ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿ
ನಂಜನಗೂಡು: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ದಾರುಣ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಹಂಚಿಪುರ ಗ್ರಾಮದಲ್ಲಿ ನಡೆದಿದೆ.ಗ್ರಾಮದ ನಿವಾಸಿಯಾದ ಶಿವಕುಮಾರ್ (60) ಸಾವಿಗೀಡಾದವರು. ಇವರು ತಮ್ಮ ಜಮೀನಿನ ಕಾವಲು ಕಾಯಲು ತೆರಳಿದ್ದು, ಮುಂಜಾನೆ ಜಮೀನಿನಿಂದ ಮನೆಗೆ ವಾಪಸ್ ಬರುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ್ದು, ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಗ್ರಾಮಸ್ಥರು ಜಮಾಯಿಸಿದ್ದು, ಗ್ರಾಮದಲ್ಲಿ ಆ*ತಂಕದ ವಾತಾವರಣ ನಿರ್ಮಾಣವಾಗಿದೆ.ಕಾಡಾನೆಗಳ ಹಾವಳಿಯಿಂದಾಗಿ ಗ್ರಾಮೀಣ ಪ್ರದೇಶಗಳಲ್ಲಿ ಜನರ ಜೀವಕ್ಕೆ ಅಪಾಯ ಎದುರಾಗುತ್ತಿದ್ದು, ಅರಣ್ಯ ಇಲಾಖೆ ಸೂಕ್ತ ಮುನ್ನೆಚ್ಚರಿಕೆ…