ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ
ಮೈಸೂರು: ಇಲ್ಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಬ್ಯಾಂಕಿAಗ್, ಎಸ್‌ಎಸ್‌ಸಿ ಹಾಗೂ ಆರ್‌ಆರ್‌ಬಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಗ್ರಾಮೀಣ ಮತ್ತು ನಗರ ಪ್ರದೇಶದ ಪದವೀಧರರಿಗಾಗಿ 45 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ವಿವಿಧ ರಾಷ್ಟ್ರೀಯ ಮತ್ತು ಖಾಸಗಿ ವಲಯದ ಬ್ಯಾಂಕ್‌ಗಳು, ಎಸ್‌ಎಸ್‌ಸಿ ಹಾಗೂ ರೈಲ್ವೆ ನೇಮಕಾತಿ ಮಂಡಳಿಯ ಹುದ್ದೆಗಳಿಗೆ ಹಾಜರಾಗುವ ಆಸಕ್ತ ಅಭ್ಯರ್ಥಿಗಳು ಅ. 31 ರ ಒಳಗೆ ಬೆಳಿಗ್ಗೆ 10 ಗಂಟೆಯಿAದ ಸಂಜೆ 4 ಗಂಟೆಯೊಳಗೆ 0821-2515944 ಅಥವಾ 9964760090 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಕುಲಸಚಿವ ಪ್ರೊ. ಎಂ.ಪಿ. ಸದಾಶಿವ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--°C
Mysore, IN
Loading...