Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೈಸೂರು-ಚಾಮರಾಜನಗರ ರೈಲು ಮಾರ್ಗದ ಪರಿಶೀಲನೆ ನಡೆಸಿದ ಮೈಸೂರು ವಿಭಾಗದ ಡಿಆರ್‌ಎಂ

ಮೈಸೂರು; ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್ ಅವರು ಮೈಸೂರು-ಚಾಮರಾಜನಗರ ರೈಲು ಮಾರ್ಗದಲ್ಲಿ ಪರಿಶೀಲನೆ ನಡೆಸಿ, ರೈಲು ಕಾರ್ಯಾಚರಣೆ, ನಿಲ್ದಾಣಗಳಲ್ಲಿನ ಸೌಲಭ್ಯಗಳು ಹಾಗೂ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದರು.ಚಾಮರಾಜನಗರ ರೈಲು ನಿಲ್ದಾಣಕ್ಕೆ ಭೇಟಿ ನೀಡಿ, ಅಮೃತ ಭಾರತ್ ನಿಲ್ದಾಣ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಅವಲೋಕಿಸಿದರು. ನಿಲ್ದಾಣದಲ್ಲಿನ ಪ್ರಯಾಣಿಕರ ಸೌಲಭ್ಯಗಳು ಹಾಗೂ ಇತರ ಮೂಲಸೌಕರ್ಯಗಳ ಸ್ಥಿತಿ, ಪ್ರಯಾಣಿಕರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗುತ್ತಿರುವ ಕ್ರಮಗಳ ಕುರಿತು ಪರಿಶೀಲನೆ…

Read More

ಅ. 29ರಂದು ವಿದ್ಯಾಗಣಪತಿ ಮಂಡಳಿಯ ಗಣೇಶ ಮೂರ್ತಿ ವಿಸರ್ಜನೆ ಕಾರ್ಯಕ್ರಮಕ್ಕೆ ಸಹಕರಿಸಿ : ಜಿಲ್ಲಾಧಿಕಾರಿ ಶ್ರೀರೂಪ

ಚಾಮರಾಜನಗರ ; ಪಟ್ಟಣದ ರಥದ ಬೀದಿಯಲ್ಲಿ ಶ್ರೀ ವಿದ್ಯಾಗಣಪತಿ ಮಂಡಳಿಯವರಿAದ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿಯ ವಿಸರ್ಜನೆಯು ಇದೇ ಅಕ್ಟೋಬರ್ 29ರಂದು ನೆರವೇರಲಿದ್ದು, ಈ ಕಾರ್ಯಕ್ಕೆ ಎಲ್ಲಾ ಸಮುದಾಯದವರು ಸೌಹಾರ್ದತೆಯಿಂದ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಶ್ರೀರೂಪ ತಿಳಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿAದು ಗಣೇಶ ಮೂರ್ತಿಯ ವಿಸರ್ಜನೆ ಕಾರ್ಯಕ್ರಮ ಸಂಬAಧ ವಿವಿಧ ಕೋಮಿನ ಮುಖಂಡರು, ಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಚಾಮರಾಜನಗರ ಪಟ್ಟಣದಲ್ಲಿ ನಡೆಯಲಿರುವ 64ನೇ ವರ್ಷದ ಗಣೇಶ ಮೂರ್ತಿಯ ವಿಸರ್ಜನಾ ಕಾರ್ಯಕ್ರಮವಾಗಿದೆ. ಕಳೆದ ಬಾರಿ…

Read More

ವಿಜಯ ವಿಠ್ಠಲ ಪದವಿಪೂರ್ವ ಕಾಲೇಜಿನಲ್ಲಿ ಒತ್ತಡ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ

ಮೈಸೂರು; ವಿಜಯ ವಿಠ್ಠಲ ಪದವಿಪೂರ್ವ ಕಾಲೇಜಿನಲ್ಲಿ “ಒತ್ತಡ ನಿರ್ವಹಣೆ” ಕುರಿತು ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಾಚಾರ್ಯ ಎಚ್. ಸತ್ಯಪ್ರಸಾದ್, ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ, ಆತ್ಮವಿಶ್ವಾಸ ಮತ್ತು ವ್ಯಕ್ತಿತ್ವ ವಿಕಸನವನ್ನು ಉತ್ತೇಜಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಮಾನಸಿಕ ಸ್ಥೆöÊರ್ಯ, ಸಕಾರಾತ್ಮಕ ಮನೋಭಾವವನ್ನು ಬೆಳೆಸುವ ದೃಷ್ಟಿಯಿಂದ ಈ ಕಾರ್ಯಕ್ರಮ ಮಹತ್ವಪೂರ್ಣವಾದುದು ಎಂದರು.ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಚರಿತ.ಆರ್, ದೇವಿಕ.ಬಿ, ಚಿರಾಗ್.ಪಿ ಮತ್ತು ದಿಗಂತ್.ಆರ್.ಎಸ್ ಭಾಗವಹಿಸಿ ವಿದ್ಯಾರ್ಥಿಗಳಿಗೆ ಒತ್ತಡ ನಿರ್ವಹಣೆಯ ಮಹತ್ವದ ಕುರಿತು ಉಪಯುಕ್ತ ಮಾಹಿತಿಯನ್ನು ನೀಡಿದರು….

Read More

ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಸಾಧಿಸಲು ನಿರಂತರ ಅಭ್ಯಾಸ ಮತ್ತು ಪರಿಶ್ರಮವನ್ನು ರೂಢಿಸಿಕೊಳ್ಳಬೇಕು

ಮೈಸೂರು; ನಗರ ಕೇಂದ್ರ ಗ್ರಂಥಾಲಯ ಮೈಸೂರು ಹಾಗೂ ಬೆಂಗಳೂರಿನ ಜ್ಞಾನಗಂಗೋತ್ರಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಸಹಯೋಗದೊಂದಿಗೆ ಇಂದು ಕೆಎಎಸ್ ಪೂರ್ವಭಾವಿ ಪರೀಕ್ಷೆಗೆ ಸಂಬAಧಿಸಿದ ಮೂರನೇ ಅಣಕು ಪರೀಕ್ಷೆಯ ಮೊದಲ ಪತ್ರಿಕೆಯ ಅಣಕು ಪರೀಕ್ಷೆ ನಡೆಸಲಾಯಿತು.ಅಣಕು ಪರೀಕ್ಷೆಗೆ ಚಾಲನೆ ನೀಡಿದ ನಿವೃತ್ತ ಅಪರ ಜಿಲ್ಲಾಧಿಕಾರಿ ಟಿ. ಜವರೇಗೌಡ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಸಾಧಿಸಲು ನಿರಂತರ ಅಭ್ಯಾಸ ಮತ್ತು ಪರಿಶ್ರಮವನ್ನು ರೂಢಿಸಿಕೊಳ್ಳಬೇಕು ಹಾಗೂ ವಿದ್ಯಾರ್ಥಿಗಳಲ್ಲಿ ಸಾಧನೆಯ ಹಂಬಲ ಹಾಗೂ ಆರೋಗ್ಯಕರ ಸ್ಪರ್ಧಾ ಮನೋಭಾವ ಇರಬೇಕು ಎಂದರು.ಜೀವನದಲ್ಲಿ ನಡೆಯುವ…

Read More

ಓಟದ ಅಂಗಳದಲ್ಲಿ ಸದ್ವಿದ್ಯಾ ವಿದ್ಯಾರ್ಥಿಗಳ ಚಿನ್ನದ ಬೇಟೆ!

100, 200 ಮೀಟರ್ ಓಟದಲ್ಲಿ ಗೌತಮ್‌ಗೆ ಬಂಗಾರದ ಪದಕ; ವೈಯಕ್ತಿಕ ಚಾಂಪಿಯನ್‌ಷಿಪ್ ಕಿರೀಟ4 * 100 ಮೀಟರ್ ರಿಲೇ ಓಟದಲ್ಲೂ ಸದ್ವಿದ್ಯಾ ತಂಡಕ್ಕೆ ಚಿನ್ನದ ಸಂಭ್ರಮಮೈಸೂರು: ಕ್ರೀಡಾ ಕ್ಷೇತ್ರದಲ್ಲಿ ಪರಿಶ್ರಮ, ಶಿಸ್ತು ಹಾಗೂ ಛಲದೊಂದಿಗೆ ಮುನ್ನಡೆಯುತ್ತಿರುವ ಮೈಸೂರಿನ ವಿಜಯನಗರದ ಸದ್ವಿದ್ಯಾ ಸೆಮಿ ರೆಸಿಡೆನ್ಷಿಯಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳು, ತಾಲ್ಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಗಮನಾರ್ಹ ಸಾಧನೆ ಮಾಡುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ತಾಲ್ಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಸದ್ವಿದ್ಯಾ ಕಾಲೇಜಿನ…

Read More

ಪ್ರಜಾಸೇವಾ ವಿಶೇಷ ಇ-ಖಾತಾ ಆಂದೋಲನಕ್ಕೆ ಉತ್ತಮ ಸ್ಪಂದನೆ; 9 ವಲಯಗಳಿಂದ ಒಟ್ಟು 708 ಅರ್ಜಿಗಳ ಸ್ವೀಕೃತಿ

ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಸಾರ್ವಜನಿಕರಿಗೆ ಇ-ಖಾತಾ ಸೇವೆಯನ್ನು ತ್ವರಿತವಾಗಿ ಒದಗಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಪ್ರಜಾಸೇವಾ ವಿಶೇಷ ಇ-ಖಾತಾ ಆಂದೋಲನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ನಗರದ 9 ವಲಯಗಳಿಂದ ಒಟ್ಟು 708 ಅರ್ಜಿಗಳು ಸ್ವೀಕೃತವಾಗಿವೆ.ವಲಯವಾರು ಸ್ವೀಕೃತ ಅರ್ಜಿಗಳ ವಿವರ: ವಲಯ 1 ರಲ್ಲಿ 55 ಅರ್ಜಿಗಳು, ವಲಯ -2ರಲ್ಲಿ 124 ಅರ್ಜಿಗಳು, ವಲಯ- 3ರಲ್ಲಿ 144 ಅರ್ಜಿಗಳು, ವಲಯ -4ರಲ್ಲಿ 44 ಅರ್ಜಿಗಳು, ವಲಯ -5 ರಲ್ಲಿ 48 ಅರ್ಜಿಗಳು, ವಲಯ 6 ರಲ್ಲಿ…

Read More

ಸೇನೆ ಸೇರಬಯಸುವ ಯುವಕರಿಗೆ ಶಿವು ಸೈನಿಕ್ ಅಕಾಡೆಮಿಯಿಂದ ಉಚಿತ ದೈಹಿಕ ಸಾಮರ್ಥ್ಯ ಪರೀಕ್ಷೆ

ಪಿರಿಯಾಪಟ್ಟಣ: ದೇಶದ ಸೇನೆಯಲ್ಲಿ ಈ ಭಾಗದ ಯುವಕರು ಹೆಚ್ಚಾಗಿ ಸೇವೆ ಸಲ್ಲಿಸಬೇಕು. ದೇಶಭಕ್ತಿ ಹೆಚ್ಚಿಸಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಯುವಕ- ಯುವತಿಯರಿಗೆ ಉಚಿತ ತರಬೇತಿ ನೀಡಲಾಗುತ್ತಿದೆ ಎಂದು ಶಿವು ಸೈನಿಕ್ ಅಕಾಡೆಮಿ ಸಂಚಾಲಕ ರಾವಂದೂರು ಶಿವು ತಿಳಿಸಿದರು. ತಾಲೂಕಿನ ರಾವಂದೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಹಮ್ಮಿಕೊಂಡಿದ್ದ ದೈಹಿಕ ಸಾಮರ್ಥ್ಯ ಪರೀಕ್ಷೆ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸದ್ಯದಲ್ಲೇ ಚಿತ್ರದುರ್ಗದಲ್ಲಿ ನಡೆಯುವ ಭಾರತೀಯ ಸೇನೆಯ ನೇಮಕಾತಿಯಲ್ಲಿ ಈ ಭಾಗದ ಅನೇಕ ಯುವಕ-ಯುವತಿಯರು ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು ಅವರಿಗೆ…

Read More

ಯಾರಾಗ್ತಾರೆ ಹೆಚ್ ಡಿ ಕೋಟೆ, ಸರಗೂರು  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು?

ಅಭಿಪ್ರಾಯ ಸಂಗ್ರಹಿಸಿದ ಕೆಪಿಸಿಸಿ ವೀಕ್ಷಕರ ತಂಡ – ನ.2ರಂದು ಹೆಸರು ಪ್ರಕಟ  ಎಚ್ ಡಿ ಕೋಟೆ : ಪಕ್ಷದ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಪಕ್ಷದ ಕಾರ್ಯಕರ್ತರ ಸಂಘಟನಾ ಸಾಮರ್ಥ್ಯ, ಪಕ್ಷನಿಷ್ಠೆ ಹಾಗೂ ಜನಸಂಪರ್ಕವನ್ನು ಪರಿಗಣಿಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು ಎಂದು ಕೆಪಿಸಿಸಿ ವೀಕ್ಷಕ, ಮಾಜಿ ಸಂಸದ ಮುದ್ದಹನುಮೇಗೌಡ ತಿಳಿಸಿದರು. ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಸಂಘಟನ್ ಸೃಜನ್ ಅಭಿಯಾನ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯಕರ್ತನೇ ಸಾರ್ವಭೌಮ. ಹೀಗಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕ…

Read More

ಮಹಿಳಾ ಸ್ವಾತಂತ್ರ್ಯಕ್ಕೆ ನಾಂದಿ ಹಾಡಿದ್ದೇ ಬಸವಾದಿ ಪ್ರಮಥರು:ಸಚಿವ ಈಶ್ವರ ಖಂಡ್ರೆ

*ಸಾಮಾಜಿಕ ನ್ಯಾಯಕ್ಕೆ ನಡೆದ ಏಕೈಕ ಕ್ರಾಂತಿ ಕಲ್ಯಾಣ ಕಾಂತ್ರಿ ಕೆ.ಆರ್.ನಗರ, ಅ.28: ಲೋಕಕಲ್ಯಾಣಕ್ಕಾಗಿ, ಸಮಸಮಾಜಕ್ಕಾಗಿ, ಸಾಮಾಜಿಕ ನ್ಯಾಯಕ್ಕಾಗಿ ಜಗತ್ತಿನಲ್ಲಿ ಯಾವುದಾದರೂ ಕ್ರಾಂತಿ ನಡೆದಿದ್ದರೆ ಅದು ಕಲ್ಯಾಣದ ಕ್ರಾಂತಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.  ವೀರಶೈವ ಲಿಂಗಾಯತ ಮಹಾಸಭಾ ಮತ್ತು ವೀರಶೈವ ಲಿಂಗಾಯತ ಸಂಘಟನೆಗಳ ಒಕ್ಕೂಟದ ವತಿಯಿಂದ ಇಂದು ಕೆ.ಆರ್.ನಗರದಲ್ಲಿ ಆಯೋಜಿಸಲಾಗಿದ್ದ ಬಸವಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶ್ವಗುರು ಬಸವಣ್ಣನವರು ಈ ಜಗತ್ತಿನ ಬೆಳಕು ಎಂದು ಹೇಳಿದರು. ಕಾಯಕವೇ ಕೈಲಾಸ…

Read More

ಮೈಸೂರು ದಸರಾ ಯಶಸ್ಸಿನಲ್ಲಿ ಸ್ವಚ್ಛತಾ ಸೇನಾನಿಗಳ ಸೇವೆ ಅನನ್ಯ; ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ

ಮೈಸೂರು; ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ನಗರಕ್ಕೆ ಆಗಮಿಸಿದ ಸುಮಾರು 10 ಲಕ್ಷಕ್ಕೂ ಅಧಿಕ ಪ್ರವಾಸಿಗರಿಗೆ ಸ್ವಚ್ಛ ಹಾಗೂ ಸುಂದರ ವಾತಾವರಣವನ್ನು ಕಲ್ಪಿಸುವಲ್ಲಿ ಪೌರಕಾರ್ಮಿಕರು, ಒಳಚರಂಡಿ (ಯುಜಿಡಿ) ಕಾರ್ಮಿಕರು ಹಾಗೂ ವಾಹನ ಚಾಲಕರ ಸೇವೆ ಅತ್ಯಂತ ಮಹತ್ವದ್ದಾಗಿದೆ ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.ಬುಧವಾರ ಮೈಸೂರಿನ ರಾಜೇಂದ್ರ ಕಲಾಮಂದಿರದಲ್ಲಿ ದಸರಾ ಮಹೋತ್ಸವದ ಸಂದರ್ಭದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಸ್ವಚ್ಛತಾ ಸೇನಾನಿಗಳಿಗಾಗಿ ಆಯೋಜಿಸಿದ್ದ ಅಭಿನಂದನಾ ಸಮಾರಂಭ…

Read More