Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ರಾಜಮನೆತನಕ್ಕೆ ಸಚಿವ ಡಾ. ಯತೀಂದ್ರ ಅವಮಾನ ಮಾಡಿರುವುದನ್ನು ಖಂಡಿಸಿ ಪ್ರತಿಭಟನೆ


ಮೈಸೂರು; ಅಂಬಾವಿಲಾಸ ಅರಮನೆ, ದಸರಾ ಆಚರಣೆಯ ವಿಚಾರವಾಗಿ ರಾಜಮನೆತನದವರಿಗೆ ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯನವರು ಹಗುರವಾಗಿ ಮಾತನಾಡಿ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ನಗರದಲ್ಲಿ ಗುರುವಾರ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಇತಿಹಾಸಕ್ಕೆ ಅಪಮಾನ ಬೇಡ, ರಾಜರ ಕೊಡುಗೆ ಸ್ಮರಿಸೋಣ, ರಾಜಮನೆತನವಿಲ್ಲದೆ ಮೈಸೂರಿಲ್ಲ, ಮೈಸೂರಿಲ್ಲದೆ ನಾವಿಲ್ಲ ಎಂಬ ಪ್ಲೇ ಕಾರ್ಡ್ ಪ್ರದರ್ಶಿಸಿದರು. ಅಲ್ಲದೆ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಭಾವಚಿತ್ರಕ್ಕೆ ಎಲುಬಿಲ್ಲದ ನಾಲಿಗೆ ಎಂಬ ಪ್ಲೇ ಕಾರ್ಡ್ ಪ್ರದರ್ಶಿಸಿ, ನಾನಾ ಘೋಷಣೆಗಳನ್ನು ಕೂಗುವ ಮೂಲಕ ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರು ನಮ್ಮ ಹೆಮ್ಮೆ ರಾಜಪರಂಪರೆ, ನಮ್ಮ ಗೌರವ ನಮ್ಮ ಸಂಪೂರ್ಣ ಬೆಂಬಲ ರಾಜಮನೆತನಕ್ಕೆ ಎಂದು ಘೋಷಣೆಗಳನ್ನು ಕೂಗಿ ಬೆಂಬಲ ವ್ಯಕ್ತಪಡಿಸಿದರು.
ಮೈಸೂರು ಸ್ಭೆರಿದಂತೆ ರಾಜ್ಯಕ್ಕೆ ಮೈಸೂರಿನ ರಾಜಮನೆತನದವರು ನೀಡಿರುವ ಕೊಡುಗೆಗಳನ್ನು ಸ್ಮರಿಸಿದರು. ರಾಜಮನೆತದವರ ಬಗ್ಗೆ ಬಹಳ ಹಗುರವಾಗಿ ಮಾತನಾಡಿರುವ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯನವರು ಕೂಡಲೇ ರಾಜಮನೆತನದವರಲ್ಲಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಇತಿಹಾಸ, ರಾಜಮನೆತನದ ಬಗ್ಗೆ ಸರಿಯಾಗಿ ತಿಳಿದುಕೊಳ್ಳದ ಡಾ.ಯತೀಂದ್ರ ಸಿದ್ದರಾಮಯ್ಯ ಬಾಲಿಶತನದ ಹೇಳಿಕೆಯನ್ನು ನೀಡಿದ್ದಾರೆ. ಅವರು ಸಚಿವರಾಗಿ ಮುಂದುವರಿಯಲು ಯಾವುದೇ ನೈತಿಕತೆಯಿಲ್ಲ. ಹಾಗೂ ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಬ್ಬಣ್ಣ, ನಗರಪಾಲಿಕೆಯ ಮಾಜಿ ಸದಸ್ಯ ಪ್ರಶಾಂತ್‌ಗೌಡ, ಮಾಜಿ ಮೇಯರ್ ಸಂದೇಶ್‌ಸ್ವಾಮಿ, ವಸ್ತು ಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹೇಮಂತ್ ಕುಮಾರ್‌ಗೌಡ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.