Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಜಿ.ಪಂ, ತಾಪಂ ಚುನಾವಣೆಗೆ ಪಕ್ಷದ ಕಾರ್ಯಕರ್ತರು ಸಜ್ಜಾಗಬೇಕು; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ


ಮೈಸೂರು; ಬರಲಿರುವ ಜಿ.ಪಂ, ತಾ.ಪಂ ಚುನಾವಣೆಯನ್ನು ಎದುರಿಸಲು ಪಕ್ಷದ ಕಾರ್ಯಕರ್ತರು ಈಗಿನಿಂದಲೇ ಸಜ್ಜಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಬುಧವಾರ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ದಿನದಲ್ಲಾದರೂ ಜಿ.ಪಂ, ತಾ.ಪಂ ಚುನಾವಣೆ ಘೋಷಣೆಯಾಗಬಹುದು. ಪಕ್ಷಕ್ಕಾಗಿ ದುಡಿದ ನಿಷ್ಠಾವಂತ ಆಕಾಂಕ್ಷಿಗಳಿಗೆ ಟಿಕೆಟ್ ನೀಡಲಾಗುವುದು. ಇದು ಕಾರ್ಯಕರ್ತರ ಚುನಾವಣೆಯಾಗಿರುವುದರಿಂದ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕಾಗಿದೆ ಎಂದರು.
ಯಾವುದೇ ಕ್ಷಣದಲ್ಲೂ ವಿಧಾನಸಭೆಗೆ ಚುನಾವಣೆ ನಡೆದರೂ ಹೆಚ್ಚಿನ ಸ್ಥಾನಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ, ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು. ಇದಕ್ಕಾಗಿ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕು, ಇದಕ್ಕಾಗಿ ಈಗಿನಿಂದಲೇ ಸಿದ್ಧತೆಗಳನ್ನು ನಡೆಸಬೇಕು ಎಂದು ತಿಳಿಸಿದರು.
ಸಭೆಗೂ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ರಾಹುಲ್ ಗಾಂಧಿಯಿAದ ದೇಶದಲ್ಲಿ ಅರಾಜಕತೆ ಸೃಷ್ಟಿಯಾಗುತ್ತಿದೆ. ‘ಕಾಂಗ್ರೆಸ್ ದೇಶದಲ್ಲಿ ಅರಾಜಕತೆ ಸೃಷ್ಟಿ ಮಾಡುತ್ತಿದೆ. ಹತಾಶರಾಗಿರುವ ಆ ಪಕ್ಷದವರು ಹಾಗು ರಾಹುಲ್ ಗಾಂಧಿಯವರು ಚುನಾಯಿತ ಸರ್ಕಾರ ಕೆಳಗಿಳಿಸುವ ಷಡ್ಯಂತ್ರವನ್ನು ಮಾಡುತ್ತಿದ್ದಾರೆ. ದೇಶದ ಬಗ್ಗೆ ನಿಷ್ಠೆ ಇಲ್ಲದ ಕಮ್ಯುನಿಸ್ಟ್ ಪಕ್ಷದ ಸಹಕಾರವನ್ನು ಪಡೆದುಕೊಳ್ಳುತ್ತಿದ್ದಾರೆ’ ಎಂದು ಆರೋಪಿಸಿದರು.
‘ಪ್ರಜಾಪ್ರಭುತ್ವ ಬುಡಮೇಲು ಮಾಡುವ ದುಸ್ಸಾಹಸಕ್ಕೆ ಕಾಂಗ್ರೆಸ್‌ನವರು ಕೈ ಹಾಕಿದ್ದಾರೆ. ಅತ್ಯಂತ ಹಿಂದುಳಿದ ವರ್ಗಕ್ಕೆ ಸೇರಿದ ಮೋದಿ 3ನೇ ಬಾರಿಗೆ ಪ್ರದಾನಿ ಆಗಿರುವುದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ ಅವರಿಗೆ ಎಂದು ಕಿಡಿಕಾರಿದರು.
ನ. 5ಕ್ಕೆ ಕಾಂಗ್ರೆಸ್ ವಿರುದ್ಧ ಹೋರಾಟ;
ದೇಶದ್ರೋಹಿಗಳೊಂದಿಗೆ ಸೇರಿ ಪ್ರಜಾಪ್ರಭುತ್ವ ಬುಡಮೇಲು ಮಾಡಲು ಹೊರಟಿರುವ ಕಾಂಗ್ರೆಸ್ ವಿರುದ್ಧ ಹೋರಾಟವನ್ನು ನ.5ರಿಂದ ಆರಂಭಿಸಲಾಗುವುದು. ಪ್ರಜಾಪ್ರಭುತ್ವವನ್ನು ಉಳಿಸಿ ಅರಾಜಕತೆಯನ್ನು ಅಳಿಸಿ ಎಂಬ ಶೀರ್ಷಿಕೆಯಲ್ಲಿ ಒಂದು ತಿಂಗಳವರೆಗೆ ಪಾದಯಾತ್ರೆ, ಪ್ರಬುದ್ಧರ ಸಭೆ, ಯುವಜನರೊಂದಿಗೆ ಸಂವಾದ ಮೊದಲಾದ ಚಟುವಟಿಕೆಗಳನ್ನು ನಡೆಸಲಾಗುವುದು. ಕಾಂಗ್ರೆಸ್ ಕುತಂತ್ರದ ಬಗ್ಗೆ ಜಾಗೃತಿ ಮೂಡಿಸಲಾಗುವುದು. ಅಭಿಯಾನದಂತೆ ಕಾರ್ಯಕ್ರಮ ನಡೆಯಲಿದೆ’ ಎಂದು ಮಾಹಿತಿ ನೀಡಿದರು.
ಮೈಸೂರಿನಲ್ಲಿ ನ.6 ರಂದು ಅಭಿಯಾನ ನಡೆಯಲಿದೆ. ಇದರಲ್ಲಿ 10 ರಿಂದ 15 ಸಾವಿರ ಮಂದಿ ಕಾರ್ಯಕರ್ತರು, ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಉಚ್ಚಾಟಿತ ಶಾಸಕ ಯತ್ನಾಳ್ ಅವರೊಂದಿಗಿನ ಮಾತುಕತೆಯ ಬಗ್ಗೆ ಪ್ರತಿಕ್ರಿಯಿಸಿ ಯತ್ನಾಳ್ ಅವರು ಎರಡು ಷರತ್ತು ಹಾಕಿದ್ದಾರೆ. ಮೊದಲನೇಯದ್ದು ನಾನು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಕೆಳಕ್ಕೆ ಇಳಿಯಬೇಕೆಂತೆ, ಎರಡೇಯದ್ದು 10 ವರ್ಷಗಳ ಕಾಲ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಬರೆದುಕೊಡಬೇಕೆಂತೆ, ಇದು ಆಗುತ್ತಾ ಎಂದು ಲೇವಡಿ ಮಾಡಿದರು. ನಾಲ್ಕು ವಿಧಾನಪರಿಷತ್ ಚುನಾವಣೆಯ ಫಲಿತಾಂಶ ಯತ್ನಾಳ್ ಅವರಿಗೆ ಉತ್ತರ ನೀಡಿದೆ ಎಂದರು.

`ಯತೀಂದ್ರ ರಾಜಮನೆತನದವರ ಕ್ಷಮೆಯಾಚಿಸಲಿ’;
ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಅವರು, ಮೈಸೂರಿನ ರಾಜಮನೆತನಕ್ಕೆ ಅಗೌರವ ತರುವ ರೀತಿಯಲ್ಲಿ ಮಾತನಾಡಿರುವುದು ಅಕ್ಷಮ್ಮ. ಅಪಮಾನ ಮಾಡುವಂತೆ ಹೇಳಿಕೆ ನೀಡಿರುವುದು ಸರಿಯಲ್ಲ. ರಾಜಮನೆತನದವರಿಗೆ ಅವಮಾನ ಮಾಡಲು ಇವರಿಗೆ ಯಾರೂ ಅಧಿಕಾರವನ್ನು ಕೊಟ್ಟಿಲ್ಲ, ಕೂಡಲೇ ರಾಜಮನೆತನದ ಕ್ಷಮೆಯನ್ನು ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು.

ಸಿಹಿ ವಿತರಿಸಿ ಸಂಭ್ರಮಾಚರಣೆ; ವಿಧಾನಪರಿಷತ್‌ನ ನಾಲ್ಕು ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿರುವ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಸಂಭ್ರಮಾಚರಣೆ ನಡೆಸಿದರು.
ಪಕ್ಷದ ಮುಖಂಡರು ಬಿ.ವೈ.ವಿಜಯೇಂದ್ರ ಸಿಹಿ ತಿನಿಸಿ ಹರ್ಷ ವ್ಯಕ್ತಪಡಿಸಿದರು. ಬಳಿಕ ನೆರೆದಿದ್ದವರಿಗೆ ಸಿಹಿ ವಿತರಿಸಲಾಯಿತು.