Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಗಾಂಧೀಜಿಯವರ ಸರಳ ಜೀವನ,ಆದರ್ಶಗಳನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ ; ಶಾಸಕ ದರ್ಶನ್ ಧ್ರುವನಾರಾಯಣ

ನಂಜನಗೂಡು;  ಮಹಾತ್ಮಗಾಂಧೀಜಿ ರವರು ಯುವಕರಿಗೆ ಸ್ಪೂರ್ತಿಯಾಗಿದ್ದು, ತಮ್ಮ ಸತ್ಯ, ಅಹಿಂಸೆ, ಪ್ರಬಲ ಅಸ್ತ್ರಗಳ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ, ಗಾಂಧೀಜಿಯವರ ಸರಳ ಜೀವನ, ಸ್ವಾವಲಂಬನೆಯ ಸಂದೇಶಗಳು ಮತ್ತು ಆದರ್ಶಗಳನ್ನು ನಾವೆಲ್ಲರೂ ನಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.   ಅವರು ನಗರದ ತಾಲೂಕು ಕಚೇರಿಯ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ ಮಹಾತ್ಮ ಗಾಂಧಿಜೀ ಹಾಗೂ ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ರವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. …

Read More

ಚುನಾವಣಾ ಆಯುಕ್ತರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ರಾಜಕೀಯ ಪ್ರೇರಿತ; ಸಂತೋಷ್ ಕುಮಾರ್ ಬಿ. ಎಂ.

ಮೈಸೂರು: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಪ್ರತಿಭಟನೆ, ರಾಜೀನಾಮೆಗೆ ಆಗ್ರಹ ಮತ್ತು ಮಾಡುತ್ತಿರುವ ಆರೋಪಗಳು ರಾಜಕೀಯ ಉದ್ದೇಶದಿಂದ ಕೂಡಿವೆ ಎಂದು ಬಿಜೆಪಿ ಮೈಸೂರು ನಗರ ಮಾಧ್ಯಮ ಸಹ ಸಂಚಾಲಕ ಸಂತೋಷ್ ಕುಮಾರ್ ಬಿ. ಎಂ. ತೀವ್ರವಾಗಿ ಆಕ್ಷೇಪಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,ಚುನಾವಣಾ ಆಯೋಗದ ವಿರುದ್ಧ ಘೋಷಣೆ ಕೂಗುವುದು ಸುಲಭ; ಆದರೆ ಆರೋಪವನ್ನು ದಾಖಲೆಗಳೊಂದಿಗೆ ಸಾಬೀತುಪಡಿಸುವುದು ಮುಖ್ಯ. SIಖ ಕುರಿತು ಕಾಂಗ್ರೆಸ್‌ಗೆ ನಿಜವಾಗಿಯೂ ಆಕ್ಷೇಪವಿದ್ದರೆ, ಯಾವ ಕ್ಷೇತ್ರದಲ್ಲಿ…

Read More

ಮಾಯದ ನೆರಳು ನಾಟಕದಲ್ಲಿ ದಮನಿತ ಮಹಿಳೆಯರ ಹೋರಾಟದ ಅನಾವರಣ

ಮೈಸೂರು; ಮಹಾಬೆಳಕು ಸಂಸ್ಥೆ ಪ್ರಸ್ತುತಪಡಿಸಿದ, ಕಾತ್ಯಾಯಿನಿ ಯಶೋಮಿತ್ರ ಅಭಿನಯದ `ಮಾಯದ ನೆರಳು’ ಏಕವ್ಯಕ್ತಿ ನಾಟಕದಲ್ಲಿ ದಮನಿತ ಮಹಿಳೆಯರ ಹೋರಾಟದ ಅನಾವರಣಗೊಂಡಿತು.ಕಾರ್ಯಕ್ರಮದ ಉದ್ಘಾಟನೆ ಮಾಡಿದ ವಕೀಲರ ಸಂಘದ ಅಧ್ಯಕ್ಷ ಎಂ. ಮಹಾದೇವಸ್ವಾಮಿ ಮಾತನಾಡಿ, ಇತಿಹಾಸದಲ್ಲಿ ತಮ್ಮ ಅಸ್ತಿತ್ವಕ್ಕಾಗಿ ಹೋರಾಡಿದ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೋರಾಟ ಮತ್ತು ಜೀವನದಿಂದ ಪ್ರೇರಣೆ ಪಡೆದು ದಮನಿತ ಸಮುದಾಯಗಳ ಪರವಾಗಿ ಹೋರಾಡಿದ ಶಾಂತಾಬಾಯಿ ಧನಜಿದಾನಿ, ಶಾಂತಾಬಾಯಿ ಕೃಷ್ಣಾಜಿ ಕಾಂಬ್ಳೆ ಹಾಗೂ ವಿಮಲ್ ದಾದಾಸಾಹೇಬ್ ಮೋರೆ ಅವರ ಬದುಕನ್ನು ನಾಟಕ ಪರಿಣಾಮಕಾರಿಯಾಗಿ ಕಟ್ಟಿಕೊಟ್ಟಿದೆ ಎಂದು…

Read More

ಮಹನೀಯರ ತ್ಯಾಗ, ಬಲಿದಾನ ಸ್ಮರಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ರಮೇಶ್ ಬಂಡಿಸಿದ್ದೇಗೌಡ

ಮೈಸೂರು: ಪ್ರಸ್ತುತ ನಾವು ಅನುಭವಿಸುತ್ತಿರುವ ಸ್ವಾತಂತ್ರ÷್ಯ, ಹಕ್ಕು ಮತ್ತು ಸ್ವಾಭಿಮಾನದ ಬದುಕಿನ ಹಿಂದೆ ಅಸಂಖ್ಯಾತ ಮಹನೀಯರ ತ್ಯಾಗ, ಬಲಿದಾನ ಅಡಗಿದೆ. ಅವರ ಕೊಡುಗೆಯನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಸೆಸ್ಕ್ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ಹೇಳಿದರು.ನಗರದ ವಿಜಯನಗರ ೨ನೇ ಹಂತದಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ನಿಗಮ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ರಾಷ್ಟçಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತಿç ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಸ್ವಾತಂತ್ರ÷್ಯ…

Read More

ಮೂರು ದಿನಗಳ ಕ್ರಿಯಾಯೋಗ ಕಾರ್ಯಾಗಾರಕ್ಕೆ ಚಾಲನೆ: “ಸತ್-ಚಿತ್-ಆನಂದದ ಅನುಭವವೇ ಬದುಕಿನ ನಿಜವಾದ ಉದ್ದೇಶ; ಸ್ವಾಮಿ ಶುದ್ಧಾನಂದ ಗಿರಿ

ಮೈಸೂರು: ಯೋಗದ ಸತ್ಸಂಗ ಸೊಸೈಟಿ ಆಫ್ ಇಂಡಿಯಾ ಆಯೋಜಿಸಿರುವ “ಕ್ರಿಯಾಯೋಗ ಯಶಸ್ವಿ ಹಾಗೂ ಆನಂದಮಯ ಜೀವನಕ್ಕೆ ಸಾಧನ” ಎಂಬ ಮೂರು ದಿನಗಳ ಕ್ರಿಯಾಯೋಗ ಕಾರ್ಯಾಗಾರಕ್ಕೆ ಮೈಸೂರಿನ ಗೋವಿಂದ ರಾವ್ ಮೆಮೋರಿಯಲ್ ಹಾಲ್‌ನಲ್ಲಿ ಚಾಲನೆ ನೀಡಲಾಯಿತು.ಸೊಸೈಟಿಯ ಚೆನ್ನೆöÊ ಶಾಖೆಯ ಮುಖ್ಯಸ್ಥರಾದ ಸ್ವಾಮಿ ಶುದ್ಧಾನಂದ ಗಿರಿ ಅವರು ಕಾರ್ಯಾಗಾರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ, “ಸತ್-ಚಿತ್-ಆನಂದವನ್ನು ಅನುಭವಿಸುವುದೇ ಬದುಕಿನ ನಿಜವಾದ ಉದ್ದೇಶ. ಅದನ್ನು ಪಡೆಯಲು ಕ್ರಿಯಾಯೋಗವೇ ಅತ್ಯುತ್ತಮ ಮಾರ್ಗ. ಸಾವಿರಾರು ವರ್ಷಗಳ ಹಿಂದೆ ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ ಬೋಧಿಸಿದ ಕ್ರಿಯಾಯೋಗವೇ ಇದಾಗಿದೆ”…

Read More

ಗಾಂಧೀಜಿಯವರ ತತ್ವಗಳು ಸಾರ್ವಕಾಲಿಕ ಮಾರ್ಗದರ್ಶಿಯಾಗಿವೆ; ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು: ದೇಶದ ಸ್ವಾತಂತ್ರ ಸಂಗ್ರಾಮಕ್ಕೆ ಹೊಸ ದಿಕ್ಸೂಚಿ ನೀಡಿದ ಗಾಂಧೀಜಿಯವರ ತತ್ವಗಳು ಸಾರ್ವಕಾಲಿಕ ಮಾರ್ಗದರ್ಶಿಯಾಗಿವೆ ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.ಗಾಂಧಿ ಜಯಂತಿ ಪ್ರಯುಕ್ತ ಶುಕ್ರವಾರ ಮೈಸೂರಿನ ಗಾಂಧಿ ವೃತ್ತಕ್ಕೆ ಭೇಟಿ ನೀಡಿದ ಅವರು , ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡುವ ಮೂಲಕ ಭಕ್ತಿಪೂರ್ವಕ ಗೌರವ ನಮನ ಸಲ್ಲಿಸಿದರು.ಬಳಿಕ ಮಾತನಾಡಿ ಅಹಿಂಸೆ, ಶಾಂತಿ, ಸತ್ಯ ಹಾಗೂ ಸಾಮಾಜಿಕ ಸಮಾನತೆಯ ಸಿದ್ಧಾಂತಗಳ ಮೂಲಕ ದೇಶದ…

Read More

ಗಾಂಧಿ ಹತ್ಯೆಯ ಸತ್ಯ ನಾಟಕ ರದ್ದುಪಡಿಸಲು ಆಗ್ರಹಿಸಿ ಪ್ರತಿಭಟನೆ

ಮೈಸೂರು: ಮೈಸೂರಿನ ಕಿರುರಂಗಮ0ದಿರದಲ್ಲಿ ಪ್ರದರ್ಶನಕ್ಕೆ ಆಯೋಜಿಸಿರುವ ಗಾಂಧಿ ಹತ್ಯೆಯ ಸತ್ಯ” ನಾಟಕವನ್ನು ಕೂಡಲೇ ರದ್ದುಪಡಿಸಬೇಕು ಎಂದು ಆಗ್ರಹಿಸಿ ಮಾಜಿ ಪಾಲಿಕೆ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು. ರಂಗಭೂಮಿ ಟ್ರಸ್ಟ್ ಕೊಡಗು ವತಿಯಿಂದ ಅಡ್ಡಂಡ ಕಾರ್ಯಪ್ಪ ಅವರ ರಚನೆ ಮತ್ತು ನಿರ್ದೇಶನದಲ್ಲಿ ನಾಟಕ ಪ್ರದರ್ಶನ ಆಯೋಜಿಸಲಾಗಿದೆ. ನಾಟಕದಲ್ಲಿ ಮಹಾತ್ಮ ಗಾಂಧೀಜಿ ಅವರ ಕುರಿತು ಅವಹೇಳನಕಾರಿ ಹಾಗೂ ಆಧಾರರಹಿತ ಹೇಳಿಕೆಗಳನ್ನು ನೀಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸ್ವಾತಂತ್ರ÷್ಯ ಹೋರಾಟದಲ್ಲಿ ಮಹಾತ್ಮ ಗಾಂಧೀಜಿ ಅವರ ಕೊಡುಗೆಯನ್ನು ಅವಮಾನಿಸುವ…

Read More

ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯರಿಂದ ರಾಜಮನೆತನಕ್ಕೆ ದಸರಾ ಆಹ್ವಾನ

ಮೈಸೂರು; ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ: ಯತೀಂದ್ರ ಸಿದ್ದರಾಮಯ್ಯ ಅವರು ಶುಕ್ರವಾರ ಮೈಸೂರಿನ ಅಂಬಾ ವಿಲಾಸ ಅರಮನೆಯಲ್ಲಿ ರಾಜಮಾತೆ ಪ್ರಮೋದ ದೇವಿ ಹಾಗೂ ರಾಜಮನೆತನದ ಕುಟುಂಬದವರು ಮೈಸೂರು ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅಧಿಕೃತವಾಗಿ ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಿದರು.ನಂತರ ಮಾತನಾಡಿ, ಪ್ರತಿ ಬಾರಿಯಂತೆ ಈ ಬಾರಿಯೂ ಜಿಲ್ಲಾ ಉಸ್ತುವಾರಿ ಸಚಿವರಾಗಿ ರಾಜಮನೆತನದ ಮಹಾರಾಜರಿಗೆ ದಸರಾ ಮಹೋತ್ಸವಕ್ಕೆ ಅಧಿಕೃತವಾಗಿ ಆಹ್ವಾನ ನೀಡಿದ್ದಾಗಿ ತಿಳಿಸಿದರು.ರಾಜಮನೆತನದವರು ದಸರಾ ಆಚರಣೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ,…

Read More

ಸಕಲ ಸಿದ್ಧತೆಗಳೊಂದಿಗೆ ದಸರಾಗೆ ಸಜ್ಜಾಗುತ್ತಿದೆ ಕರಾವಳಿಯ ಜಾನಪದ ಕ್ರೀಡೆ ಕಂಬಳ

ಮೈಸೂರು: ವಿಶ್ವ ಪ್ರಸಿದ್ಧ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಮೊದಲ ಬಾರಿಗೆ ವಿಶೇಷವಾಗಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.ಶುಕ್ರವಾರ ದಸರಾ ಮಹೋತ್ಸವದ ಅಂಗವಾಗಿ ನಗರದಲ್ಲಿ ನಡೆದ ಕಂಬಳ ಆಯೋಜನೆಯ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು,ಈ ಬಾರಿಯ ದಸರಾ ಉತ್ಸವಕ್ಕೆ ಹೊಸ ರೂಪ ಮತ್ತು ಸ್ಪರ್ಶ ನೀಡುವ ಉದ್ದೇಶದಿಂದ ಕರಾವಳಿಯ ಜನಪ್ರಿಯ ಜಾನಪದ ಕ್ರೀಡೆಯಾದ ಕಂಬಳವನ್ನು…

Read More

ಎರಡು ದಿನಗಳ ಚಿತ್ರ ಸಂತೆ ಚಾಲನೆ; ನೋಡುಗರ ಕಣ್ಮನ ಸೆಳೆಯುತ್ತಿವೆ ತರಾವರಿ ಚಿತ್ರಗಳು

ಮೈಸೂರು: ವಿಶ್ವ ಪ್ರಸಿದ್ಧ ನಾಡ ಹಬ್ಬ ಮೈಸೂರು ದಸರಾ ಹಿನ್ನಲೆಯಲ್ಲಿ ನಗರದ ಮಾನಸಗಂಗೋತ್ರಿಯ ಕ್ಲಾಕ್ ಟವರ್ ಮುಂಭಾಗಎರಡು ದಿನಗಳ ಕಾಲ ಆಯೋಜಿಸಲಾಗಿರುವ ಚಿತ್ರಸಂತೆ ನೋಡುಗರ ಕಣ್ಮನ ಸೆಳೆಯುತ್ತಿದೆ. ಕಲಾವಿದೆ ಪಲ್ಲವಿ ಜವಳೇಕರ್ (ಸ್ಟಾಲ್ ಸಂಖ್ಯೆ ೨೪) ಅವರು ಶ್ರೀರಂಗಪಟ್ಟಣ, ಸಂತ ಫಿಲೋಮಿನಾ ಚರ್ಚ್, ರೈಲ್ವೆ ನಿಲ್ದಾಣ ಹಾಗೂ ಜಗನ್ಮೋಹನ ಅರಮನೆ ಸೇರಿದಂತೆ ಮೈಸೂರಿನ ಐತಿಹಾಸಿಕ ಸ್ಥಳಗಳ ಸುಂದರ ಪೋಸ್ಟ್ಕಾರ್ಡ್ಗಳನ್ನು ಪ್ರದರ್ಶಿಸಿದ್ದಾರೆ. ಅಲ್ಲದೆ, ಕಾಫಿ ಸ್ಟೇನ್ ಬಳಸಿ ತಯಾರಿಸಿದ ವಿಶೇಷ ಬುಕ್‌ಮಾರ್ಕ್ಗಳು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದ್ದು, ಕಲಾ ಸಂತೆಗೊAದು…

Read More