Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ರಾಷ್ಟ್ರಮಟ್ಟದ ಸೈಕಲ್ ಪೋಲೋ ಪಂದ್ಯಾವಳಿಗೆ ವಿಜಯ ವಿಠ್ಠಲ ವಿದ್ಯಾಶಾಲೆಯ ವಿದ್ಯಾರ್ಥಿಗಳು ಆಯ್ಕೆ


ಮೈಸೂರು: ಕರ್ನಾಟಕ ಸೈಕಲ್ ಪೋಲೋ ಸಂಸ್ಥೆಯು ಮೈಸೂರಿನಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಸೈಕಲ್ ಪೋಲೋ ಪಂದ್ಯಾವಳಿಯಲ್ಲಿ ಮೈಸೂರಿನ ಸರಸ್ವತಿಪುರಂನ ವಿಜಯ ವಿಠ್ಠಲ ವಿದ್ಯಾಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ, ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಗಳಿಸುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.
ಈ ಸ್ಪರ್ಧೆಯಲ್ಲಿ ಗಗನ್ ಎಂ. ಗೌಡ ಹಾಗೂ ರಕ್ಷಿತ್‌ಎಸ್ ಕಿರಿಯರ ಮತ್ತು ಸಬ್-ಜೂನಿಯರ್ ವಿಭಾಗಗಳೆರಡರಲ್ಲೂ ಪ್ರಥಮ ಸ್ಥಾನ ಪಡೆದರೆ, ಜೀವಿಕ ಬಿ. ಎಸ್, ಪೂಜಾ ಎಂ., ಸಾನ್ವಿ ಪಿ. ಹಾಗೂ ತನಿಷ್ಕಎಸ್ ಅವರು ಕಿರಿಯರ ಮತ್ತು ಹಿರಿಯರ ವಿಭಾಗಗಳಲ್ಲಿ ಪ್ರಥಮ ಹಾಗೂ ಸಬ್-ಜೂನಿಯರ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಹಾಗೆಯೇ ಮೊಹಿತ್‌ಎಸ್. ಗೌಡ ಸಬ್-ಜೂನಿಯರ್ ವಿಭಾಗದಲ್ಲಿ ಪ್ರಥಮ ಸ್ಥಾನ ಮತ್ತು ವರ್ಷಿಣಿ ಜಿ. ಜೋಶಿ ಅದೇ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ರಾಜ್ಯಮಟ್ಟದ ಸ್ಪರ್ಧೆಯಲ್ಲಿ ವಿಶಿಷ್ಟ ಸಾಧನೆಗೈದ ಈ ಎಲ್ಲಾ ವಿದ್ಯಾರ್ಥಿಗಳು ಒಡಿಶಾದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸೈಕಲ್ ಪೋಲೋ ಪಂದ್ಯಾವಳಿಯಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.