Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಅ. 29ರಂದು ವಿದ್ಯಾಗಣಪತಿ ಮಂಡಳಿಯ ಗಣೇಶ ಮೂರ್ತಿ ವಿಸರ್ಜನೆ ಕಾರ್ಯಕ್ರಮಕ್ಕೆ ಸಹಕರಿಸಿ : ಜಿಲ್ಲಾಧಿಕಾರಿ ಶ್ರೀರೂಪ


ಚಾಮರಾಜನಗರ ; ಪಟ್ಟಣದ ರಥದ ಬೀದಿಯಲ್ಲಿ ಶ್ರೀ ವಿದ್ಯಾಗಣಪತಿ ಮಂಡಳಿಯವರಿAದ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿಯ ವಿಸರ್ಜನೆಯು ಇದೇ ಅಕ್ಟೋಬರ್ 29ರಂದು ನೆರವೇರಲಿದ್ದು, ಈ ಕಾರ್ಯಕ್ಕೆ ಎಲ್ಲಾ ಸಮುದಾಯದವರು ಸೌಹಾರ್ದತೆಯಿಂದ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಶ್ರೀರೂಪ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿAದು ಗಣೇಶ ಮೂರ್ತಿಯ ವಿಸರ್ಜನೆ ಕಾರ್ಯಕ್ರಮ ಸಂಬAಧ ವಿವಿಧ ಕೋಮಿನ ಮುಖಂಡರು, ಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚಾಮರಾಜನಗರ ಪಟ್ಟಣದಲ್ಲಿ ನಡೆಯಲಿರುವ 64ನೇ ವರ್ಷದ ಗಣೇಶ ಮೂರ್ತಿಯ ವಿಸರ್ಜನಾ ಕಾರ್ಯಕ್ರಮವಾಗಿದೆ. ಕಳೆದ ಬಾರಿ ಚೆನ್ನಾಗಿ ನಡೆಸಲಾಗಿತ್ತು. ಈ ಬಾರಿಯು ಸಹ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ನಡೆಸಬೇಕಾಗಿದೆ. ಇದಕ್ಕಾಗಿ ಎಲ್ಲಾ ಸಮುದಾಯಗಳ ಮುಖಂಡರು ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಜಿಲ್ಲಾಡಳಿತದೊಂದಿಗೆ ಶಾಂತಿ, ಸಾಮರಸ್ಯದಿಂದ ಸಹಕರಿಸುವಂತೆ ಜಿಲ್ಲಾಧಿಕಾರಿಯವರು ಮನವಿ ಮಾಡಿದರು.
ಗಣೇಶ ಮೂರ್ತಿಯ ವಿಸರ್ಜನೆ ವೇಳೆ ಮೆರವಣಿಗೆ ಸಂಚರಿಸುವ ಮಾರ್ಗ ಹಾಗೂ ದೊಡ್ಡರಸನ ಕೊಳದಲ್ಲಿ ಲೈಟಿಂಗ್ಸ್ ವ್ಯವಸ್ಥೆ ಮಾಡಬೇಕು. ವಿದ್ಯುತ್ ತಂತಿಗಳು ಅಡಚಣೆಯಾಗದಂತೆ ನೋಡಿಕೊಳ್ಳಲು ವಿದ್ಯುತ್ ಸರಬರಾಜು ನಿಗಮದಿಂದ ಸಿಬ್ಬಂದಿಯನ್ನು ನಿಯೋಜಿಸಬೇಕು. ನಗರಸಭೆ ವತಿಯಿಂದ ರಸ್ತೆ ಸ್ವಚ್ಚತೆ, ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಕುಡಿಯುವ ನೀರು ಸಮರ್ಪಕವಾಗಿ ಪೂರೈಸಬೇಕು. ಮೆರವಣಿಗೆ ಮಾರ್ಗಗಳಲ್ಲಿ ಗುಂಡಿ ಮುಚ್ಚುವ ಕಾರ್ಯ ಶೀಘ್ರವಾಗಿ ಮುಗಿಸುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು ಮಾತನಾಡಿ, ಕಳೆದ ವರ್ಷ ಗಣಪತಿ ವಿಸರ್ಜನಾ ಮೆರವಣಿಗೆಯು ಎಲ್ಲ ಕೋಮಿನವರ ಸಹಕಾರದಿಂದ ಶಾಂತಿಯುತವಾಗಿ ನಡೆದಿದೆ. ಪ್ರತಿಬಾರಿಯು ಇದೇ ಸಹಕಾರ ನೀಡಬೇಕು. ಎಲ್ಲಾ ಸಮಾಜದವರು ಸಂಭ್ರಮ, ಸಡಗರದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರೆ. ಸಾಮರಸ್ಯದಿಂದ ನಡೆದುಕೊಂಡು ಬಂದಿರುವ ಗಣಪತಿ ವಿಸರ್ಜನಾ ಕಾರ್ಯಕ್ರಮ ಮುಂದುವರೆಯಬೇಕು ಎಂದರು.
ಗಣಪತಿ ವಿಸರ್ಜನಾ ಮೆರವಣಿಗೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ಬಂದೋಬಸ್ತ್ಗಾಗಿ ಸಕಲ ಸಿದ್ದತೆ ಕೈಗೊಳ್ಳಲಾಗಿದೆ. ಸಿಸಿ ಕ್ಯಾಮರಾಗಳನ್ನು ವಿವಿಧೆಡೆ ಅಳವಡಿಸಲಾಗಿದೆ. ಸುಳ್ಳುಸುದ್ದಿ ಹಬ್ಬಿಸುವವರ ವಿರುದ್ಧ ಹಾಗೂ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಲಾಗುವುದು. ಮುನ್ನೆಚ್ಚರಿಕೆಯಾಗಿ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆಂಬುಲೆನ್ಸ್, ಅಗ್ನಿಶಾಮಕ ದಳ, ಗೃಹರಕ್ಷಕ ದಳ, ಕಮಾಂಡೋ, ಇನ್ನಿತರ ಇಲಾಖೆಗಳ ಅಗತ್ಯ ಸೇವೆಗಳು ನಿಯೋಜನೆಯಾಗಲಿವೆ ಎಂದು ಮುತ್ತುರಾಜು ಅವರು ತಿಳಿಸಿದರು.
ನಗರದಲ್ಲಿ ನಡೆಯಲಿರುವ ಗಣೇಶ ಮೂರ್ತಿಯ ವಿಸರ್ಜನಾ ಕಾರ್ಯಕ್ರಮ ವ್ಯವಸ್ಥಿತ ನಿರ್ವಹಣೆಗಾಗಿ ಸೆಕ್ಟರಲ್ ಅಧಿಕಾರಿಗಳನ್ನು ನಿಯೋಜಿಸಲಾಗುವುದು. ಸಾರ್ವಜನಿಕರು ಕಟ್ಟಡಗಳ ಮೇಲಿನಿಂದ ಗಣೇಶ ಮೂರ್ತಿಯ ಮೆರವಣಿಗೆಯನ್ನು ವೀಕ್ಷಿಸುವುದನ್ನು ನಿಷೇಧಿಸಲಾಗಿದೆ. ಒಟ್ಟಾರೆ ಗಣೇಶ ಮೂರ್ತಿಯ ವಿಸರ್ಜನಾ ಕಾರ್ಯಕ್ರಮಕ್ಕೆ ಪೂರಕವಾದ ಮುಂಜಾಗ್ರತೆ ಹಾಗೂ ಸಿದ್ದತೆಗಳನ್ನು ಮಾಡಲಾಗುವುದೆಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಕೃತಿ ಬನ್ಸಾಲ್, ಹೆಚ್ಚುವರಿ ಜಿಲ್ಲಾಧಿಕಾರಿ ವಿ. ಪ್ರಿಯದರ್ಶಿನಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಡಿವೈಎಸ್‌ಪಿ ಸ್ನೇಹರಾಜ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ವೆಂಕಟೇಶ್, ನಗರಸಭೆ ಪೌರಾಯುಕ್ತರಾದ ಪರಶುರಾಮ್ ಛಲವಾದಿ, ತಹಶೀಲ್ದಾರ್ ಗಿರಿಜಾ, ಶ್ರೀ ವಿದ್ಯಾಗಣಪತಿ ಮಂಡಳಿ ಅಧ್ಯಕ್ಷರಾದ ನವೀನ್, ಮುಖಂಡರಾದ ಎಸ್. ಬಾಲಸುಬ್ರಮಣ್ಯ, ಶಿವಣ್ಣ, ನಟರಾಜು, ರಮೇಶ್, ರಾಘವೇಂದ್ರ, ಮಾರ್ಕೆಟ್ ಕುಮಾರ್, ಮೂಡ್ಲುಪುರ ನಂದೀಶ್, ಕೃಷ್ಣಪ್ಪ, ವಿರಾಟ್ ಶಿವು, ಇನ್ನಿತರ ಪದಾಧಿಕಾರಿಗಳು, ವಿವಿಧ ಕೋಮಿನ ಮುಖಂಡರು, ಸಭೆಯಲ್ಲಿ ಉಪಸ್ಥಿತರಿದ್ದರು