Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೈಸೂರು ರಾಜಮನೆತನದವರ ಬಗ್ಗೆ ಬಹಳ ಹಗುರವಾಗಿ ಮಾತನಾಡುವುದು ಸರಿಯಲ್ಲ; ಹೆಚ್.ವಿಶ್ವನಾಥ್

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಮಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯನವರು ಮೈಸೂರಿನ ಇತಿಹಾಸ ಗೊತ್ತಿಲ್ಲದವರಂತೆ ಮಾತನಾಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಮಂತ್ರಿ ಇನ್ನಾದರೂ ಮೈಸೂರಿನ ಇತಿಹಾಸ ಓದಬೇಕು. ಮೈಸೂರು ರಾಜಮನೆತನದ ಹಿನ್ನೆಲೆಯನ್ನು ತಿಳಿದುಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ತಿಳಿಸಿದರು.
ಗುರುವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯನವರು ಮೈಸೂರು ರಾಜಮನೆತನದ ಬಗ್ಗೆ ಬಹಳ ಹಗುರವಾಗಿ ಮಾತನಾಡಿದ್ದಾರೆ. ಇದು ಅವರಿಗೆ ಶೋಭೆ ತರುವುದಿಲ್ಲ. ಅವರಿಗೆ ಅನುಭವವಿಲ್ಲ, ಅನುಭವ ಇಲ್ಲದವರಿಗೆ ಜವಾಬ್ದಾರಿ ನೀಡಿದರೆ ಏನಾಗುತ್ತದೆ ಎಂಬುದಕ್ಕೆ ಇದು ಸಾq್ಷಯಾಗಿದೆ ಎಂದು ಕಿಡಿಕಾರಿದರು. ಯತೀಂದ್ರ ಅವರು ಜಂಭದ ಕೋಳಿಯ ರೀತಿ ಮಾತನಾಡುವುದು ಶೋಭೆಯಲ್ಲ. ಈ ವಿಚಾರದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಸರಿಯಾಗಿ ಮಾತನಾಡಿದ್ದಾರೆ. ಈ ಬೆಳವಣಿಗೆಯಿಂದ ರಾಜಮನೆತನಕ್ಕೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ಹೇಳಿದ್ದಾರೆ ಎಂದರು.
ಈ ಹಿಂದೆ ಚಾಮುಂಡೇಶ್ವರಿ ಉಪ ಚುನಾವಣೆ ಪ್ರಚಾರಕ್ಕೆ ಬರುವಂತೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರನ್ನು ಮನವಿ ಮಾಡಿಕೊಂಡೆವು. ಅಂದು ಮಹಾರಾಜರು ಬರದೇ ಹೋಗಿದ್ದರೆ ಸಿದ್ದರಾಮಯ್ಯ ಗೆಲ್ಲಲು ಆಗುತ್ತಿರಲಿಲ್ಲ. ಅವರು ಸಿಎಂ ಕೂಡ ಆಗುತ್ತಿರಲಿಲ್ಲ. ಆದರೆ ಶ್ರೀಕಂಠದತ್ತರ ಬಗ್ಗೆಯೂ ಸಿದ್ದರಾಮಯ್ಯ ಒಳ್ಳೆಯ ಮಾತುಗಳನ್ನು ಆಡಲಿಲ್ಲ ಎಂದು ಆರೋಪಿಸಿದರು.
ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಜಯಭೇರಿ ಬಾರಿಸಿದೆ. ಈ ಚುನಾವಣೆಯಲ್ಲಿ ಪದವೀಧರರು, ಶಿಕ್ಷಕರು ಮಾತ್ರ ಮತ ಚಲಾಯಿಸಿದ್ದಾರೆ. ಆದರೆ ಫಲಿತಾಂಶ ಹೊರಬೀಳುತ್ತಿದ್ದಂತೆ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ೨೦೨೮ಕ್ಕೆ ನಾವೇ ಅಧಿಕಾರಕ್ಕೆ ಬರುತ್ತೇವೆ ಅಂತ ಕೂಗಾಡುತ್ತಿದ್ದಾರೆ. ಆದರೆ ಪ್ರಧಾನಿ ಪ್ರತಿನಿಧಿಸುತ್ತಿರುವ ವಾರಾಣಸಿ ಕ್ಷೇತ್ರದಲ್ಲಿ ಬಿಜೆಪಿ ಸೋತಿದೆ, ಅಲ್ಲಿ ಸಮಾಜವಾದಿ ಪಕ್ಷ ಗೆದ್ದಿದೆ ಎಂದು ಹೇಳಿದರು.

ಬಾಕ್ಸ್ ನ್ಯೂಸ್
ಬಾಂಬೆ ಡೇಸ್’ ಪುಸ್ತಕ ಬಿಡುಗಡೆ ಮಾಡುವುದಿಲ್ಲ;ಹೆಚ್.ವಿಶ್ವನಾಥ್
ಬಾಂಬೆ ಡೇಸ್ ಪುಸ್ತಕವನ್ನು ನಾನು ಸಂಪೂರ್ಣವಾಗಿ ಬರೆದಿದ್ದೇನೆ. ಆದರೆ ಪ್ರಕಟ ಮಾಡದಿರಲು ನಿರ್ಧರಿಸಿದ್ದೇನೆ. ಪುಸ್ತಕ ಬಿಡುಗಡೆ ಮಾಡಿದರೆ ರಾಜಕಾರಣದ ಬಗ್ಗೆ ಜನ ಮತ್ತಷ್ಟು ಅಸಹ್ಯಪಟ್ಟುಕೊಳ್ಳುತ್ತಾರೆ ಎಂದರು.
ಜನರಿಗೆ ಈಗಾಗಲೇ ರಾಜಕೀಯದ ಬಗ್ಗೆ ಅಸಹ್ಯವಾಗುವಂತೆ ಮಾಡಿದ್ದಾರೆ. ಈಗ ಇನ್ನಷ್ಟು ಅಸಹ್ಯ ಮಾಡಿಸುವುದು ನನಗೆ ಇಷ್ಟವಿಲ್ಲ. ಹೀಗಾಗಿ ‘ಬಾಂಬೆ ಡೇಸ್’ ಪುಸ್ತಕ ಬಿಡುಗಡೆ ಮಾಡುವುದಿಲ್ಲ ಎಂದು ಮಾಜಿ ಸಚಿವ ಹೆಚ್.ವಿಶ್ವನಾಥ್ ತಿಳಿಸಿದರು.