ಮಹಾಜನ ಕಾಲೇಜಿನಲ್ಲಿ ‘71ನೇ ಕನ್ನಡ ರಾಜ್ಯೋತ್ಸವ ಆಚರಣೆ’
ಮೈಸೂರು; ನಗರದ ಎಸ್.ಬಿ.ಆರ್.ಆರ್. ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.ಈ ವೇಳೆ ಕಾಲೇಜಿನ ನೂತನ ಪ್ರಾಂಶುಪಾಲರಾದ ಡಾ. ಪುಷ್ಪರಾಣಿ ಪಿ.ಜಿ. ಮಾತನಾಡಿ, ಇಂದಿನ ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಹೆಚ್ಚಾಗಿ ಬಳಕೆ ಮಾಡುವುದರ ಮೂಲಕ ಕನ್ನಡವನ್ನು ಉಳಿಸಿ ಬೆಳೆಸಬೇಕೆಂದು ಹೇಳಿದರು. ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕಿರುವ ಪರಂಪರೆ ಮತ್ತು ಇತಿಹಾಸವನ್ನು ಕಾಪಾಡಿಕೊಳ್ಳುವುದು ಕನ್ನಡಿಗರ ಆದ್ಯಕರ್ತವ್ಯವಾಗಿದೆ ಎಂದರು. ಇಂದಿನ ನವತಂತ್ರಜ್ಞಾನ ಯುಗದಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯದ ಅಸ್ತಿತ್ವವನ್ನು ಸ್ಥಳಿಯವಾಗಿ ಮತ್ತು ಜಾಗತಿಕವಾಗಿ ಉಳಿಸುವಲ್ಲಿ ಕನ್ನಡಿಗರೆಲ್ಲರೂ…