Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕಾಂಗ್ರೆಸ್ ಸರ್ಕಾರ ಹಾಲಿನ ದರ ರೂ. 8 ಹೆಚ್ಚಿಸಿರುವುದು ಜನವಿರೋಧಿಯಾಗಿದೆ: ಯುವ ಭಾರತ ಸಂಘಟನೆ


ಮೈಸೂರು; ರಾಜ್ಯ ಕಾಂಗ್ರೆಸ್ ಸರ್ಕಾರ ನಂದಿನಿ ಹಾಲಿನ ದರವನ್ನು ಲೀಟರ್ ಗೆ 8 ರೂಪಾಯಿ ಹೆಚ್ಚಿಸಲು ನಿರ್ಧಾರ ಕೈಗೊಂಡಿರುವುದು ಜನ ವಿರೋಧಿಯಾಗಿದೆ ಎಂದು ಯುವ ಭಾರತ ಸಂಘಟನೆ ಹೇಳಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ಸಂಚಾಲಕ ಜೋಗಿ ಮಂಜು,
ಚುನಾವಣೆಗೂ ಮುನ್ನ “ಬಡವರ ಸರ್ಕಾರ” ಎಂದು ಹೇಳಿಕೊಂಡ ಕಾಂಗ್ರೆಸ್, ಅಧಿಕಾರಕ್ಕೆ ಬಂದ ನಂತರ ಪ್ರತಿಯೊಂದರ ಬೆಲೆ ಏರಿಕೆ ಮಾಡುತ್ತಲೇ ಇದೆ. ರಾಜ್ಯದ ಜನಸಾಮಾನ್ಯರ ಮೇಲೆ ಮತ್ತೊಮ್ಮೆ ಬರೆ ಎಳೆದಿದೆ ಎಂದು ಕಿಡಿಕಾರಿದ್ದಾರೆ.
ಇದುವರೆಗೂ ಏರಿಕೆ ಮಾಡಿದ್ದು: ವಿದ್ಯುತ್ ದರ, ಸ್ಟಾ÷್ಯಂಪ್ ಡ್ಯೂಟಿ, ಪೆಟ್ರೋಲ್-ಡೀಸೆಲ್, ಬಸ್ ಟಿಕೆಟ್, ಮತ್ತು ಈಗ ಹಾಲು.
ಹಾಲು ಬಡವರು, ಮಕ್ಕಳು, ವೃದ್ಧರು ಪ್ರತಿದಿನ ಬಳಸುವ ಅಮೃತ ಸಮಾನ. ಇದರ ದರ ಹೆಚ್ಚಳದಿಂದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ತಿಂಗಳ ಬಜೆಟ್ ಸಂಪೂರ್ಣ ಹದಗೆಡಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ರೈತರಿಗೆ ಕೊಡುತ್ತೇವೆ ಎಂಬ ನೆಪದಲ್ಲಿ ಗ್ರಾಹಕರ ಜೇಬಿಗೆ ಕತ್ತರಿ ಹಾಕುವ ಕೆಲಸ ಈ ಸರ್ಕಾರ ಮಾಡುತ್ತಿದೆ. ನಿಜವಾಗಿಯೂ ರೈತರಿಗೆ ಸಹಾಯ ಮಾಡುವ ಉದ್ದೇಶವಿದ್ದರೆ, ಸರ್ಕಾರ ತನ್ನ ಖಜಾನೆಯಿಂದ ಸಹಾಯಧನ ನೀಡಬೇಕು, ಜನರ ಮೇಲೆ ಹೊರೆ ಹಾಕಬಾರದು.
ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಜನರಿಗೆ ಒಂದು ಕೈಯಲ್ಲಿ ಕೊಟ್ಟು, ದರ ಏರಿಕೆ ಮೂಲಕ ಇನ್ನೊಂದು ಕೈಯಲ್ಲಿ ದುಪ್ಪಟ್ಟು ಹಣವನ್ನು ಕಿತ್ತುಕೊಳ್ಳುವ ಸರ್ಕಾರ” ದ ನೀತಿಯನ್ನು ಯುವ ಭಾರತ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದ್ದಾರೆ.
ಕೂಡಲೇ ಈ ದರ ಏರಿಕೆಯನ್ನು ಹಿಂಪಡೆಯಬೇಕು. ಇಲ್ಲವಾದರೆ ಯುವ ಭಾರತ ಸಂಘಟನೆಯಿAದ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.