ಮಿನಿ ಉದ್ಯೋಗ ಮೇಳ
ಮೈಸೂರು; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ನಗರಾಭಿವೃದ್ಧಿ ಹಾಗೂ ಉದ್ಯೋಗಾವಕಾಶ ಹೆಚ್ಚಿಸುವ ನಿಟ್ಟಿನಲ್ಲಿ ಅಕ್ಟೋಬರ್ 30 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಸಿದ್ದಾರ್ಥ್ ನಗರದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ಇಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಮೈಸೂರಿನ ಪ್ರಸಿದ್ಧ ಸಂಸ್ಥೆಗಳಾದ ಪ್ಯಾಲೇಸ್ ಸೋಡಾ ಮತ್ತು ಎಚ್.ಡಿ.ಎಫ್.ಸಿ ಲೈಫ್ ಕಂಪನಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಪ್ರತಿಗಳೊಂದಿಗೆ ಮೈಸೂರಿನ ಸಿದ್ಧಾರ್ಥನಗರದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರಕ್ಕೆ ನೇರವಾಗಿ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ 0821-2489972 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--°C
Mysore, IN
Loading...