Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಅರಮನೆ, ಅಂಬಾರಿ ಕುರಿತು ನಾನು ನೀಡಿರುವ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ, ಕ್ಷಮೆ ಕೇಳುವ ಪ್ರಮೇಯವೇ ಇಲ್ಲ; ಸಚಿವ ಯತೀಂದ್ರ ಸಿದ್ದರಾಮಯ್ಯ


ಮೈಸೂರು: ಅಂಬಾ ವಿಲಾಸ ಅರಮನೆ, ದಸರಾದ ಜಂಬೂಸವಾರಿ ಅಂಬಾರಿ ಕುರಿತು ನಾನು ನೀಡಿರುವ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ, ಕ್ಷಮೆ ಕೇಳುವ ಪ್ರಮೇಯವೇ ಇಲ್ಲ ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಬುಧವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಅರಮನೆ ಸರ್ಕಾರದ ಆಸ್ತಿ. ಈ ಕುರಿತು ನಾನು ವಿಚಾರವನ್ನು ಸ್ಪಷ್ಟಪಡಿಸಿದ್ದೇನೆ. ಅದನ್ನೇ ಕೆಲವರು ತಪ್ಪಾಗಿ ಅರ್ಥೆÊಸಿಕೊಂಡಿದ್ದಾರೆ. ಈ ವಿಚಾರದಲ್ಲಿ ನಾನು ಯಾವುದೇ ತಪುö್ಪ ಮಾಡಿಲ್ಲ , ನಾನು ಪ್ರಜ್ಞಾಪೂರ್ವಕವಾಗಿ ಮಾತನಾಡಿದ್ದೇನೆ. ತಪ್ಪಾಗಿದ್ದರೆ ಕ್ಷಮೆ ಕೇಳಬಹುದಿತ್ತು. ನಾನು ಯಾವುದೇ ತಪುö್ಪ ಮಾಡಿಲ್ಲ ಹಾಗಾಗಿ ಕ್ಷಮೆ ಕೇಳುವುದಿಲ್ಲ ಎಂದು ತಿಳಿಸಿದರು.
ಸರ್ಕಾರಿ ಕಾರ್ಯಕ್ರಮ ಏಳು ದಿನ ಮಾಡಿ, ಅಂಬಾರಿ ಕೊಡುವುದಿಲ್ಲ ಎಂದು ಪತ್ರ ಬರೆದಿದ್ದರು. ಆ ಪತ್ರಕ್ಕೆ ನಾನು ಪ್ರತಿಕ್ರಿಯೆ ನೀಡಿದ್ದೇನೆಯೇ ಹೊರತು ನಾನು ರಾಜಮನೆತನದ ಬಗ್ಗೆ ಅಗೌರವ ತರುವ ರೀತಿ ಮಾತನಾಡಿಲ್ಲ . ನಮಗೆ ರಾಜಮನೆತನದ ಬಗ್ಗೆ ಗೌರವ ಇದೆ. ರಾಜ್ಯದ ಅಭಿವೃದ್ಧಿಗೆ ಅವರ ಕೊಡಿಗೆ ಅಪಾರ ಎಂದು ಹೇಳಿದರು.
ಅಂಬಾರಿ ಇಲ್ಲದೇ ಜಂಬೂಸವಾರಿ ಮಾಡಲಾಗುವುದಿಲ್ಲ. ಇದು ಪ್ರಜಾಪ್ರಭುತ್ವ, ಈಗ ಇರುವುದು ಜನರ ಸರ್ಕಾರ. ಜನರಿಗಾಗಿ ನಾವು ದಸರಾ ಮಾಡುತ್ತೇವೆ. ಹಾಗಾಗಿ ನನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ಪುನರುಚ್ಛರಿಸಿದರು.ರಾಜಮನೆತನದವರ ಜೊತೆ ಮುಖ್ಯಮಂತ್ರಿಗಳೇ ಮಾತನಾಡುತ್ತೇನೆ ಎಂದು ಹೇಳಿದ್ದಾರೆ. ಹಾಗಾಗಿ ನಾನು ಹೋಗಿ ಮಾತನಾಡುವ ಅಗತ್ಯವಿಲ್ಲ. ಅಂಬಾರಿ, ಅರಮನೆ ವಿಚಾರದಲ್ಲಿ ನಾನು ತಪ್ಪಾಗಿ ಮಾತನಾಡಿಲ್ಲ. ಅರಮನೆ ಸ್ವಾಧೀನ ಕಾಯ್ದೆ ಪ್ರಕಾರವೇ ನಾನು ಮಾತನಾಡಿದ್ದೇನೆ. ಈ ವಿಚಾರವನ್ನು ತಪ್ಪಾಗಿ ಅರ್ಥೆÊಸಿ ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಯತೀಂದ್ರ ಬೇಸರ ವ್ಯಕ್ತಪಡಿಸಿದರು.
ಮುಂದಿನ ಚುನಾವಣೆಗೆ ದಿಕ್ಸೂಚಿಯಲ್ಲ: ನಾಲ್ಕು ಕ್ಷೇತ್ರಗಳ ವಿಧಾನಪರಿಷತ್ ಚುನಾವಣೆ ಫಲಿತಾಂಶ ಮುಂದಿನ ಚುನಾವಣೆಗೆ ದಿಕ್ಸೂಚಿಯಲ್ಲ. ಈ ಹಿಂದಿನಿAದಲೂ ಮೂರು ಸ್ಥಾನಗಳನ್ನು ಬಿಜೆಪಿ-ಜೆಡಿಎಸ್ ಗೆಲ್ಲುತ್ತಾ ಬರುತಿತ್ತು. ಆದರೆ, ಈ ಬಾರಿ ಕಾಂಗ್ರೆಸ್‌ನ ಒಂದು ಕ್ಷೇತ್ರದಲ್ಲಿ ಅವರೇ ಗೆದ್ದಿದ್ದಾರೆ. ಕಾರಣಾಂತರಗಳಿAದ ಈ ಬಾರಿ ಸೋತಿದ್ದೇವೆ. ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ. ವಿಧಾನಸಭೆ ಚುನಾವಣೆ ಹಾಗೂ ವಿಧಾನಪರಿಷತ್ ಚುನಾವಣೆಗಳು ಬೇರೆ ಬೇರೆ ವಿಚಾರದ ಮೇಲೆ ನಡೆಯುತ್ತವೆ ಎಂದು ತಿಳಿಸಿದರು.
ಸ್ಟಿಂಗ್ ವಿಚಾರದಲ್ಲಿ ಪರಿಷತ್ ನಲ್ಲಿ ಸೋಲಾಯ್ತ ಎಂಬುದಕ್ಕೆ ಪ್ರತಿಕ್ರಿಯಿಸಿ, ಸ್ಟಿಂಗ್ ವಿಚಾರಕ್ಕಾಗಲಿ, ನಮ್ಮ ತಂದೆಯವರನ್ನು ಸಿಎಂ ಸ್ಥಾನದಿಂದ ಇಳಿಸಿದ್ದಕ್ಕಾಗಿ ಸೋಲಾಯ್ತು ಅಂತ ನಾನು ಹೇಳಲ್ಲ. ಜನರಲ್ ಎಲೆಕ್ಷನ್ ಆಗಿದ್ದರೆ ಅದನ್ನು ಪರಿಗಣನೆಗೆ ತೆಗೆದುಕೊಳ್ಳಬಹುದಿತ್ತು. ಸ್ಟಿಂಗ್ ವಿಚಾರದ ತನಿಖೆ ಸರಿಯಾಗಿ ನಡೆಯುತ್ತಿದೆ. ನಮ್ಮ ಸರ್ಕಾರದ ಹಾಗೂ ಪೊಲೀಸರ ಮೇಲೆ ನಂಬಿಕೆ ಇದೆ. ಈ ವಿಚಾರವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತಾರೆ. ಇದರ ಹಿಂದೆ ಯಾರಿದ್ದಾರೆ ಎಂಬುದು ಸಹಾ ಗೊತ್ತಾಗುತ್ತದೆ ಎಂದು ತಿಳಿಸಿದರು.