Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಶಿಕ್ಷಕ ವೃತ್ತಿ ಪವಿತ್ರವಾದ ವೃತ್ತಿಯಾಗಿದೆ : ಕ್ಷೇತ್ರ ಶಿಕ್ಷಣಾಧಿಕಾರಿ ರವಿಪ್ರಸನ್ನ

ಪಿರಿಯಾಪಟ್ಟಣ : ಶಿಕ್ಷಕ ವೃತ್ತಿ ಕೇವಲ ಉದ್ಯೋಗವಲ್ಲ ಸಮಾಜವನ್ನು ಉತ್ತಮವಾಗಿ ರೂಪಿಸುವ ಪವಿತ್ರವಾದ ವೃತ್ತಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರವಿಪ್ರಸನ್ನ ಹೇಳಿದರು.

ತಾಲೋಕಿನ ಬೆಟ್ಟದಪುರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ವಿಜ್ಞಾನ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ನಿಂಗರಾಜು ಅವರ ಗೌರವಾರ್ಥ ಶಾಲಾ ಅಭಿವೃದ್ಧಿ ಸಮಿತಿ ವತಿಯಿಂದ ಶನಿವಾರ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು ಶಿಕ್ಷಕರು ಪಾಠ ಬೋಧಿಸುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಉತ್ತಮ ನಾಗರಿಕರನ್ನಾಗಿ ರೂಪಿಸುವ ಜವಾಬ್ದಾರಿ ಹೊಂದಿದ್ದಾರೆ.

ಶಿಕ್ಷಕರು ತಮ್ಮ ವೃತ್ತಿ ಜೀವನದಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ತಮ್ಮ ಜೀವನವನ್ನು ಮೂಡುಪಾಗಿಡುತ್ತಾರೆ ಸಮಾಜದಲ್ಲಿ ಸಾಧನೆ ಮಾಡಿದ ಅನೇಕ ವ್ಯಕ್ತಿಗಳ ಹಿಂದೆ ಶಿಕ್ಷಕರ ಮಾರ್ಗದರ್ಶನವಿರುತ್ತದೆ. ಶಾಲೆಯ ಅಭಿವೃದ್ಧಿ ಹಾಗೂ ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಹಳೆಯ ವಿದ್ಯಾರ್ಥಿಗಳು, ಶಾಲಾ ಅಭಿವೃದ್ಧಿ ಸಮಿತಿ ಮತ್ತು ಗ್ರಾಮಸ್ಥರ ಸಹಭಾಗಿತ್ವ ಅಗತ್ಯ. ಹಳೆಯ ವಿದ್ಯಾರ್ಥಿಗಳು ತಮ್ಮ ಶಾಲೆಯೊಂದಿಗೆ ನಿರಂತರ ಸಂಪರ್ಕ ಹೊಂದಿ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು.

ನಿಂಗರಾಜು ಅವರು 1994ರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ, ಬಡ್ತಿ ಪಡೆದು ಬೆಟ್ಟದಪುರ ಸರ್ಕಾರಿ ಪ್ರೌಢಶಾಲೆಗೆ ವರ್ಗಾವಣೆಗೊಂಡಿದ್ದರು. ಒಟ್ಟು 32 ವರ್ಷಗಳ ಶಿಕ್ಷಕ ಸೇವೆಯಲ್ಲಿ ಸುಮಾರು 25 ವರ್ಷಗಳನ್ನು ಬೆಟ್ಟದಪುರದಲ್ಲಿ ಕಳೆದ ಅವರು, ವಿಜ್ಞಾನ ಶಿಕ್ಷಕರಾಗಿ ಹಾಗೂ ಪ್ರಭಾರ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಹೇಳಿದರು.

ನಿವೃತ್ತ ಶಿಕ್ಷಕ ನಿಂಗರಾಜು ಮಾತನಾಡಿ ನನ್ನ ಜೀವನದಲ್ಲಿ ಏನಾದರೂ ಸಾಧನೆ ಮಾಡಿದ್ದೇನೆ ಎಂದರೆ ಅದಕ್ಕೆ ಈ ಸಂಸ್ಥೆಯ ಕೊಡುಗೆ ಅಪಾರ. ಇಲ್ಲಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿರುವುದು ನನ್ನ ಪುಣ್ಯ. ಸಂಸ್ಥೆ ನೀಡಿದ ಅವಕಾಶ, ಸಹೋದ್ಯೋಗಿಗಳ ಪ್ರೀತಿ ಮತ್ತು ಸಹಕಾರವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಇದ್ದಷ್ಟು ದಿನ ಯಾರಿಗೂ ತೊಂದರೆ ನೀಡದೆ, ಸ್ವಾಭಿಮಾನದಿಂದ ಬದುಕುವುದು ಮುಖ್ಯ ಬೀಳ್ಕೊಡುಗೆ ಸಮಾರಂಭಕ್ಕೆ ಆಗಮಿಸಿ ಶುಭ ಹಾರೈಸಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು ಎಂದು ಭಾವುಕರಾಗಿ ನುಡಿದರು.

ಈ ಸಂದರ್ಭದಲ್ಲಿ ನಿಂಗರಾಜು ಅವರನ್ನು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲರಾದ ಕೌಶಲ್ಯ, ಪ್ರೌಢ ಶಾಲೆ ಉಪ ಪ್ರಾಂಶುಪಾಲ ನಟರಾಜು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಪ್ರಶಾಂತ್, ದೈಹಿಕ ಶಿಕ್ಷಣ ಪರಿವಿಕ್ಷಕ ಕುಮಾರಸ್ವಾಮಿ, ನಿವೃತ್ತ ಮುಖ್ಯ ಶಿಕ್ಷಕ ಮಂಜೇಗೌಡ, ನಿವೃತ್ತ ಶಿಕ್ಷಕ ನಾರಾಯಣ್ ಗೌಡ, ಶಿಕ್ಷಕಿ ಜ್ಯೋತಿ, ಸತೀಶ್ ಎಸ್ ಎಸ್ ಡಿಎಂಸಿ ಅಧ್ಯಕ್ಷ ಮೈಲಾರಿ, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರಾದ ಅನ್ನಪೂರ್ಣ, ಮಂಜುನಾಥ್, ಸ್ವಾಮಿ, ರಾಜೇಗೌಡ, ಪವಿತ್ರ ಕಾಳಯ್ಯ, ಮೋಹನ್ ಕುಮಾರ್, ಶಿಕ್ಷಕರಾದ ತಿಮ್ಮಯ್ಯ, ಇ.ಬಿ.ವೆಂಕಟೇಶ್, ಗೊರಹಳ್ಳಿ ಜಗದೀಶ್, ಕೆಂಪರಾಜು, ಬಿ.ಸಿ. ನಾಗರಾಜೇಗೌಡ, ಸೇರಿದಂತೆ ವಿದ್ಯಾರ್ಥಿಗಳು ಹಳೆಯ ವಿದ್ಯಾರ್ಥಿಗಳು, ಗ್ರಾಮಸ್ಥರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.