Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೈಸೂರು-ಚಾಮರಾಜನಗರ ರೈಲು ಮಾರ್ಗದ ಪರಿಶೀಲನೆ ನಡೆಸಿದ ಮೈಸೂರು ವಿಭಾಗದ ಡಿಆರ್‌ಎಂ

  • ಅಮೃತ ಭಾರತ್ ನಿಲ್ದಾಣ ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲನೆ

ಮೈಸೂರು; ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್ ಅವರು ಮೈಸೂರು-ಚಾಮರಾಜನಗರ ರೈಲು ಮಾರ್ಗದಲ್ಲಿ ಪರಿಶೀಲನೆ ನಡೆಸಿ, ರೈಲು ಕಾರ್ಯಾಚರಣೆ, ನಿಲ್ದಾಣಗಳಲ್ಲಿನ ಸೌಲಭ್ಯಗಳು ಹಾಗೂ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದರು.
ಚಾಮರಾಜನಗರ ರೈಲು ನಿಲ್ದಾಣಕ್ಕೆ ಭೇಟಿ ನೀಡಿ, ಅಮೃತ ಭಾರತ್ ನಿಲ್ದಾಣ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಅವಲೋಕಿಸಿದರು. ನಿಲ್ದಾಣದಲ್ಲಿನ ಪ್ರಯಾಣಿಕರ ಸೌಲಭ್ಯಗಳು ಹಾಗೂ ಇತರ ಮೂಲಸೌಕರ್ಯಗಳ ಸ್ಥಿತಿ, ಪ್ರಯಾಣಿಕರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗುತ್ತಿರುವ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.
ರೈಲು ಸೇವೆಗಳ ಸುರಕ್ಷಿತ ಹಾಗೂ ಸುಗಮ ಕಾರ್ಯಾಚರಣೆಗೆ ಸಂಬAಧಿಸಿದ ಅಂಶಗಳನ್ನು ಅವಲೋಕಿಸಿದರು. ಈ ಸಂದರ್ಭದಲ್ಲಿ ಲೋಕೋ ಪೈಲಟ್‌ಗಳು ಹಾಗೂ ಇತರ ರೈಲು ಸಿಬ್ಬಂದಿಯೊAದಿಗೆ ಸಂವಾದ ನಡೆಸಿ, ರೈಲು ಕಾರ್ಯಾಚರಣೆಗೆ ಸಂಬAಧಿಸಿದ ವಿಷಯಗಳ ಕುರಿತು ಮಾಹಿತಿ ಪಡೆದರು. ಕರ್ತವ್ಯ ನಿರ್ವಹಿಸುವಾಗ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವುದು, ಸದಾ ಜಾಗರೂಕತೆಯಿಂದ ಕಾರ್ಯನಿರ್ವಹಿಸುವುದು ಹಾಗೂ ರೈಲ್ವೆಯ ನಿಗದಿತ ಸುರಕ್ಷತಾ ನಿಯಮಗಳು ಮತ್ತು ಕಾರ್ಯವಿಧಾನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮಹತ್ವವನ್ನು ಒತ್ತಿಹೇಳಿದರು.
ಪರಿಶೀಲನೆಯ ಸಂದರ್ಭದಲ್ಲಿ ಮೈಸೂರು ವಿಭಾಗದ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶಮ್ಮಾಸ್ ಹಮೀದ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.