
ಮೈಸೂರು: ಜಿಎಸ್‌ಎಸ್‌ಎಸ್ ಸಿಂಹ ಸುಬ್ಬಮಹಾಲಕ್ಷಿ÷್ಮ ಪ್ರಥಮ ದರ್ಜೆ ಕಾಲೇಜು, ಮೈಸೂರು ವತಿಯಿಂದ ಕೇಂದ್ರ ಯುವಜನ ಮತ್ತು ಕ್ರೀಡಾ ಸಚಿವಾಲಯದ ಸಹಯೋಗದೊಂದಿಗೆ ಶುಕ್ರವಾರ ನಶಾಮುಕ್ತ ಭಾರತ ಅಭಿಯಾನದಅಂಗವಾಗಿ ಜಾಗೃತಿ ಓಟವನ್ನು ಆಯೋಜಿಸಲಾಗಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಾಲೇಜಿನ ಪ್ರಾಂಶುಪಾಲ ಡಾ. ಟಿ. ಎಸ್. ರಾಕೇಶ್ ಮಾತನಾಡಿ, ಯುವಜನತೆ ಮಾದಕ ವಸ್ತುಗಳ ವ್ಯಸನದಿಂದ ದೂರವಿದ್ದು, ಆರೋಗ್ಯಕರ ಜೀವನ ಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ಆರೋಗ್ಯ, ಕುಟುಂಬ ಹಾಗೂ ಸಮಾಜದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಈ ಜಾಗೃತಿ ಓಟದಲ್ಲಿ ಕಾಲೇಜಿನ ಸುಮಾರು 100 ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ವಿದ್ಯಾರ್ಥಿಗಳು ಒಟ್ಟು 5 ಕಿಲೋಮೀಟರ್ ದೂರವನ್ನು ಕ್ರಮಿಸುವ ಮೂಲಕ ಮಾದಕ ವಸ್ತುಗಳ ಸೇವನೆಯ ವಿರುದ್ಧ ಜನ ಜಾಗೃತಿ ಮೂಡಿಸಿದರು.
ಕಾರ್ಯಕ್ರಮವನ್ನು ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆಯ ಸಂಚಾಲಕ ಪುನೀತ್ ಕುಮಾರ್ ಸಂಘಟಿಸಿದರು. ಯುವಜನತೆಯಲ್ಲಿ ಆರೋಗ್ಯ ಜಾಗೃತಿ, ಸಾಮಾಜಿಕ ಜವಾಬ್ದಾರಿ ಹಾಗೂ ಮಾದಕ ವಸ್ತುಗಳ ವಿರುದ್ಧ ಹೋರಾಡುವ ಮನೋಭಾವ ಬೆಳೆಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.