
ಮೈಸೂರು: ಜ್ಞಾನೋದಯ ಪದವಿಪೂರ್ವ ಕಾಲೇಜು ವತಿಯಿಂದ ಆಯೋಜಿಸಲಾಗಿದ್ದ `ವಿಜ್ಞಾನ, ಕಲಾ ಹಾಗೂ ಕ್ರೀಡಾ ಉತ್ಸವ ೨೦೨೬’ರಲ್ಲಿ ಎನ್.ಎಸ್. ರಸ್ತೆಯ ಸದ್ವಿದ್ಯಾ ಪ್ರೌಢಶಾಲೆಯ ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಅನಾವರಣಗೊಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಸಾಹಿತ್ಯ, ಸಾಂಸ್ಕöÈತಿಕ ಮತ್ತು ವಿವಿಧ ಸ್ಪರ್ಧೆಗಳಲ್ಲಿ ಹಲವು ಬಹುಮಾನಗಳನ್ನು ತಮ್ಮದಾಗಿಸಿಕೊಂಡಿರುವ ವಿದ್ಯಾರ್ಥಿಗಳು, ಸಮಗ್ರ ಸಾಧನೆಯ ಮೂಲಕ ರೋಲಿಂಗ್ ಶೀಲ್ಡ್ನ್ನು ಶಾಲೆಯ ಮುಡಿಗೇರಿಸಿಕೊಂಡಿದ್ದಾರೆ.
ವಿದ್ಯಾರ್ಥಿಗಳಲ್ಲಿ ಅಡಗಿರುವ ಸೃಜನಶೀಲತೆ, ಜ್ಞಾನ, ವಾಕ್ಚಾತುರ್ಯ ಹಾಗೂ ಕಲಾತ್ಮಕ ಅಭಿವ್ಯಕ್ತಿಗೆ ವೇದಿಕೆಯಾಗಿದ್ದ ಉತ್ಸವದಲ್ಲಿ ಸದ್ವಿದ್ಯಾ ಶಾಲೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
೧೦ನೇ ತರಗತಿಯ ನಿಧಿ.ಎಸ್. ಇಂಗ್ಲಿಷ್ ಚರ್ಚಾಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದರೆ, ನಾದಶ್ರೀ ಆರ್. ಭಟ್ ಕನ್ನಡ ಚರ್ಚಾಸ್ಪರ್ಧೆ ಹಾಗೂ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ವಿಶೇಷ ಸಾಧನೆ ಮಾಡಿದ್ದಾರೆ. ನಿಧಿಶ್ರೀ.ಎಸ್. ಮತ್ತು ಧನುಶ್ರೀ ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.
೯ನೇ ತರಗತಿಯ ಚೈತನ್ಯ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಚಲನಚಿತ್ರ ಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಸೃಜನ್ ಹೆಬ್ಬಾರ್ ಭಾವಗೀತೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ. ೧೦ನೇ ತರಗತಿಯ ರಿಷಭ್ ಜೈನ್ ವಿಜ್ಞಾನ ಪದಬಂಧ ಸ್ಪರ್ಧೆಯಲ್ಲಿ ಪ್ರಥಮ ಸಮಾಧಾನಕರ ಬಹುಮಾನ ಪಡೆದಿದ್ದಾರೆ.
ರಸಪ್ರಶ್ನೆ ಸ್ಪರ್ಧೆಯಲ್ಲಿ ೧೦ನೇ ತರಗತಿಯ ತರುಣ್ ಎಸ್.ಪಿ. ಮತ್ತು ಉಜ್ವಲ್.ಜಿ. ಪ್ರಥಮ ಸ್ಥಾನ ಗಳಿಸಿದರೆ, ತರುಣ್ ಎ. ಹಾಗೂ ಕುಶಾಲ್ ಆರಾಧ್ಯ ನಾಲ್ಕನೇ ಸ್ಥಾನ ಪಡೆದಿದ್ದಾರೆ. ಚಿತ್ರಕಲಾ ಸ್ಪರ್ಧೆಯಲ್ಲಿ ನಿಹಾರಿಕಾ ರತ್ನಂ ತೃತೀಯ ಸ್ಥಾನ ಗಳಿಸಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಯು ಶಾಲೆಯ ಶೈಕ್ಷಣಿಕ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ನೀಡುತ್ತಿರುವ ಪ್ರೋತ್ಸಾಹ ಮತ್ತು ಮಾರ್ಗದರ್ಶನಕ್ಕೆ ಸಾಕ್ಷಿಯಾಗಿದೆ. ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿ, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಉನ್ನತ ಸಾಧನೆ ಮಾಡುವಂತೆ ಹಾರೈಸಿದ್ದಾರೆ.