಾಲೆಯ ಕ್ರೀಡಾ ಕ್ಷೇತ್ರದ ನಿರಂತರ ಪ್ರಗತಿ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ನೀಡುತ್ತಿರುವ ಪ್ರೋತ್ಸಾಹಕ್ಕೆ ಸಾಕ್ಷಿಯಾಗಿದೆ.
ವಿದ್ಯಾರ್ಥಿಗಳ ಪರಿಶ್ರಮ, ದೈಹಿಕ ಶಿಕ್ಷಣ ಶಿಕ್ಷಕರ ಸಮರ್ಪಿತ ತರಬೇತಿ, ಶಿಕ್ಷಕ ವೃಂದದ ಸಹಕಾರ, ಪೋಷಕರ ಪ್ರೋತ್ಸಾಹ ಹಾಗೂ ಶಾಲಾ ಆಡಳಿತ ಮಂಡಳಿಯ ಮಾರ್ಗದರ್ಶನವು ಈ ಸಾಧನೆಗೆ ಪ್ರಮುಖ ಕಾರಣವಾಗಿದೆ.
ಶಾಲೆಯ ಈ ಹೆಮ್ಮೆಯ ಸಾಧನೆಗೆ ಆಡಳಿತ ಮಂಡಳಿಯ ಪದಾಧಿಕಾರಿಗಳು, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಸಂತಸ ವ್ಯಕ್ತಪಡಿಸಿ, ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳು ಮತ್ತು ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರನ್ನು ಅಭಿನಂದಿಸಿದ್ದಾರೆ. ಮುಂದಿನ ದಿನಗಳಲ್ಲಿಯೂ ವಿದ್ಯಾರ್ಥಿಗಳು ಉನ್ನತ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಇನ್ನಷ್ಟು ಸಾಧನೆಗಳನ್ನು ಮಾಡಲಿ ಎಂದು ಶುಭ ಹಾರೈಸಿದ್ದಾರೆ.
ವಾಲ್ಮೀಕಿ ಜಯಂತಿ ಆಚರಣೆ;
ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸದ್ವಿದ್ಯಾ ಆಂಗ್ಲೋ ಸಂಸ್ಕöÈತ ಪಾಠಶಾಲೆಯ ಆವರಣದ ಟಿ.ಪಿ ಕೈಲಾಸಂ ರಂಗಮAಟಪದಲ್ಲಿ ಆಚರಿಸಲಾಯಿತು. ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಅವರ ತತ್ವ, ಆದರ್ಶ, ಸಿದ್ದಾಂತಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ಈ ವೇಳೆ ಶಾಲೆಯ ಎಲ್ಲಾ ಬೋಧಕ ಮತ್ತು ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.
