
ಮೈಸೂರು; ನಾಡ ಹಬ್ಬ ಮೈಸೂರು ದಸರಾ ಆಚರಣೆ ವಿಚಾರದಲ್ಲಿ ಎದ್ದಿರುವ ವಿವಾದಗಳನ್ನು ಬಗೆಹರಿಸಲು ಮುಖ್ಯಮಂತ್ರಿಗಳು ಕೂಡಲೇ ಜಿಲ್ಲಾಡಳಿತ, ರಾಜಮನೆತನ ಮತ್ತು ಸಂಬAಧಪಟ್ಟ ಇಲಾಖೆಗಳನ್ನು ಒಳಗೊಂಡAತೆ ಪ್ರತ್ಯೇಕ ಸಭೆ ನಡೆಸಬೆಕೆಂದು ಮೈಸೂರಿನ ಎನ್.ಆರ್. ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಆಗ್ರಹಿಸಿದರು.
ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಸರಾ ಯಶಸ್ವಿಯಾಗಿ ಮುಕ್ತಾಯಗೊಂಡ ನಂತರ ಸಾಮಾನ್ಯವಾಗಿ ಚರ್ಚೆಗೆ ಬಾರದ ವಿಷಯಗಳ ಕುರಿತು ಈ ಬಾರಿ ವ್ಯಾಪಕ ಚರ್ಚೆ ನಡೆಯುತ್ತಿದೆ. ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ಬರೆದಿರುವ ಪತ್ರ ಮತ್ತು ಸಚಿವ ಡಾ. ಯತೀಂದ್ರ ಸಿದ್ಧರಾಮಯ್ಯ ನೀಡಿರುವ ಹೇಳಿಕೆಗಳು, ಸರ್ಕಾರ ಮತ್ತು ರಾಜಮನೆತನದ ನಡುವೆ “ನಾನು ಮೇಲು, ನೀನು ಮೇಲು” ಎಂಬ ಪೈಪೋಟಿಗೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಸೇಠ್, ಜಿಲ್ಲಾಡಳಿತ, ರಾಜಮನೆತನ ಮತ್ತು ಸಂಬAಧಪಟ್ಟ ಇಲಾಖೆಗಳನ್ನು ಒಳಗೊಂಡAತೆ ಪ್ರತ್ಯೇಕ ಸಭೆ ನಡೆಸುವಂತೆ ಆಗ್ರಹಿಸಿದರು. ಅಂಬಾರಿ ರಾಜ್ಯ ಸರ್ಕಾರದ ಅಧೀನದಲ್ಲಿದ್ದರೂ, ಅದರ ಜೋಡಣೆಗೆ ಬೇಕಾದ ಹಗ್ಗ ರಾಜಮನೆತನದ ಬಳಿ ಇರುವುದು ಸಂಬAಧಗಳ ಪ್ರಾಮುಖ್ಯತೆಯನ್ನು ಎತ್ತಿ ತೋರಿಸುತ್ತದೆ ಎಂದರು. ಮೈಸೂರು ಮಹಾರಾಜರು ನಾಡಿಗೆ ನೀಡಿರುವ ಕೊಡುಗೆ ಅಪಾರವಾಗಿದ್ದು, ಆ ಗೌರವವನ್ನು ಕಾಪಾಡಿಕೊಳ್ಳಬೇಕು. ಅಂಬಾರಿ ನಮ್ಮದು ಎಂಬ ರಾಜಮನೆತನದ ಹೇಳಿಕೆ, ಹಾಗೂ ಅರಮನೆ ಸರ್ಕಾರದ ಆಸ್ತಿ ಎಂಬ ಚರ್ಚೆ ಇತ್ಯಾದಿಗಳ ಬಗ್ಗೆ ಸ್ಪಷ್ಟತೆಗಾಗಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಸಭೆ ನಡೆಸಬೇಕು. ಅರಮನೆ ವಿಚಾರ ಸುಪ್ರೀಂ ಕೋರ್ಟ್ನಲ್ಲಿರುವುದರಿಂದ ಹೆಚ್ಚಿನ ಚರ್ಚೆಗೆ ನಾನು ಸಮರ್ಥನಲ್ಲ ಎಂದರು.