Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕಾಂಗ್ರೆಸ್‌ನಿ0ದ ಇಂದಿರಾಗಾ0ಧಿ, ಪಟೇಲರ ಸ್ಮರಣೆ


ಮೈಸೂರು: ನಗರ ಹಾಗೂ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮಾಜಿ ಪ್ರಧಾನಿ ಇಂದಿರಾಗಾAಧಿ ಹುತಾತ್ಮ ಹಾಗೂ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಜನ್ಮ ದಿನಾಚರಣೆಯನ್ನು ನಡೆಸಲಾಯಿತು.
ಇಬ್ಬರ ಭಾವಚಿತ್ರಕ್ಕೆ ಪುಷ್ಪರ್ಚನೆ ನೇರವೇರಿಸಿದ ಮೈಸೂರು ವಿವಿ ಸಂಜೆ ಕಾಲೇಜಿನ ಪ್ರಾದ್ಯಾಪಕಿ ಹಾಗೂ ಮುಖ್ಯಸ್ಥೆ ಡಾ.ಕೆ.ಸೌಭಾಗ್ಯವತಿ ಸಹೃದಯಿ ಮಾತೆ ಇಂದಿರಾ ವಿಷಯ ಕುರಿತು ಉಪನ್ಯಾಸ ನೀಡಿದರು.
ಭೂ ರಹಿತರ ಬಾಳಿಗೆ ಆಶಾಕಿರಣವಾಗಿದ್ದರು. ದಮನಿತರ ಬಾಳಿನಲ್ಲಿ ಚೈತನ್ಯ ತುಂಬಿದ ಉಕ್ಕಿನ ಮಹಿಳೆ, ಇವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಸಮ ಸಮಾಜದ ಸ್ಥಾಪನೆಯ ಕನಸನ್ನು ನನಸಾಗಿಸಲು ಅಪಾರವಾಗಿ ಶ್ರಮಿಸಿದರು.
ಭಾರತದಲ್ಲಿದ್ದ ಜಮೀನ್ದಾರಿ ಪದ್ಧತಿಗೆ ತೀಲಾಂಜಲಿ ಇಟ್ಟು, ಉಳುವವನೇ ಭೂಮಿಯ ಒಡೆಯ ಎಂದು ಭೂ ಸುಧಾರಣೆ ಕಾಯ್ದೆ ಜಾರಿಗೆ ತಂದು ಬಡವರ ಆಸೆಗೆ ಪುನಶ್ಚೇತನ ಕೊಟ್ಟವರು. ಭಾರತದಲ್ಲಿನ ಕಟ್ಟಕಡೆಯ ಜನಸಾಮಾನ್ಯರು ತಲೆ ಎತ್ತಿ ನಡೆಯುವಂತೆ ಮಾಡಿದ ಧೀಮಂತ ಮಹಿಳೆಯಾಗಿದ್ದಾರೆ ಎಂದರು.
ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬೀರಿಹುಂಡಿ ಬಸವಣ್ಣ, ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್, ಮಾಜಿ ಮೇಯರ್ ಗಳಾದ ಪುಷ್ಪಲತಾ ಚಿಕ್ಕಣ್ಣ, ಮೋದಾಮಣಿ, ಭೈರಪ್ಪ, ಚಿಕ್ಕಣ್ಣ, ನಗರ ಪ್ರಧಾನ ಕಾರ್ಯದರ್ಶಿ ಎಂ ಶಿವಣ್ಣ, ಈಶ್ವರ್ ಚಕ್ಕಡಿ, ಭಾಸ್ಕರ್ ಎಲ್.ಗೌಡ, ಕೆ.ವಿ.ಮಲ್ಲೇಶ್, ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ.ಮಹೇಶ್ ಇನ್ನಿತರರು ಇದ್ದರು.