Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಪ್ರತಿ ಲೀಟರ್ ಹಾಲಿಗೆ ಹೆಚ್ಚಿಸಿರುವ ೮ ರೂ ದರವನ್ನು ತಕ್ಷಣ ಹಿಂಪಡೆಯಲು ಮೈಸೂರು ಹೋಟೆಲ್ ಮಾಲೀಕರ ಸಂಘದ ಆಗ್ರಹ


ಮೈಸೂರು: ಪ್ರತಿ ಲೀಟರ್ ಹಾಲಿಗೆ ಹೆಚ್ಚಿಸಿರುವ ೮ ರೂ ದರವನ್ನು ತಕ್ಷಣ ಹಿಂಪಡೆಯಲು ಮೈಸೂರು ಹೋಟೆಲ್ ಮಾಲೀಕರ ಸಂಘ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.
ಯುದ್ಧದ ಪರಿಣಾಮವಾಗಿ ಅಡುಗೆ ಅನಿಲದ ಬೆಲೆ ಹೆಚ್ಚಳ, ಸಕ್ಕರೆ, ಬೆಲ್ಲ, ಅಕ್ಕಿ, ಈರುಳ್ಳಿ ಹಾಗೂ ತರಕಾರಿಗಳ ಬೆಲೆ ಏರಿಳಿತದಿಂದ ಈಗಾಗಲೇ ಹೋಟೆಲ್ ಉದ್ಯಮ ಸಂಕಷ್ಟದಲ್ಲಿದೆ.
ಇಂತಹ ಸಂದರ್ಭದಲ್ಲಿ ಕಳೆದ ಮೂರು ವರ್ಷಗಳಲ್ಲಿ ಹಾಲಿನ ದರ ಸುಮಾರು ೧೭ರಷ್ಟು ಹೆಚ್ಚಳವಾಗಿದ್ದು, ಇದೀಗ ಮತ್ತೆ ಪ್ರತಿ ಲೀಟರ್‌ಗೆ ೮ರಷ್ಟು ಏರಿಕೆ ಮಾಡಿರುವುದು ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತ ನೀಡಿದೆ. ಹಾಲಿನ ದರ ಏರಿಕೆಯಾದರೆ ಮೊಸರು, ತುಪ್ಪ, ಪನ್ನೀರ್ ಸೇರಿದಂತೆ ಹಾಲಿನ ಉತ್ಪನ್ನಗಳ ಬೆಲೆಯೂ ಹೆಚ್ಚಳವಾಗುತ್ತದೆ. ಇದರ ಅಂತಿಮ ಹೊರೆ ಸಾಮಾನ್ಯ ಗ್ರಾಹಕರ ಮೇಲೆಯೇ ಬೀಳುತ್ತದೆ.
ಆದ್ದರಿಂದ ಸರ್ಕಾರವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ರೈತರಿಗೂ ನ್ಯಾಯ ಸಿಗಬೇಕು, ಹೋಟೆಲ್ ಉದ್ಯಮವೂ ಉಳಿಯಬೇಕು, ಗ್ರಾಹಕರಿಗೂ ಬೆಲೆ ಏರಿಕೆಯ ಬಿಸಿ ತಟ್ಟಬಾರದು. ಈ ಮೂರು ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ ಒತ್ತಾಯಿಸಿದ್ದಾರೆ.