ಶಿಕ್ಷಕ ವೃತ್ತಿ ಪವಿತ್ರವಾದ ವೃತ್ತಿಯಾಗಿದೆ : ಕ್ಷೇತ್ರ ಶಿಕ್ಷಣಾಧಿಕಾರಿ ರವಿಪ್ರಸನ್ನ
ಪಿರಿಯಾಪಟ್ಟಣ : ಶಿಕ್ಷಕ ವೃತ್ತಿ ಕೇವಲ ಉದ್ಯೋಗವಲ್ಲ ಸಮಾಜವನ್ನು ಉತ್ತಮವಾಗಿ ರೂಪಿಸುವ ಪವಿತ್ರವಾದ ವೃತ್ತಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರವಿಪ್ರಸನ್ನ ಹೇಳಿದರು. ತಾಲೋಕಿನ ಬೆಟ್ಟದಪುರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ವಿಜ್ಞಾನ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ನಿಂಗರಾಜು ಅವರ ಗೌರವಾರ್ಥ ಶಾಲಾ ಅಭಿವೃದ್ಧಿ ಸಮಿತಿ ವತಿಯಿಂದ ಶನಿವಾರ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು ಶಿಕ್ಷಕರು ಪಾಠ ಬೋಧಿಸುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಉತ್ತಮ ನಾಗರಿಕರನ್ನಾಗಿ ರೂಪಿಸುವ ಜವಾಬ್ದಾರಿ ಹೊಂದಿದ್ದಾರೆ. ಶಿಕ್ಷಕರು…