Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮಾರಮ್ಮ ದೇವಸ್ಥಾನ ನಿರ್ಮಾಣಕ್ಕೆ ಒಂದು ಲಕ್ಷ ರೂ. ನೀಡಿದ ಶಂಕರೇಗೌಡ 

ಎಚ್ ಡಿ ಕೋಟೆ : ಸಮಾಜ ಸೇವಕ ನಲ್ಲೂರು ಶಂಕರೇಗೌಡರು ಬುಧವಾರ ತಾಲೂಕಿನ ಹಂಪಾಪುರ ಜಿಲ್ಲಾ ಪಂಚಾಯತ್ ವ್ಯಾಪ್ತಿಯ  ಬಾಚೇಗೌಡನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಕುಂದು ಕೊರತೆ ಆಲಿಸಿದರು.  ನಲ್ಲೂರು ಶಂಕರೇಗೌಡರನ್ನ ಆತ್ಮೀಯವಾಗಿ ಬರಮಾಡಿಕೊಂಡ ಗ್ರಾಮಸ್ಥರು, ಮೂಲಭೂತ ಸೌಕರ್ಯ ಕೊರತೆಯಿಂದ ತಾವು ಅನುಭವಿಸುತ್ತಿರುವ ಸಂಕಷ್ಟಗಳನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು. 

ಗ್ರಾಮದಲ್ಲಿ ಮೂಲಭೂತ ಸೌಕರ್ಯ ಕೊರತೆಯಿಂದ ದಿನನಿತ್ಯ ಜನ ತೊಂದರೆ ಪಡುವಂತಾಗಿದೆ. ಹದಗೆಟ್ಟ ರಸ್ತೆಯಿಂದ ತಿರುಗಾಡಲು ಕಷ್ಟವಾಗಿದೆ. ಒಳಚರಂಡಿ, ಕುಡಿಯುವ ನೀರಿನ ಸಮಸ್ಯೆ ಹೇಳತೀರದಾಗಿದೆ. ಜನಪ್ರತಿನಿಧಿಗಳು ನಮ್ಮ ನೋವಿಗೆ ಸ್ಪಂದಿಸುತ್ತಿಲ್ಲ. ಸಮಸ್ಯೆಗಳನ್ನು ಬಗೆಹರಿಸುತ್ತಿಲ್ಲ. ಏನು ಮಾಡಬೇಕು ಎಂದು ನಮಗೆ ಗೊತ್ತಾಗುತ್ತಿಲ್ಲ ಎಂದು ಅವಲತ್ತುಕೊಂಡರು.  ಗ್ರಾಮಸ್ಥರ ನೋವಿಗೆಸಕಾರಾತ್ಮಕವಾಗಿ  ಸ್ಪಂದಿಸಿದ ಸಮಾಜ ಸೇವಕ ಶಂಕರೇಗೌಡ, ಗ್ರಾಮದ ಅಭಿವೃದ್ಧಿಗೆ ತಮ್ಮ ಕೈಲಾದ ಸಹಾಯ ಮಾಡುವುದರ ಜೊತೆಗೆ ಮುಂದಿನ ದಿನಗಳಲ್ಲಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು. 

ಇದೇ ವೇಳೆ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಮಾರಮ್ಮ ದೇವಸ್ಥಾನ ನಿರ್ಮಾಣಕ್ಕೆ ಶಂಕರೇಗೌಡ ಸ್ನೇಹ ಬಳಗ ವತಿಯಿಂದ ಒಂದು ಲಕ್ಷ ರೂಪಾಯಿ ನೀಡಲಾಯಿತು.  ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು, ಯುವಕರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು.