Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ರಜನಿ ನರಹಳ್ಳಿ ರಚಿಸಿರುವ ಸಹಬಾಳ್ವೆ ಕೃತಿ ಲೋಕಾರ್ಪಣೆ

ಪ್ರಾಂಶುಪಾಲರಾದ ಡಾ. ಬಿ.ಆರ್. ಜಯಕುಮಾರಿಗೆ ಬೀಳ್ಕೊಡುಗೆ ಮೈಸೂರು: ನಗರದ ಎಸ್.ಬಿ.ಆರ್.ಆರ್. ಮಹಾಜನ ಪ್ರಥಮ ದರ್ಜೆ ಕಾಲೇಜು (ಸ್ವಾಯತ್ತ)ದ ವತಿಯಿಂದ ಪ್ರಾಂಶುಪಾಲರಾದ ಡಾ. ಬಿ.ಆರ್. ಜಯಕುಮಾರಿ ಅವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ರಜನಿ ನರಹಳ್ಳಿ ಅವರು ರಚಿಸಿರುವ ಸಹಬಾಳ್ವೆ’ ಕೃತಿ ಲೋಕಾರ್ಪಣೆ ಕಾರ್ಯಕ್ರಮವನ್ನು ವಿವೇಕಾನಂದ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಎನ್.ಕೆ. ಲೋಕನಾಥ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಿ ಮಾತನಾಡಿ, ಡಾ. ಬಿ.ಆರ್. ಜಯಕುಮಾರಿ ಅವರ ಸರಳ ಯೋಚನಾ ಶೈಲಿ ಹಾಗೂ ದಕ್ಷತೆ ಎಲ್ಲರಿಗೂ ಮಾದರಿ….

Read More

ನಶಾಮುಕ್ತ ಭಾರತ ಅಭಿಯಾನ ಅಂಗವಾಗಿ ವಿದ್ಯಾರ್ಥಿಗಳಿಂದ ಜಾಗೃತಿ ಓಟ

ಮೈಸೂರು: ಜಿಎಸ್‌ಎಸ್‌ಎಸ್ ಸಿಂಹ ಸುಬ್ಬಮಹಾಲಕ್ಷಿ÷್ಮ ಪ್ರಥಮ ದರ್ಜೆ ಕಾಲೇಜು, ಮೈಸೂರು ವತಿಯಿಂದ ಕೇಂದ್ರ ಯುವಜನ ಮತ್ತು ಕ್ರೀಡಾ ಸಚಿವಾಲಯದ ಸಹಯೋಗದೊಂದಿಗೆ ಶುಕ್ರವಾರ ನಶಾಮುಕ್ತ ಭಾರತ ಅಭಿಯಾನದಅಂಗವಾಗಿ ಜಾಗೃತಿ ಓಟವನ್ನು ಆಯೋಜಿಸಲಾಗಿತು.ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಾಲೇಜಿನ ಪ್ರಾಂಶುಪಾಲ ಡಾ. ಟಿ. ಎಸ್. ರಾಕೇಶ್ ಮಾತನಾಡಿ, ಯುವಜನತೆ ಮಾದಕ ವಸ್ತುಗಳ ವ್ಯಸನದಿಂದ ದೂರವಿದ್ದು, ಆರೋಗ್ಯಕರ ಜೀವನ ಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ಆರೋಗ್ಯ, ಕುಟುಂಬ ಹಾಗೂ ಸಮಾಜದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ. ಆದ್ದರಿಂದ…

Read More

ಮೈಸೂರು ರಾಜಮನೆತನದ ಬಗ್ಗೆ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಪೋಸ್ಟ್ ಕಾರ್ಡ್ ಅಭಿಯಾನ

ಮೈಸೂರು: ಮೈಸೂರು ರಾಜಮನೆತನದ ಬಗ್ಗೆ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಶುಕ್ರವಾರ ಮೈಸೂರಿನಲ್ಲಿ ಪೋಸ್ಟ್ ಕಾರ್ಡ್ ಅಭಿಯಾನ ನಡೆಯಿತು.ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಆಕ್ಷೇಪಿಸಿ ಮೈಸೂರು ವಿವಿ ಮೊಹಲ್ಲಾ ಅಂಚೆ ಕಚೇರಿ ಬಳಿ ಸೇವ್ ಹಿಂದೂ ಟೆಂಪಲ್ಸ್ ಟೀಮ್ ವತಿಯಿಂದ ಪೋಸ್ಟ್ ಕಾರ್ಡ್ ಅಭಿಯಾನ ನಡೆಯಿತು. ಮೈಸೂರು ರಾಜಮನೆತನದ ಕೊಡುಗೆಗಳ ಬಗ್ಗೆ ಪೋಸ್ಟ್ ಕಾರ್ಡ್ ಮೂಲಕ ಸಚಿವ ಯತೀಂದ್ರ ಸಿದ್ದರಾಮಯ್ಯಗೆ ತಿಳಿಸಲು ಮುಂದಾದರು.ಮೈಸೂರು ಮಹಾರಾಜರ ಕುಟುಂಬ ಮತ್ತು ದೇವಸ್ಥಾನಗಳಿಗೆ ಅಪಾರ…

Read More

ದಸರಾ ಆಚರಣೆಯ ವಿವಾದ ಬಗೆಹರಿಸಲು ಮುಖ್ಯಮಂತ್ರಿಗಳು ಕೂಡಲೇ ರಾಜಮನೆತನ-ಅಧಿಕಾರಿಗಳ ಸಭೆ ನಡೆಸಬೇಕು; ತನ್ವೀರ್ ಸೇಠ್

ಮೈಸೂರು; ನಾಡ ಹಬ್ಬ ಮೈಸೂರು ದಸರಾ ಆಚರಣೆ ವಿಚಾರದಲ್ಲಿ ಎದ್ದಿರುವ ವಿವಾದಗಳನ್ನು ಬಗೆಹರಿಸಲು ಮುಖ್ಯಮಂತ್ರಿಗಳು ಕೂಡಲೇ ಜಿಲ್ಲಾಡಳಿತ, ರಾಜಮನೆತನ ಮತ್ತು ಸಂಬAಧಪಟ್ಟ ಇಲಾಖೆಗಳನ್ನು ಒಳಗೊಂಡAತೆ ಪ್ರತ್ಯೇಕ ಸಭೆ ನಡೆಸಬೆಕೆಂದು ಮೈಸೂರಿನ ಎನ್.ಆರ್. ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಆಗ್ರಹಿಸಿದರು.ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಸರಾ ಯಶಸ್ವಿಯಾಗಿ ಮುಕ್ತಾಯಗೊಂಡ ನಂತರ ಸಾಮಾನ್ಯವಾಗಿ ಚರ್ಚೆಗೆ ಬಾರದ ವಿಷಯಗಳ ಕುರಿತು ಈ ಬಾರಿ ವ್ಯಾಪಕ ಚರ್ಚೆ ನಡೆಯುತ್ತಿದೆ. ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ಬರೆದಿರುವ ಪತ್ರ ಮತ್ತು ಸಚಿವ ಡಾ….

Read More

ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಜನರು ತಮ್ಮ ಗುರಿಯ ಬಗ್ಗೆ ಸ್ಪಷ್ಟತೆ ಹೊಂದಿರಬೇಕು; ಡಾ. ಸಿ.ಜಿ. ಬೆಟಸೂರಮಠ

ಮೈಸೂರು; ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಜನರು ತಮ್ಮ ಗುರಿಯ ಬಗ್ಗೆ ಸ್ಪಷ್ಟತೆ ಹೊಂದಿರಬೇಕು ಎಂದು ಮೈಸೂರಿನ ಜೆಎಸ್‌ಎಸ್ ಸಂಸ್ಥೆಯ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ. ಸಿ.ಜಿ. ಬೆಟಸೂರಮಠ ಹೇಳಿದರು.ನಗರ ಕೇಂದ್ರ ಗ್ರಂಥಾಲಯ ಮೈಸೂರು ಹಾಗೂ ಬೆಂಗಳೂರಿನ ಜ್ಞಾನಗಂಗೋತ್ರಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಸಹಯೋಗದೊಂದಿಗೆ ಶುಕ್ರವಾರ ಕೆಎಎಸ್ ಪೂರ್ವಭಾವಿ ಪರೀಕ್ಷೆಗೆ ಸಂಬAಧಿಸಿದ ಎರಡನೇ ಪತ್ರಿಕೆಯ ಅಣಕು ಪರೀಕ್ಷೆಗೆ ಚಾಲನೆ ನೀಡಿ ಮಾತನಾಡಿದ ಅವರಯ, ಪ್ರಸ್ತುತ ಕಾಲಘಟ್ಟವನ್ನು ವಿಶ್ಲೇಷಿಸಿದರು.ಇದು ಕಲಹದ ಯುಗವೋ, ಕಲಿಯುವ ಯುಗವೋ ಅಥವಾ ನಕಲಿ ಯುಗವೋ ಎಂಬ ಪ್ರಶ್ನೆಯನ್ನು…

Read More

ಕಾಂಗ್ರೆಸ್ ಸರ್ಕಾರ ಹಾಲಿನ ದರ ರೂ. 8 ಹೆಚ್ಚಿಸಿರುವುದು ಜನವಿರೋಧಿಯಾಗಿದೆ: ಯುವ ಭಾರತ ಸಂಘಟನೆ

ಮೈಸೂರು; ರಾಜ್ಯ ಕಾಂಗ್ರೆಸ್ ಸರ್ಕಾರ ನಂದಿನಿ ಹಾಲಿನ ದರವನ್ನು ಲೀಟರ್ ಗೆ 8 ರೂಪಾಯಿ ಹೆಚ್ಚಿಸಲು ನಿರ್ಧಾರ ಕೈಗೊಂಡಿರುವುದು ಜನ ವಿರೋಧಿಯಾಗಿದೆ ಎಂದು ಯುವ ಭಾರತ ಸಂಘಟನೆ ಹೇಳಿದೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ಸಂಚಾಲಕ ಜೋಗಿ ಮಂಜು,ಚುನಾವಣೆಗೂ ಮುನ್ನ “ಬಡವರ ಸರ್ಕಾರ” ಎಂದು ಹೇಳಿಕೊಂಡ ಕಾಂಗ್ರೆಸ್, ಅಧಿಕಾರಕ್ಕೆ ಬಂದ ನಂತರ ಪ್ರತಿಯೊಂದರ ಬೆಲೆ ಏರಿಕೆ ಮಾಡುತ್ತಲೇ ಇದೆ. ರಾಜ್ಯದ ಜನಸಾಮಾನ್ಯರ ಮೇಲೆ ಮತ್ತೊಮ್ಮೆ ಬರೆ ಎಳೆದಿದೆ ಎಂದು ಕಿಡಿಕಾರಿದ್ದಾರೆ.ಇದುವರೆಗೂ ಏರಿಕೆ ಮಾಡಿದ್ದು: ವಿದ್ಯುತ್ ದರ,…

Read More

ರಾಷ್ಟ್ರಮಟ್ಟದ ಸೈಕಲ್ ಪೋಲೋ ಪಂದ್ಯಾವಳಿಗೆ ವಿಜಯ ವಿಠ್ಠಲ ವಿದ್ಯಾಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಮೈಸೂರು: ಕರ್ನಾಟಕ ಸೈಕಲ್ ಪೋಲೋ ಸಂಸ್ಥೆಯು ಮೈಸೂರಿನಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಸೈಕಲ್ ಪೋಲೋ ಪಂದ್ಯಾವಳಿಯಲ್ಲಿ ಮೈಸೂರಿನ ಸರಸ್ವತಿಪುರಂನ ವಿಜಯ ವಿಠ್ಠಲ ವಿದ್ಯಾಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ, ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಗಳಿಸುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.ಈ ಸ್ಪರ್ಧೆಯಲ್ಲಿ ಗಗನ್ ಎಂ. ಗೌಡ ಹಾಗೂ ರಕ್ಷಿತ್‌ಎಸ್ ಕಿರಿಯರ ಮತ್ತು ಸಬ್-ಜೂನಿಯರ್ ವಿಭಾಗಗಳೆರಡರಲ್ಲೂ ಪ್ರಥಮ ಸ್ಥಾನ ಪಡೆದರೆ, ಜೀವಿಕ ಬಿ. ಎಸ್, ಪೂಜಾ ಎಂ., ಸಾನ್ವಿ ಪಿ. ಹಾಗೂ ತನಿಷ್ಕಎಸ್ ಅವರು ಕಿರಿಯರ ಮತ್ತು ಹಿರಿಯರ ವಿಭಾಗಗಳಲ್ಲಿ…

Read More

ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ: ಉಪ ಲೋಕಾಯುಕ್ತ ಕೆ.ಎನ್. ಫಣೀಂದ್ರ

ಮೈಸೂರು; ಲೋಕಾಯುಕ್ತ ಸಂಸ್ಥೆ ಸ್ಥಾಪನೆಯಾಗಿ ಸುಮಾರು ನಾಲ್ಕು ದಶಕಗಳು ಕಳೆದಿದ್ದರೂ ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾಧ್ಯವಾಗಿಲ್ಲ. ಇಂದಿಗೂ ಭ್ರಷ್ಟಾಚಾರ ಸಮಾಜದಲ್ಲಿ ಮುಂದುವರಿದಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ಉಪ ಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ಹೇಳಿದರು.ಶುಕ್ರವಾರ ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭ್ರಷ್ಟಾಚಾರದಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ ಎಂಬುದು ಆತಂಕಕಾರಿ ಸಂಗತಿ. ಈ ಪರಿಸ್ಥಿತಿಯಿಂದ ಹೊರಬರಲು ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ, ಪ್ರಾಮಾಣಿಕತೆ ಮತ್ತು…

Read More