Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಉದ್ಯಮದಲ್ಲಿ ಯಶಸ್ಸು ಸಾಧಿಸಲು ಸವಾಲುಗಳನ್ನು ಧೈರ್ಯದಿಂದ ಎದುರಿಸಿ

ಮೈಸೂರು; ಹಾರ್ಟ್ ಸಂಸ್ಥೆಯ ವತಿಯಿಂದ ಗುರುವಾರ ಸಂಸ್ಥೆಯ ಸಭಾಂಗಣದಲ್ಲಿ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಈ ಕಾರ್ಯಾಗಾರದಲ್ಲಿ ಸುಮಾರು ೩೬ ಶಿಬಿರಾರ್ಥಿಗಳು ಭಾಗವಹಿಸಿ ಅಣಬೆ ಕೃಷಿ ಹಾಗೂ ಸ್ವಯಂ ಉದ್ಯೋಗದ ಅವಕಾಶಗಳ ಕುರಿತು ತರಬೇತಿ ಪಡೆದರು.ಕಾರ್ಯಾಗಾರವನ್ನು ಉದ್ಘಾಟಿಸಿದ ಶ್ರೀರಾಂಪುರ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೋಟೆಹುಂಡಿ ಮಹದೇವ ಮಾತನಾಡಿ , ಉದ್ಯಮಿಗಳು ಯಾವುದೇ ಉದ್ಯಮವನ್ನು ಆರಂಭಿಸಲು ಪರಿಶ್ರಮ, ತಾಳ್ಮೆ, ಶಿಸ್ತು, ನಿರಂತರ ಪ್ರಯತ್ನ ಮತ್ತು ಆತ್ಮವಿಶ್ವಾಸ ಅತ್ಯಗತ್ಯ ಎಂದು ತಿಳಿಸಿದರು. ಉದ್ಯಮದಲ್ಲಿ ಯಶಸ್ಸು ಸಾಧಿಸಲು…

Read More

ಸಕಾಲಿಕ ಚಿಕಿತ್ಸೆಯಿಂದ ಜೀವ ರಕ್ಷಣೆ ಸಾಧ್ಯ; ಡಾ. ನಾಗೇಶ್ ಪಿ. ಆರಾಧ್ಯ

ಮೈಸೂರು: ಸಕಾಲಿಕ ಚಿಕಿತ್ಸೆಯಿಂದ ಜೀವ ರಕ್ಷಣೆ ಸಾಧ್ಯ ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ನಾಗೇಶ್ ಪಿ. ಆರಾಧ್ಯ ಹೇಳಿದರು.ಜಿಲ್ಲಾ ಪಂಚಾಯತ್ ಮೈಸೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಹಾಗೂ ನಿರಾಶ್ರಿತರ ಪರಿಹಾರ ಕೇಂದ್ರ ಮೈಸೂರು ಇವುಗಳ ಸಂಯುಕ್ತಾಶ್ರಯದಲ್ಲಿ ಗುರುವಾರ ಮೈಸೂರಿನ ಜಿಲ್ಲಾ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ ವಿಶ್ವ ಸ್ಟ್ರೋಕ್ ದಿನ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,ಸಾರ್ವಜನಿಕರಿಗೆ ಮೆದುಳಿನ ಆರೋಗ್ಯ ಸೇವೆಯನ್ನು ಸುಲಭವಾಗಿ ತಲುಪಿಸುವುದು ನಮ್ಮ ಆದ್ಯತೆಯಾಗಿದೆ. ಸ್ಟ್ರೋಕ್…

Read More

ಐಚನಹಳ್ಳಿ ಗ್ರಾಮದ ಸರ್ಕಾರಿ ರಸ್ತೆ, ಕೆರೆ ಒತ್ತುವರಿ ತೆರವಿಗೆ ರೈತರ ಅಗ್ರಹ

ಪಿರಿಯಾಪಟ್ಟಣ: ರೈತರು ಹಲವು ದಶಕಗಳಿಂದ ಕೃಷಿ ಚಟುವಟಿಕೆಗಳಿಗೆ ಬಳಸುತ್ತಿದ್ದ ರೂಢಿಗತ ರಸ್ತೆಗೆ ತಂತಿ ಬೇಲಿ ಹಾಗೂ ಸಿ.ಸಿ. ಕ್ಯಾಮೆರಾ ಅಳ ವಡಿಸಿ ಕೃಷಿ ಮಾಡಲು ತೊಂದರೆ ಕೊಡುತ್ತಿದ್ದಾರೆ ಎಂದು ಜಮೀನು ಮಾಲಿಕ ರಾಜು ಪಿ ಎಂ ತಿಳಿಸಿದರು. ಪಟ್ಟಣದ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಐಚನಹಳ್ಳಿ ಗ್ರಾಮದ ಸರ್ವೆ ನಂಬರ್ 51ರ ಜಮೀನುಗಳಲ್ಲಿ 40 ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿದ್ದೇವೆ. ಆದರೆ ಇತ್ತೀಚಿನ ದಿನಗಳಲ್ಲಿ ಎದುರಾಗಿರುವ ಸಮಸ್ಯೆಗಳಿಂದ ಕೃಷಿ ಚಟುವಟಿಕೆ…

Read More

ಮೈಸೂರು ರಾಜಮನೆತನದವರ ಬಗ್ಗೆ ಬಹಳ ಹಗುರವಾಗಿ ಮಾತನಾಡುವುದು ಸರಿಯಲ್ಲ; ಹೆಚ್.ವಿಶ್ವನಾಥ್

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಮಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯನವರು ಮೈಸೂರಿನ ಇತಿಹಾಸ ಗೊತ್ತಿಲ್ಲದವರಂತೆ ಮಾತನಾಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಮಂತ್ರಿ ಇನ್ನಾದರೂ ಮೈಸೂರಿನ ಇತಿಹಾಸ ಓದಬೇಕು. ಮೈಸೂರು ರಾಜಮನೆತನದ ಹಿನ್ನೆಲೆಯನ್ನು ತಿಳಿದುಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ತಿಳಿಸಿದರು.ಗುರುವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯನವರು ಮೈಸೂರು ರಾಜಮನೆತನದ ಬಗ್ಗೆ ಬಹಳ ಹಗುರವಾಗಿ ಮಾತನಾಡಿದ್ದಾರೆ. ಇದು ಅವರಿಗೆ ಶೋಭೆ ತರುವುದಿಲ್ಲ. ಅವರಿಗೆ…

Read More

ಸೇಂಟ್ ಮೇರಿಸ್ -ಸೇಂಟ್ ಜೋಸೆಫ್ಸ್ ಶಾಲೆಯಲ್ಲಿ ಆಹಾರ ಮೇಳ 

ಎಚ್ ಡಿ ಕೋಟೆ : ವಿದ್ಯಾಸಂಸ್ಥೆಗಳು ಕೇವಲ ಶಿಕ್ಷಣ ನೀಡುವುದಲ್ಲ. ಜೊತೆಗೆ ಮಕ್ಕಳಿಗೆ ಹಂಚಿ ತಿನ್ನುವ ಮೂಲಕ ನಾವೆಲ್ಲರೂ ಒಂದೇ, ಒಂದೇ ಕುಟುಂಬದವರು ಎಂಬ ಭಾವನೆ ಮಕ್ಕಳಲ್ಲಿ ಮೂಡಬೇಕು ಎಂಬ ದೃಷ್ಟಿಯಿಂದ ಆಹಾರ ಮೇಳ ಆಯೋಜಿಸಲಾಗಿದೆ ಎಂದು ಸೇಂಟ್ ಮೇರಿಸ್- ಸೇಂಟ್ ಜೋಸೆಫ್ಸ್ ವಿದ್ಯಾಸಂಸ್ಥೆಯ ವ್ಯವಸ್ಥಾಪಕರಾದ ಡಾ. ಬರ್ನಾಡ್ ಪ್ರಕಾಶ್ ಹೇಳಿದರು.  ಪಟ್ಟಣದ ಸೇಂಟ್ ಮೇರಿಸ್- ಸೇಂಟ್ ಜೋಸೆಫ್ಸ್ ವಿದ್ಯಾಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ  ಆಹಾರ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ  ಡಾ. ಬರ್ನಾಡ್ ಪ್ರಕಾಶ್,  ಇತ್ತೀಚಿನ ದಿನಗಳಲ್ಲಿ…

Read More

ಮಾರಮ್ಮ ದೇವಸ್ಥಾನ ನಿರ್ಮಾಣಕ್ಕೆ ಒಂದು ಲಕ್ಷ ರೂ. ನೀಡಿದ ಶಂಕರೇಗೌಡ 

ಎಚ್ ಡಿ ಕೋಟೆ : ಸಮಾಜ ಸೇವಕ ನಲ್ಲೂರು ಶಂಕರೇಗೌಡರು ಬುಧವಾರ ತಾಲೂಕಿನ ಹಂಪಾಪುರ ಜಿಲ್ಲಾ ಪಂಚಾಯತ್ ವ್ಯಾಪ್ತಿಯ  ಬಾಚೇಗೌಡನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಕುಂದು ಕೊರತೆ ಆಲಿಸಿದರು.  ನಲ್ಲೂರು ಶಂಕರೇಗೌಡರನ್ನ ಆತ್ಮೀಯವಾಗಿ ಬರಮಾಡಿಕೊಂಡ ಗ್ರಾಮಸ್ಥರು, ಮೂಲಭೂತ ಸೌಕರ್ಯ ಕೊರತೆಯಿಂದ ತಾವು ಅನುಭವಿಸುತ್ತಿರುವ ಸಂಕಷ್ಟಗಳನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು.  ಗ್ರಾಮದಲ್ಲಿ ಮೂಲಭೂತ ಸೌಕರ್ಯ ಕೊರತೆಯಿಂದ ದಿನನಿತ್ಯ ಜನ ತೊಂದರೆ ಪಡುವಂತಾಗಿದೆ. ಹದಗೆಟ್ಟ ರಸ್ತೆಯಿಂದ ತಿರುಗಾಡಲು ಕಷ್ಟವಾಗಿದೆ. ಒಳಚರಂಡಿ, ಕುಡಿಯುವ ನೀರಿನ ಸಮಸ್ಯೆ ಹೇಳತೀರದಾಗಿದೆ. ಜನಪ್ರತಿನಿಧಿಗಳು ನಮ್ಮ…

Read More

ರಾಜಮನೆತನಕ್ಕೆ ಸಚಿವ ಡಾ. ಯತೀಂದ್ರ ಅವಮಾನ ಮಾಡಿರುವುದನ್ನು ಖಂಡಿಸಿ ಪ್ರತಿಭಟನೆ

ಮೈಸೂರು; ಅಂಬಾವಿಲಾಸ ಅರಮನೆ, ದಸರಾ ಆಚರಣೆಯ ವಿಚಾರವಾಗಿ ರಾಜಮನೆತನದವರಿಗೆ ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯನವರು ಹಗುರವಾಗಿ ಮಾತನಾಡಿ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ನಗರದಲ್ಲಿ ಗುರುವಾರ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು.ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಇತಿಹಾಸಕ್ಕೆ ಅಪಮಾನ ಬೇಡ, ರಾಜರ ಕೊಡುಗೆ ಸ್ಮರಿಸೋಣ, ರಾಜಮನೆತನವಿಲ್ಲದೆ ಮೈಸೂರಿಲ್ಲ, ಮೈಸೂರಿಲ್ಲದೆ ನಾವಿಲ್ಲ ಎಂಬ ಪ್ಲೇ ಕಾರ್ಡ್ ಪ್ರದರ್ಶಿಸಿದರು. ಅಲ್ಲದೆ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಭಾವಚಿತ್ರಕ್ಕೆ ಎಲುಬಿಲ್ಲದ ನಾಲಿಗೆ…

Read More