Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೈಸೂರು ವಿಭಾಗದಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ: ‘ಏಕತೆಗಾಗಿ ಓಟ’ ಆಯೋಜನೆ


ಮೈಸೂರು; ಭಾರತದ ಉಕ್ಕಿನ ಮನುಷ್ಯ ಎಂದೇ ಪ್ರಸಿದ್ಧರಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಸ್ಮರಣಾರ್ಥವಾಗಿ ರಾಷ್ಟ್ರೀಯಏಕತಾ ದಿನವನ್ನು ಶನಿವಾರ ನೈಋತ್ಯ ರೈಲ್ವೆಯ ಮೈಸೂರು ವಿಭಾಗದಲ್ಲಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್ ಅವರು, ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರಾಷ್ಟಿçÃಯ ಏಕತಾ ದಿನದ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ದೇಶದ ಏಕತೆ, ಸಮಗ್ರತೆ ಮತ್ತು ಭದ್ರತೆಯನ್ನು ಕಾಪಾಡುವ ಸಂಕಲ್ಪವನ್ನು ಎಲ್ಲರೂ ಕೈಗೊಂಡರು.
ರಾಷ್ಟಿçÃಯ ಏಕತೆ, ಸಹೋದರತ್ವ ಮತ್ತು ಸೌಹಾರ್ದತೆಯ ಸಂದೇಶವನ್ನು ಸಾರುವ ಉದ್ದೇಶದಿಂದ ‘ಏಕತೆಗಾಗಿ ಓಟ’ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶಮ್ಮಾಸ್ ಹಮೀದ್, ವಿವಿಧ ಶಾಖೆಗಳ ಅಧಿಕಾರಿಗಳು, ರೈಲ್ವೆ ಸಿಬ್ಬಂದಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಸದಸ್ಯರು ಭಾಗವಹಿಸಿದ್ದರು.