Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಗಾಂಧಿ ಹತ್ಯೆಯ ಸತ್ಯ ನಾಟಕ ರದ್ದುಪಡಿಸಲು ಆಗ್ರಹಿಸಿ ಪ್ರತಿಭಟನೆ

ಮೈಸೂರು: ಮೈಸೂರಿನ ಕಿರುರಂಗಮ0ದಿರದಲ್ಲಿ ಪ್ರದರ್ಶನಕ್ಕೆ ಆಯೋಜಿಸಿರುವ ಗಾಂಧಿ ಹತ್ಯೆಯ ಸತ್ಯ” ನಾಟಕವನ್ನು ಕೂಡಲೇ ರದ್ದುಪಡಿಸಬೇಕು ಎಂದು ಆಗ್ರಹಿಸಿ ಮಾಜಿ ಪಾಲಿಕೆ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು. ರಂಗಭೂಮಿ ಟ್ರಸ್ಟ್ ಕೊಡಗು ವತಿಯಿಂದ ಅಡ್ಡಂಡ ಕಾರ್ಯಪ್ಪ ಅವರ ರಚನೆ ಮತ್ತು ನಿರ್ದೇಶನದಲ್ಲಿ ನಾಟಕ ಪ್ರದರ್ಶನ ಆಯೋಜಿಸಲಾಗಿದೆ. ನಾಟಕದಲ್ಲಿ ಮಹಾತ್ಮ ಗಾಂಧೀಜಿ ಅವರ ಕುರಿತು ಅವಹೇಳನಕಾರಿ ಹಾಗೂ ಆಧಾರರಹಿತ ಹೇಳಿಕೆಗಳನ್ನು ನೀಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸ್ವಾತಂತ್ರ÷್ಯ ಹೋರಾಟದಲ್ಲಿ ಮಹಾತ್ಮ ಗಾಂಧೀಜಿ ಅವರ ಕೊಡುಗೆಯನ್ನು ಅವಮಾನಿಸುವ…

Read More

ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯರಿಂದ ರಾಜಮನೆತನಕ್ಕೆ ದಸರಾ ಆಹ್ವಾನ

ಮೈಸೂರು; ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ: ಯತೀಂದ್ರ ಸಿದ್ದರಾಮಯ್ಯ ಅವರು ಶುಕ್ರವಾರ ಮೈಸೂರಿನ ಅಂಬಾ ವಿಲಾಸ ಅರಮನೆಯಲ್ಲಿ ರಾಜಮಾತೆ ಪ್ರಮೋದ ದೇವಿ ಹಾಗೂ ರಾಜಮನೆತನದ ಕುಟುಂಬದವರು ಮೈಸೂರು ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅಧಿಕೃತವಾಗಿ ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಿದರು.ನಂತರ ಮಾತನಾಡಿ, ಪ್ರತಿ ಬಾರಿಯಂತೆ ಈ ಬಾರಿಯೂ ಜಿಲ್ಲಾ ಉಸ್ತುವಾರಿ ಸಚಿವರಾಗಿ ರಾಜಮನೆತನದ ಮಹಾರಾಜರಿಗೆ ದಸರಾ ಮಹೋತ್ಸವಕ್ಕೆ ಅಧಿಕೃತವಾಗಿ ಆಹ್ವಾನ ನೀಡಿದ್ದಾಗಿ ತಿಳಿಸಿದರು.ರಾಜಮನೆತನದವರು ದಸರಾ ಆಚರಣೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ,…

Read More

ಸಕಲ ಸಿದ್ಧತೆಗಳೊಂದಿಗೆ ದಸರಾಗೆ ಸಜ್ಜಾಗುತ್ತಿದೆ ಕರಾವಳಿಯ ಜಾನಪದ ಕ್ರೀಡೆ ಕಂಬಳ

ಮೈಸೂರು: ವಿಶ್ವ ಪ್ರಸಿದ್ಧ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಮೊದಲ ಬಾರಿಗೆ ವಿಶೇಷವಾಗಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.ಶುಕ್ರವಾರ ದಸರಾ ಮಹೋತ್ಸವದ ಅಂಗವಾಗಿ ನಗರದಲ್ಲಿ ನಡೆದ ಕಂಬಳ ಆಯೋಜನೆಯ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು,ಈ ಬಾರಿಯ ದಸರಾ ಉತ್ಸವಕ್ಕೆ ಹೊಸ ರೂಪ ಮತ್ತು ಸ್ಪರ್ಶ ನೀಡುವ ಉದ್ದೇಶದಿಂದ ಕರಾವಳಿಯ ಜನಪ್ರಿಯ ಜಾನಪದ ಕ್ರೀಡೆಯಾದ ಕಂಬಳವನ್ನು…

Read More

ಎರಡು ದಿನಗಳ ಚಿತ್ರ ಸಂತೆ ಚಾಲನೆ; ನೋಡುಗರ ಕಣ್ಮನ ಸೆಳೆಯುತ್ತಿವೆ ತರಾವರಿ ಚಿತ್ರಗಳು

ಮೈಸೂರು: ವಿಶ್ವ ಪ್ರಸಿದ್ಧ ನಾಡ ಹಬ್ಬ ಮೈಸೂರು ದಸರಾ ಹಿನ್ನಲೆಯಲ್ಲಿ ನಗರದ ಮಾನಸಗಂಗೋತ್ರಿಯ ಕ್ಲಾಕ್ ಟವರ್ ಮುಂಭಾಗಎರಡು ದಿನಗಳ ಕಾಲ ಆಯೋಜಿಸಲಾಗಿರುವ ಚಿತ್ರಸಂತೆ ನೋಡುಗರ ಕಣ್ಮನ ಸೆಳೆಯುತ್ತಿದೆ. ಕಲಾವಿದೆ ಪಲ್ಲವಿ ಜವಳೇಕರ್ (ಸ್ಟಾಲ್ ಸಂಖ್ಯೆ ೨೪) ಅವರು ಶ್ರೀರಂಗಪಟ್ಟಣ, ಸಂತ ಫಿಲೋಮಿನಾ ಚರ್ಚ್, ರೈಲ್ವೆ ನಿಲ್ದಾಣ ಹಾಗೂ ಜಗನ್ಮೋಹನ ಅರಮನೆ ಸೇರಿದಂತೆ ಮೈಸೂರಿನ ಐತಿಹಾಸಿಕ ಸ್ಥಳಗಳ ಸುಂದರ ಪೋಸ್ಟ್ಕಾರ್ಡ್ಗಳನ್ನು ಪ್ರದರ್ಶಿಸಿದ್ದಾರೆ. ಅಲ್ಲದೆ, ಕಾಫಿ ಸ್ಟೇನ್ ಬಳಸಿ ತಯಾರಿಸಿದ ವಿಶೇಷ ಬುಕ್‌ಮಾರ್ಕ್ಗಳು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದ್ದು, ಕಲಾ ಸಂತೆಗೊAದು…

Read More

ಗ್ರಾಮ ಆಡಳಿತ ಅಧಿಕಾರಿಗಳ ಪರೀಕ್ಷಾ ಅಭ್ಯರ್ಥಿಗಳ ಉಪಯೋಗಕ್ಕಾಗಿ ಎರಡನೇ ಉಚಿತ ಅಣುಕು ಪರೀಕ್ಷೆ

ಮೈಸೂರು; ನಗರ ಕೇಂದ್ರ ಗ್ರಂಥಾಲಯದ ಮೈಸೂರು ಹಾಗೂ ಬೆಂಗಳೂರಿನ ಜ್ಞಾನ ಗಂಗೋತ್ರಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ಸಂಯುಕ್ತಾಶ್ರಯದಲ್ಲಿ ಗುರುವಾರ ಗ್ರಾಮ ಆಡಳಿತ ಅಧಿಕಾರಿಗಳ ಪರೀಕ್ಷಾ ಅಭ್ಯರ್ಥಿಗಳ ಉಪಯೋಗಕ್ಕಾಗಿ ಎರಡನೇ ಉಚಿತ ಅಣುಕು ಪರೀಕ್ಷೆಯನ್ನು ಮೈಸೂರಿನ ಪೀಪಲ್ಸ್ ಪಾರ್ಕ್ ಗ್ರಂಥಾಲಯದ ಕಿರು ಸಭಾಂಗಣದಲ್ಲಿ ನಡೆಸಲಾಯಿತು. ಪರೀಕ್ಷೆಗೆ ೫೦ಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದರು. ಬೆಳಿಗ್ಗೆ ೧೦:೩೦ ರಿಂದ ೧೨:೩೦ ರವರೆಗೆ ಸಾಮಾನ್ಯ ಜ್ಞಾನ ಪತ್ರಿಕೆಯನ್ನು ಮಧ್ಯಾಹ್ನ ೨ ರಿಂದ ೪ ಗಂಟೆವರೆಗೆ, ಭಾಷಾಜ್ಞಾನ ಹಾಗೂ ಕಂಪ್ಯೂಟರ್ ಜ್ಞಾನ ಪತ್ರಿಕೆಗೆ…

Read More

ಕ್ರೀಡೆ ಕೇವಲ ಸೋಲು ಗೆಲುವಿನ ಆಟವಲ್ಲ, ವಿದ್ಯಾರ್ಥಿಗಳಲ್ಲಿ ಶಿಸ್ತು, ಏಕಾಗ್ರತೆಯನ್ನು ಬೆಳೆಸುವ ಜೀವನದ ಪಾಠ

ನಂಜನಗೂಡು; ಕ್ರೀಡೆ ಕೇವಲ ಸೋಲು ಗೆಲುವಿನ ಆಟವಲ್ಲ, ವಿದ್ಯಾರ್ಥಿಗಳಲ್ಲಿ ಶಿಸ್ತು, ಏಕಾಗ್ರತೆಯನ್ನು ಬೆಳೆಸುವ ಜೀವನದ ಪಾಠದ ಜೊತೆಗೆ ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಹೇಳಿದರು.   ಅವರು ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ತಾಲೂಕು ಶಿಕ್ಷಣ ಇಲಾಖೆ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಏರ್ಪಡಿಸಲಾಗಿದ್ದ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.    ಕ್ರೀಡಾಕೂಟ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಜೊತೆಗೆ, ಎಲ್ಲರೊಡನೆ ಒಂದಾಗಿ ಬೆರೆಯಲು…

Read More

ಸಾಂಕ್ರಾಮಿಕ ರೋಗ ತಡೆಗಟ್ಟುವಲ್ಲಿ ಪೌರಕಾರ್ಮಿಕರ ಪಾತ್ರ ಅಮೂಲ್ಯ: ಬಿ.ಎಂ.ಸವಿತಾ

ಮೈಸೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಗ್ರಾಮಗಳನ್ನು ನೈರ್ಮಲ್ಯವಾಗಿರಿಸಿ ಸಾಂಕ್ರಾಮಿಕ ತಡೆಗಟ್ಟುವಲ್ಲಿ ಮುಂಚೂಣಿ ಹೋರಾಟಗಾರರಾದ ಪೌರಕಾರ್ಮಿಕರ ಪಾತ್ರ ಅಮೂಲ್ಯವಾದದ್ದು ಎಂದು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಬಿ.ಎಂ.ಸವಿತಾ ತಿಳಿಸಿದರು.ನಗರದ ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪೌರಕಾರ್ಮಿಕರು ಸ್ವಚ್ಛತೆಯೆಂಬ ಮಹತ್ವದ ಕೆಲಸ ನಿರ್ವಹಿಸುವ ಶ್ರಮಿಕ ಜೀವಿಗಳು ಎಂದು ಅಭಿಪ್ರಾಯಪಟ್ಟರು.ಸರ್ಕಾರದ ಮಾರ್ಗಸೂಚಿ ಅನ್ವಯ ಪೌರಕಾರ್ಮಿಕರಿಗೆ ದೊರಕುವ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲಾಗುತ್ತಿದೆ. ಮಾನವೀಯತೆಯೊಂದಿಗೆ ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು.ಕಾರ್ಯನಿರ್ವಾಹಕ ಅಧಿಕಾರಿ…

Read More

ವಿಜಯ ವಿಠಲ ಪಿ.ಯು. ಕಾಲೇಜಿನ ವಿದ್ಯಾರ್ಥಿ ಕರ್ನಾಟಕ ಕ್ರಿಕೆಟ್ ತಂಡಕ್ಕೆ ಆಯ್ಕೆ

ಮೈಸೂರು; ಇಲ್ಲಿನ ವಿಜಯ ವಿಠಲ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವರುಣ್ ಪಟೇಲ್ ಅವರು ಬಿ.ಸಿ.ಸಿ.ಐ. ವಿನು ಮಂಕಟ್ ಟ್ರೋಫಿಯಲ್ಲಿ ಭಾಗವಹಿಸುವ ಕರ್ನಾಟಕ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇವರು ಅ. ೮ ರಿಂದ ೧೬ರವರೆಗೆ ವೈe಼Áಗ್‌ನಲ್ಲಿ ನಡೆಯುವ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ. ಇವರು ಮೈಸೂರಿನ ಶಿಕ್ಷಕ ಲೋಕೇಶ್ ಮತ್ತು ಪ್ರತಿಮಾ ರವರ ಪುತ್ರ. ವಿದ್ಯಾರ್ಥಿಯನ್ನು ಆಡಳಿತ ಮಂಡಳಿ, ಕಾಲೇಜಿನ ಪ್ರಾಚಾರ್ಯರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

Read More

ಒಕ್ಕಲಿಗ ಯುವ ಬ್ರಿಗೇಡಿನ ಸೇವೆಗಳು ಯುವಜನರಿಗೆ ದಾರಿದೀಪ ; ಸುತ್ತೂರು ಶ್ರೀ 

ಪಿರಿಯಾಪಟ್ಟಣ : ಒಕ್ಕಲಿಗ ಯುವ ಬ್ರಿಗೇಡ್ ನ ಸಾಮಾಜಿಕ ಸೇವೆಗಳು ಇತರರಿಗೆ ಮಾದರಿಯಾಗಿದೆ ಎಂದು ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಶಿವ ಶಂಕರೇಗೌಡ ತಿಳಿಸಿದರು. ಪಟ್ಟಣದ ಮಾನಸ ವಿದ್ಯಾ ಸಂಸ್ಥೆಯ ಆವರಣದಲ್ಲಿ ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ಹಮ್ಮಿಕೊಂಡಿದ್ದ ಉದ್ಯೋಗ ಮೇಳ ಹಾಗೂ ಮಲೆನಾಡು ಗಿಡ್ಡಗಳ ವಿತರಣಾ ಕಾರ್ಯಕ್ರಮ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಪ್ರತಿಭಾವಂತರ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಮಾಜದಲ್ಲಿ ತಮ್ಮ ಕಾರ್ಯಗಳ ಮೂಲಕ ಒಕ್ಕಲಿಗ ಯುವ ಬ್ರಿಗೇಡ್ ತನ್ನದೇ…

Read More

ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ರಕ್ತದಾನಿಗಳಿಗೆ ಗೌರವ ಸಮರ್ಪಣೆ

ಮೈಸೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮೈಸೂರು, ಜಿಲ್ಲಾ ಏಡ್ಸ್ ಪ್ರಬೋಧನ ಮತ್ತು ನಿಯಂತ್ರಣ ಘಟಕ, ಮೈಸೂರು, ಎಂ.ಎA.ಕೆ ಮತ್ತು ಎಸ್.ಡಿ.ಎಂ ಮಹಿಳಾ ಮಹಾವಿದ್ಯಾಲಯ, ಮೈಸೂರು ಹಾಗೂ ಲಯನ್ಸ್ ಬ್ಲಡ್ ಸೆಂಟರ್ ಜೀವಧಾರ ಇವರ ಸಹಯೋಗದಲ್ಲಿ ರಾಷ್ಟಿçÃಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ-೨೦೨೬ ಅನ್ನು ಕೃಷ್ಣಮೂರ್ತಿಪುರಂನಲ್ಲಿರುವ ಎಂ.ಎA.ಕೆ ಮತ್ತು ಎಸ್.ಡಿ.ಎಂ ಮಹಿಳಾ ಮಹಾವಿದ್ಯಾಲಯದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ಹೆಚ್ಚು ಬಾರಿ ಸ್ವಯಂ ಪ್ರೇರಿತ ರಕ್ತದಾನ ಮಾಡಿದ ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿ ಅನಿತಾ ಪಿ. ಜಯರಾಮ್…

Read More